Delhi Blast: ದೆಹಲಿ ಸ್ಫೋಟವನ್ನು "ಭಯೋತ್ಪಾದಕ ಕೃತ್ಯ" ಎಂದು ಘೋಷಿಸಿದ ಕೇಂದ್ರ ಸರ್ಕಾರ
ದೆಹಲಿ ಕೆಂಪು ಕೋಟೆಯ ಹೊರಗೆ ನಡೆದ ಕಾರು ಸ್ಫೋಟವನ್ನು "ದೇಶ ವಿರೋಧಿ ಶಕ್ತಿಗಳು" ನಡೆಸಿದ "ಭಯೋತ್ಪಾದಕ ಘಟನೆ" ಎಂದು ಭಾರತ ಸರ್ಕಾರ ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು, ಈ ಕಾರು ಸ್ಫೋಟ ಸೇರಿದಂತೆ ಭಯೋತ್ಪಾದಕ ಘಟನೆಯಲ್ಲಿ ಸಂಭವಿಸಿದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದೆ. ಅಮಾಯಕ ಜೀವಗಳನ್ನು ಕಳೆದುಕೊಂಡವರಿಗೆ ಗೌರವ ಸಲ್ಲಿಸಲು ಸಚಿವ ಸಂಪುಟ ಎರಡು ನಿಮಿಷಗಳ ಮೌನಾಚರಣೆ ಮಾಡಲಾಯಿತು. ದೆಹಲಿ ಸ್ಫೋಟವನ್ನು ಖಂಡಿಸಿದ ಕೇಂದ್ರ ಸಚಿವ ಸಂಪುಟವು ಅಪರಾಧಿಗಳನ್ನು ಶಿಕ್ಷಿಸಲು ತ್ವರಿತ ತನಿಖೆಗೆ ಕರೆ ನೀಡಿದೆ. ಭಯೋತ್ಪಾದನೆಯ ಕೃತ್ಯವನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.
ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆಯ ನೀತಿಗೆ ಭಾರತದ ಅಚಲ ಬದ್ಧತೆಯನ್ನು ಸಂಪುಟ ಪುನರುಚ್ಚರಿಸುತ್ತದೆ. ಘಟನೆಯ ತನಿಖೆಯನ್ನು ಅತ್ಯಂತ ತುರ್ತಾಗಿ ಮತ್ತು ವೃತ್ತಿಪರತೆಯಿಂದ ಮುಂದುವರಿಸಬೇಕೆಂದು ಸಚಿವ ಸಂಪುಟ ನಿರ್ದೇಶಿಸಿದೆ. ಇದರಿಂದಾಗಿ ಅಪರಾಧಿಗಳು, ಅವರ ಸಹಯೋಗಿಗಳು ಮತ್ತು ಅವರ ಪ್ರಾಯೋಜಕರನ್ನು ಗುರುತಿಸಿ ವಿಳಂಬವಿಲ್ಲದೆ ನ್ಯಾಯದ ಕಟಕಟೆಗೆ ತರಲಾಗುತ್ತದೆ. ಸರ್ಕಾರದ ಉನ್ನತ ಮಟ್ಟದಲ್ಲಿ ಪರಿಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಹೇಳಿದೆ.

ಕೆಂಪು ಕೋಟೆಯ ಹೊರಗೆ ನಡೆದ ಕಾರು ಸ್ಫೋಟವನ್ನು "ಭಯೋತ್ಪಾದಕ ಘಟನೆ" ಎಂದು ಪರಿಗಣಿಸಿರುವ ಕೇಂದ್ರ ಸರ್ಕಾರ, ಅಪರಾಧಿಗಳು ಮತ್ತು ಅವರ ಪ್ರಾಯೋಜಕರನ್ನು ವಿಳಂಬವಿಲ್ಲದೆ ನ್ಯಾಯಕ್ಕೆ ತರಲು ಪ್ರಕರಣವನ್ನು ಅತ್ಯಂತ ತುರ್ತಾಗಿ ಮತ್ತು ವೃತ್ತಿಪರತೆಯಿಂದ ನಿಭಾಯಿಸುವಂತೆ ತನಿಖಾ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ.
ಸಂಪುಟ ಸಭೆಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್, "ಕೆಂಪು ಕೋಟೆ ಬಳಿ ನಡೆದ ಕಾರು ಸ್ಫೋಟವನ್ನು ಸರ್ಕಾರ "ಭಯೋತ್ಪಾದಕ ಘಟನೆ' ಎಂದು ಕರೆಯುತ್ತದೆ. ಕೇಂದ್ರ ಸಚಿವ ಸಂಪುಟವು ಈ ನಿರ್ಣಯವನ್ನು ಅಂಗೀಕರಿಸಿದೆ. ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸುತ್ತದೆ ಎಂದು ಹೇಳಿದ್ದಾರೆ. ದೆಹಲಿ ಸ್ಫೋಟದ ತನಿಖೆಯನ್ನು ಅತ್ಯಂತ ತುರ್ತಾಗಿ ಮತ್ತು ವೃತ್ತಿಪರತೆಯಿಂದ ಮುಂದುವರಿಸಬೇಕೆಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಸರ್ಕಾರದ ಉನ್ನತ ಮಟ್ಟದಲ್ಲಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ರಾಷ್ಟ್ರೀಯ ಭದ್ರತೆ ಮತ್ತು ಪ್ರತಿಯೊಬ್ಬ ನಾಗರಿಕರ ಸುರಕ್ಷತೆಗೆ ಅದರ ನಿರಂತರ ಬದ್ಧತೆಗೆ ಅನುಗುಣವಾಗಿ, ಎಲ್ಲ ಭಾರತೀಯರ ಜೀವನ ಮತ್ತು ಯೋಗಕ್ಷೇಮವನ್ನು ಕಾಪಾಡುವ ಸರ್ಕಾರದ ದೃಢ ನಿರ್ಧಾರವನ್ನು ಸಂಪುಟ ಪುನರುಚ್ಚರಿಸುತ್ತದೆ ಎಂದು ಹೇಳಿದ್ದಾರೆ. ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ 12 ಜನರು ಸಾವನ್ನಪ್ಪಿದ ಘಟನೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಬುಧವಾರ ಸಂಜೆ ತಮ್ಮ ನಿವಾಸದಲ್ಲಿ ಉನ್ನತ ಮಟ್ಟದ ಭದ್ರತಾ ಸಭೆ ಕರೆದಿದ್ದರು.
ಶಂಕಿತನ ಮತ್ತೊಂದು ಕಾರು ವಶ
ಕೆಂಪು ಕೋಟೆ ಬಳಿ ಹುಂಡೈ i20 ಕಾರು ಸ್ಫೋಟಗೊಂಡಿದ್ದು, ಇದರ ಮೂಲ ಕೆದಕಿದಾಗ ಮತ್ತೊಂದು ಕಾರು ಪತ್ತೆಯಾಗಿದೆ. ಫರಿದಾಬಾದ್ ಪೊಲೀಸರು ದೆಹಲಿ ಸ್ಫೋಟ ಪ್ರಕರಣದ ಪ್ರಮುಖ ಶಂಕಿತ ಡಾ. ಉಮರ್ ಉನ್ ನಬಿಯೊಂದಿಗೆ ಸಂಬಂಧ ಹೊಂದಿದ್ದಾರೆಂದು ಶಂಕಿಸಲಾದ ಕೆಂಪು ಬಣ್ಣದ ಇಕೋಸ್ಪೋರ್ಟ್ DL 10 CK 0458 ನೋಂದಣಿ ಸಂಖ್ಯೆಯ ಕಾರನ್ನು ವಶಪಡಿಸಿಕೊಂಡಿದ್ದಾರೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications