Delhi Elections 2025: 'ಕೇಜ್ರಿವಾಲ್ ಕಿ ಗ್ಯಾರಂಟಿ' : ಉದ್ಯೋಗ, ಉಚಿತ ನೀರು, ವಿದ್ಯುತ್ ಸೇರಿ 15 ಗ್ಯಾರಂಟಿ ಭರವಸೆ
ನವದೆಹಲಿ, ಜನವರಿ 27: ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ (ಜನವರಿ 27, 2025) ದೆಹಲಿ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷದ ಪ್ರಣಾಳಿಕೆಯನ್ನು 'ಕೇಜ್ರಿವಾಲ್ ಕಿ ಗ್ಯಾರಂಟಿ' (ಕೇಜ್ರಿವಾಲ್ ಗ್ಯಾರಂಟಿ) ಎಂದು ಘೋಷಿಸಿದರು. ಮುಂದಿನ ಐದು ವರ್ಷಗಳಲ್ಲಿ ಈ ಭರವಸೆಗಳನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು. .
ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಅವರು 15 ಗ್ಯಾರಂಟಿಗಳನ್ನು ಒಳಗೊಂಡ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದ್ದಾರೆ. ದೆಹಲಿಯಲ್ಲಿ ನಮ್ಮ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಯುವಕರಿಗೆ ಉದ್ಯೋಗ, ಮಹಿಳಾ ಸಮ್ಮಾನ್ ಯೋಜನೆ, ಹಿರಿಯ ನಾಗರಿಕರಿಗೆ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ , ದಲಿತ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ವ್ಯಾಸಂಗ ಮಾಡಲು ವಿದ್ಯಾರ್ಥಿ ವೇತನ, ಉಚಿತ ನೀರು ನೀಡುವುದು ಪ್ರಣಾಳಿಕೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಅಂಕಿಅಂಶಗಳ ಪ್ರಕಾರ, ದೆಹಲಿಯು ಅತ್ಯಂತ ಕಡಿಮೆ ನಿರುದ್ಯೋಗವನ್ನು ಹೊಂದಿದೆ. ರಾಷ್ಟ್ರೀಯ ಮಟ್ಟದ ನಿರುದ್ಯೋಗವು 6% ಆದರೆ ದೆಹಲಿಯಲ್ಲಿ ಅದು 2% ಆಗಿದೆ. ದೆಹಲಿಯಲ್ಲಿ ನಿರುದ್ಯೋಗಿಗಳು ಯಾರೂ ಇಲ್ಲ ಎಂದು ನಾವು ಬಯಸುತ್ತೇವೆ. ದೆಹಲಿಯಲ್ಲಿ ಪ್ರತಿಯೊಬ್ಬ ಯುವಕರಿಗೆ ಉದ್ಯೋಗ ನೀಡಲು ನಾವು ಯೋಜನೆ ರೂಪಿಸುತ್ತಿದ್ದೇವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಇನ್ನೂ ಮಹಿಳಾ ಸಮ್ಮಾನ್ ಯೋಜನೆಯಡಿ ಪ್ರತಿ ಮಹಿಳೆಯ ಬ್ಯಾಂಕ್ ಖಾತೆಗೆ ತಿಂಗಳಿಗೆ ₹2,100 ಹಣ ಜಮಾ ಮಾಡಲಾಗುವುದು ಎಂದು ಹೇಳಿದರು .
ಸಂಜೀವನಿ ಯೋಜನೆಯಡಿ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ದೊರೆಯಲಿದೆ ಎಂದರು. 24 ಗಂಟೆ ನೀರು ಕೊಡುತ್ತೇವೆ ಎಂದು ಹೇಳಿದ್ದೆವು. ಯಮುನಾ ನದಿಯನ್ನು ಸ್ವಚ್ಛಗೊಳಿಸುತ್ತೇವೆ ಎಂದು ಹೇಳಿದ್ದೆವು. ದೆಹಲಿಯಲ್ಲಿ ಯುರೋಪಿಯನ್ ಗುಣಮಟ್ಟದ ರಸ್ತೆಗಳನ್ನು ಮಾಡುತ್ತೇವೆ ಎಂದು ಹೇಳಿದ್ದೆವು. ಆದರೆ ಈ ಮೂರು ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಿಲ್ಲ. ಎರಡೂವರೆ ವರ್ಷಗಳ ಕಾಲ COVID-19 ಸಾಂಕ್ರಾಮಿಕ ರೋಗವಿತ್ತು ಮತ್ತು ನಂತರ ನಮ್ಮನ್ನು ನಕಲಿ ಪ್ರಕರಣಗಳಲ್ಲಿ ಜೈಲಿಗೆ ಹಾಕಲಾಯಿತು. ಮುಂದಿನ ಐದು ವರ್ಷಗಳಲ್ಲಿ ಈ ಮೂರು ಭರವಸೆಗಳನ್ನು ಈಡೇರಿಸುತ್ತೇವೆ. ಇದಕ್ಕಾಗಿ ನಾವು ಹಣ ಮತ್ತು ಸಂಪೂರ್ಣ ಯೋಜನೆಗಳನ್ನು ಹೊಂದಿದ್ದೇವೆ ಎಂದು ಕೇಜ್ರಿವಾಲ್ ಹೇಳಿದರು.
ದಲಿತ ವಿದ್ಯಾರ್ಥಿಗಳಿಗೆ ವಿದೇಶದ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆಯಲು ಸಹಾಯ ಮಾಡುವ ಅಂಬೇಡ್ಕರ್ ವಿದ್ಯಾರ್ಥಿವೇತನ ಯೋಜನೆ - ಅವರ ವೆಚ್ಚವನ್ನು ದೆಹಲಿ ಸರ್ಕಾರ ಭರಿಸಲಿದೆ. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಮತ್ತು ದೆಹಲಿ ಮೆಟ್ರೋದಲ್ಲಿ 50% ರಿಯಾಯಿತಿ, ಅರ್ಚಕರಿಗೆ ತಿಂಗಳಿಗೆ ₹ 18,000 ಮತ್ತು ಅನುದಾನವನ್ನು ಸಹ ಘೋಷಿಸಲಾಗಿದೆ. ಉಚಿತ ನೀರು ಮತ್ತು ವಿದ್ಯುತ್ ಪ್ರಯೋಜನಗಳನ್ನು ಬಾಡಿಗೆದಾರರಿಗೆ ವಿಸ್ತರಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದರು.
ಪಡಿತರ ಚೀಟಿಗಳ ವಿತರಣೆಯನ್ನು ಪುನಃ ಪ್ರಾರಂಭಿಸಲಾಗುವುದು ಎಂದು ಕೇಜ್ರಿವಾಲ್ ತಿಳಿಸಿದ್ದು, ಆಟೋ ಚಾಲಕರಿಗೆ ಅವರ ಹೆಣ್ಣು ಮಕ್ಕಳ ಮದುವೆಗೆ ₹1 ಲಕ್ಷ, ಮಕ್ಕಳಿಗೆ ಉಚಿತ ತರಬೇತಿ, ₹10 ಲಕ್ಷ ಉಚಿತ ಜೀವ ವಿಮೆ ಹಾಗೂ ₹5 ಲಕ್ಷ ಆರೋಗ್ಯ ವಿಮೆ ನೀಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.
ಇನ್ನೂ ಕೇಜ್ರಿವಾಲ್ ಅವರು ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ಪಕ್ಷವು ಎಎಪಿಯ ಗ್ಯಾರಂಟಿ ಆಧಾರಿತ ಆಡಳಿತವನ್ನು ನಕಲು ಮಾಡಿದೆ ಎಂದು ಆರೋಪಿಸಿದರು. ನಾವು ದೇಶದಲ್ಲಿ ಮೊದಲು 'ಗ್ಯಾರಂಟಿ' ಎಂಬ ಪದವನ್ನು ರಚಿಸಿದ್ದೇವೆ. ನಮ್ಮ ನಂತರ ಬಿಜೆಪಿಯವರು ಅದನ್ನು ಕದ್ದಿದ್ದಾರೆ, ಆದರೆ ವ್ಯತ್ಯಾಸವೆಂದರೆ, ನಾವು ನಮ್ಮ ಭರವಸೆಗಳನ್ನು ಪೂರೈಸುತ್ತೇವೆ ಮತ್ತು ಅವರು ಮಾಡುವುದಿಲ್ಲ ಎಂದು ಹೇಳಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications