Delhi Election 2025: ಚುನಾವಣೋತ್ತರ ಸಮೀಕ್ಷೆಯನ್ನ ತಿರಸ್ಕರಿಸಿದ ಎಎಪಿ
ನವದೆಹಲಿ, ಫೆಬ್ರವರಿ 06: ದೆಹಲಿ ಎಕ್ಸಿಟ್ ಪೋಲ್ ಅಚ್ಚರಿಯ ಫಲಿತಾಂಶಗಳು ಪ್ರಕಟವಾಗಿವೆ. ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ನಿನ್ನೆ(ಫೆಬ್ರವರಿ 05) ಪೂರ್ಣಗೊಂಡ ಬೆನ್ನಲ್ಲೇ ಪ್ರಕಟವಾಗಿರುವ ಚುನಾವಣೋತ್ತರ ಸಮೀಕ್ಷೆ ಫಲಿತಾಂಶಗಳು ಎಎಪಿ ಗೆ ಬಿಗ್ ಶಾಕ್ ನೀಡಿವೆ.
27 ವರ್ಷಗಳ ಬಳಿಕ ಬಿಜೆಪಿ ದೆಹಲಿಯಲ್ಲಿ ಅಧಿಕಾರ ಹಿಡಿಯವ ಸುಳಿವು ನೀಡಿವೆ. ಇನ್ನೊಂದೆಡೆ, ಎರಡು ಅವಧಿಗೆ ದೆಹಲಿಯ ಆಡಳಿತ ಚುಕ್ಕಾಣಿ ಹಿಡಿದು ದೆಹಲಿ ಮತದಾರರನ್ನು ಒಲಿಸುವಂತೆ ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸಿದ್ದ ಆಮ್ ಆದ್ಮ ಪಾರ್ಟಿಗೆ ಈ ಬಾರಿ ದೊಡ್ಡ ಸಂಕಷ್ಟ ಹೆಚ್ಚಾಗಿದೆ. ಎರಡು ಅವಧಿಗೆ ವಿಪಕ್ಷವೇ ಇಲ್ಲದಂತೆ ಬಹುಮತ ಪಡೆದಿದ್ದ ಆಮ್ ಆದ್ಮ ಪಾರ್ಟಿಗೆ ಈ ಬಾರಿ ಬಿಜೆಪಿಯಿಂದ ಭಾರಿ ಪೈಪೋಟಿ ಎದುರಾಗುವ ಸುಳಿವನ್ನು ದೆಹಲಿಯ ಎಕ್ಸಿಟ್ ಪೋಲ್ ಫಲಿತಾಂಶಗಳು ನೀಡಿವೆ.

ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಪೂರ್ಣಗೊಂಡ ಬೆನ್ನಲ್ಲೇ ಪ್ರಕಟವಾಗಿರುವ ಚುನಾವಣೋತ್ತರ ಸಮೀಕ್ಷೆ ಫಲಿತಾಂಶವನ್ನು ಆಮ್ ಆದ್ಮಿ ಪಕ್ಷ (ಎಎಪಿ) ತಿರಸ್ಕರಿಸಿದೆ. ಮತದಾರರು ಐತಿಹಾಸಿಕವಾಗಿ ತಮ್ಮ ಕಾರ್ಯಕ್ಷಮತೆಯನ್ನು ಕಡಿಮೆ ಅಂದಾಜಿಸಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಈ ಭವಿಷ್ಯವಾಣಿಗಳು ಸಾರ್ವಜನಿಕರ ಬದಲಾವಣೆಯ ಬಯಕೆಯನ್ನು ಪ್ರತಿಬಿಂಬಿಸುತ್ತವೆ ಎಂದು ಹೇಳಿಕೊಂಡಿದೆ.
ದೆಹಲಿ 70 ವಿಧಾನಸಭೆ ಕ್ಷೇತ್ರಗಳ ಚುನಾವಣಾ ಮತದಾನ ಬುಧವಾರ ಸಂಜೆ 6 ಗಂಟೆಗೆ ಮುಕ್ತಾಯಗೊಂಡಿದ್ದು, ಹೆಚ್ಚಿನ ಸಮೀಕ್ಷೆಗಳು ಆಡಳಿತಾರೂಢ ಎಎಪಿಗಿಂತ ಬಿಜೆಪಿ ಮುನ್ನಡೆ ಸಾಧಿಸುತ್ತದೆ ಎಂದು ಭವಿಷ್ಯ ನುಡಿದಿವೆ.
ಬುಧವಾರ ಸಂಜೆ 7 ಗಂಟೆಯವರೆಗೆ ಶೇ. 57.89 ರಷ್ಟು ಮತದಾನ ದಾಖಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವರಾದ ಎಸ್ ಜೈಶಂಕರ್, ಹರ್ದೀಪ್ ಸಿಂಗ್ ಪುರಿ, ದೆಹಲಿ ಮುಖ್ಯಮಂತ್ರಿ ಅತಿಶಿ, ಎಎಪಿ ಮುಖ್ಯಸ್ಥೆ ಅರವಿಂದ್ ಕೇಜ್ರಿವಾಲ್, ಹಿರಿಯ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ ಚಲಾಯಿಸಿದ್ದಾರೆ.
ಪಿ ಮಾರ್ಕ್ ಸಮೀಕ್ಷೆ ಹೇಳಿದ್ದೇನು?
ದೆಹಲಿ ವಿಧಾನಸಭಾ ಚುನಾವಣೆಯು 70 ಕ್ಷೇತ್ರಗಳಲ್ಲಿ ನಡೆದಿದ್ದು, ಬುಧವಾರ ಮತದಾನ ಕೂಡ ಪೂರ್ಣಗೊಂಡಿದೆ. ದೆಹಲಿ ವಿಧಾನಸಭಾ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಹೊರಬಿದ್ದಿದ್ದು, ಬಿಜೆಪಿ ಭರ್ಜರಿ ಬಹುಮತದೊಂದಿಗೆ ಗೆಲುವ ಸಾಧಿಸಲಿದೆ ಎಂದು ಪಿ ಮಾರ್ಕ್ ಸಮೀಕ್ಷೆ ಹೇಳಿದೆ. ಬಿಜೆಪಿ ಅಧಿಕ ಸ್ಥಾನ ಪಡೆದುಕೊಂಡರೆ, ಎಎಪಿ ಎರಡ ನೇ ಸ್ಥಾನದಲ್ಲಿದೆ. ಕಾಂಗ್ರೆಸ್ ಶೂನ್ಯ ಅಥವಾ ಒಂದು ಕ್ಷೇತ್ರದಲ್ಲಿ ಗೆಲ್ಲಬಹುದು ಎಂದು ಅಂದಾಜಿಸಿದೆ.
ಪಿ ಮಾರ್ಕ್ ಸಮೀಕ್ಷೆ ಯಾರಿಗೆ ಎಷ್ಟು ಸ್ಥಾನ?
* ಒಟ್ಟು ವಿಧಾನಸಭಾ ಸ್ಥಾನಗಳು - 70
* ಬಿಜೆಪಿ - 39 ರಿಂ 49 ಸ್ಥಾನಗಳು
* ಎಎಪಿ - 21 ರಿಂದ 31 ಸ್ಥಾನಗಳು
* ಕಾಂಗ್ರೆಸ್ 0 ರಿಂದ 1 ಸ್ಥಾನಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications