Delhi excise policy scam: ಮನೀಶ್ ಸಿಸೋಡಿಯಾಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ದೆಹಲಿ ಅಕ್ಟೋಬರ್ 30: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠ ಈ ಆದೇಶವನ್ನು ಪ್ರಕಟಿಸಿದೆ.

ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರಿದ್ದ ಪೀಠವು, ಪ್ರಕರಣವನ್ನು ಉನ್ನತ ನ್ಯಾಯಾಲಯವು ವಿಶ್ಲೇಷಿಸಿದ ನಂತರ ಕೆಲವು ಅಂಶಗಳು ಅನುಮಾನಾಸ್ಪದವಾಗಿರುವುದು ಕಂಡುಬಂದಿದೆ ಎಂದು ಹೇಳಿದೆ. 'ಈ ವಿಶ್ಲೇಷಣೆಯಲ್ಲಿ, 338 ಕೋಟಿ ರೂ. ವರ್ಗಾವಣೆಗೆ ಸಂಬಂಧಿಸಿದಂತೆ ಕೆಲವು ಅನುಮಾನಾಸ್ಪದ ಅಂಶಗಳು ಕಂಡುಬಂದಿವೆ. ಹೀಗಾಗಿ, ನಾವು ಜಾಮೀನು ತಿರಸ್ಕರಿಸಿದ್ದೇವೆ' ಎಂದು ಪೀಠ ಹೇಳಿತು.

delhi-excise-policy-scam

ಈ ವರ್ಷ ಫೆಬ್ರವರಿ 26 ರಿಂದ ಸಿಸೋಡಿಯಾ ಬಂಧನದಲ್ಲಿದ್ದಾರೆ. ನಂತರ ಮಾರ್ಚ್ 9ರಂದು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿತು. ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಎರಡೂ ತನಿಖೆ ನಡೆಸುತ್ತಿವೆ. ಲಂಚದ ಬದಲಾಗಿ ಕೆಲವು ವ್ಯಾಪಾರಿಗಳಿಗೆ ಮದ್ಯದ ಪರವಾನಗಿ ನೀಡಲು ದೆಹಲಿ ಸರ್ಕಾರದ ಅಧಿಕಾರಿಗಳು ಸಂಚು ರೂಪಿಸಿದ್ದಾರೆ ಎಂಬ ಆರೋಪವನ್ನು ಹಗರಣ ಒಳಗೊಂಡಿದೆ.

ಆರೋಪಿ ಮನೀಶ್ ಸಿಸೋಡಿಯಾ ಅವರು ಕೆಲವು ಮದ್ಯ ಮಾರಾಟಗಾರರಿಗೆ ಅನುಕೂಲವಾಗುವಂತೆ ಅಬಕಾರಿ ನೀತಿಯನ್ನು ತಿರುಚಿದ್ದಾರೆ ಎಂದು ಆರೋಪಿಸಲಾಗಿದೆ. ದೆಹಲಿ ಹೈಕೋರ್ಟ್ ಈ ಹಿಂದೆ ಎರಡು ಕೇಂದ್ರೀಯ ಸಂಸ್ಥೆಗಳಿಂದ ಸಿಸೋಡಿಯಾ ಅವರ ವಿರುದ್ಧದ ಪ್ರಕರಣಗಳಲ್ಲಿ ಜಾಮೀನು ನಿರಾಕರಿಸಿತ್ತು. ಹೀಗಾಗಿ ಮನೀಶ್ ಸಿಸೋಡಿಯಾ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ ಸುಪ್ರೀಂ ಕೋರ್ಟ್ ಜಾಮೀನು ನಿರಾಖರಿಸಿದೆ. ಈ ಹಿಂದೆ ದೆಹಲಿ ಹೈಕೋರ್ಟ್ ಕೂಡ ಎಎಪಿ ನಾಯಕನಿಗೆ ಜಾಮೀನು ನಿರಾಕರಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+