Delhi Election 2025 Exit Poll: ಜೆವಿಸಿ ದೆಹಲಿ ಎಕ್ಸಿಟ್ ಪೋಲ್ ಫಲಿತಾಂಶ 2025- ರಾಷ್ಟ್ರ ರಾಜಧಾನಿಯಲ್ಲಿ ಅರಳಲಿದೆ ಕಮಲ

ದೆಹಲಿ ಜನವರಿ 5: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು ಚುನಾವಣೋತ್ತರ ಸಮೀಕ್ಷೆಗಳು ಆರಂಭವಾಗಿವೆ. ಜೆವಿಸಿ ನಡೆಸಿದ ಸಮೀಕ್ಷೆಯ ಪ್ರಕಾರ ಈ ಬಾರಿ ಭಾರತೀಯ ಜನತಾ ಪಕ್ಷ ದೆಹಲಿಯ ಅಧಿಕಾರದ ಗದ್ದುಗೆ ಹಿಡಿಯಲಿದೆ. ಹಾಗಾದರೆ ಜೆವಿಸಿ ನಡೆಸಿದ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ಹೇಗಿದೆ ಎಂದು ತಿಳಿಯೋಣ.

ಜೆವಿಸಿ ಸಮೀಕ್ಷೆಯ ಪ್ರಕಾರ ಈ ಬಾರಿ ಎಎಪಿ ಪಕ್ಷ ದೆಹಲಿಯ 70 ವಿಧಾನಸಭಾ ಕ್ಷೇತ್ರಗಳ ಪೈಕಿ 22 ರಿಂದ 31 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ 01 ಸ್ಥಾನ ಹಾಗೂ ಬಿಜೆಪಿ 39 ರಿಂದ 45 ಸ್ಥಾನಗಳನ್ನು ಗೆಲ್ಲಲಿದೆ. 2015-2020ರ ದೆಹಲಿ ಚುನಾವಣೆಗಳಲ್ಲಿ ಆಡಳಿತರೂಢ ಆಮ್‌ ಆದ್ಮಿ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಗೆಲುವು ಸಾಧಿಸಿತ್ತು. ಈ ಬಾರಿ ಯಾವ ಪಕ್ಷ ಗೆಲುವು ಸಾಧಿಸಲಿದೆ ಎನ್ನುವ ಕುತೂಹಲ ಮೂಡಿದೆ. ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಫೆಬ್ರವರಿ 8ರಂದು ಬಹಿರಂಗವಾಗಲಿದೆ.

Delhi Exit Poll Result 2025 JVC predicts BJP s Win

ಚುನಾವಣಾ ಆಯೋಗ ಈ ಬಾರಿ ಚುನಾವಣೋತ್ತರ ಸಮೀಕ್ಷೆಗಳ ಬಗ್ಗೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿತ್ತು. ಮತದಾನ ಪ್ರಕ್ರಿಯೆ ಅವಧಿಯಲ್ಲಿ ಯಾವುದೇ ಮುದ್ರಣ ಅಥವಾ ವಿದ್ಯುನ್ಮಾನ ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಕಟಿಸುವಂತಿಲ್ಲ ಎಂದು ಸೂಚನೆ ನೀಡಿತ್ತು. ಇದೀಗ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು ಹಲವಾರು ಸಂಸ್ಥೆಗಳು ತಮ್ಮ ಸಮೀಕ್ಷೆಯ ವರದಿಯನ್ನು ಬಿಡುಗಡೆ ಮಾಡುತ್ತಿವೆ.

ಹೌದು.. ಬಿಗಿ ಭದ್ರತೆಯ ನಡುವೆ ದೆಹಲಿ ವಿಧಾನಸಭಾ ಚುನಾವಣೆ ಮತದಾನ ಪೂರ್ಣಗೊಂಡಿದೆ. ಈ ಚುನಾವಣೆಯಲ್ಲಿ 1.56 ಕೋಟಿಗೂ ಹೆಚ್ಚು ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಲ್ಲಿ 13,766 ಮತಗಟ್ಟೆಗಳಲ್ಲಿ ಮತದಾನ ನಡೆದಿದೆ. ಇದು 699 ಅಭ್ಯರ್ಥಿಗಳ ಚುನಾವಣಾ ಭವಿಷ್ಯವನ್ನು ನಿರ್ಧರಿಸಲಿದೆ.

ಬೆಳಿಗ್ಗೆ ಏಳು ಗಂಟೆಗೆ ಮತದಾನ ಆರಂಭವಾಗಿ, ಸಂಜೆ ಆರು ಗಂಟೆಗೆ ಮತದಾನ ಪೂರ್ಣಗೊಂಡಿದೆ. ಶಾಂತಿಯುತ ಮತದಾನವನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗ 220 ಕಂಪನಿಗಳ ಅರೆಸೈನಿಕ ಪಡೆಗಳು, 35,626 ದೆಹಲಿ ಪೊಲೀಸ್ ಸಿಬ್ಬಂದಿ ಮತ್ತು 19,000 ಗೃಹರಕ್ಷಕರನ್ನು ನಿಯೋಜಿಸಿತ್ತು.

ಸುಮಾರು ಮೂರು ಸಾವಿರ ಮತಗಟ್ಟೆಗಳನ್ನು ಸೂಕ್ಷ್ಮ ಎಂದು ಗುರುತಿಸಲಾಗಿತ್ತು. ಈ ಸ್ಥಳಗಳಲ್ಲಿ ಡ್ರೋನ್ ಕಣ್ಗಾವಲು ಸೇರಿದಂತೆ ವಿಶೇಷ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು. ದೆಹಲಿಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಮೂರನೇ ಅವಧಿಗೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿದ್ದರೆ, ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿದೆ.

ಇನ್ನೂ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಸಂಜೆ 5 ಗಂಟೆಯ ತನಕ ಶೇ 57ರಷ್ಟು ಮತದಾನವಾಗಿದೆ. 70 ಕ್ಷೇತ್ರಗಳಿಗೆ ಬುಧವಾರ ಒಂದೇ ಹಂತದಲ್ಲಿ ಮತದಾನ ನಡೆದಿದ್ದು, ಫೆಬ್ರವರಿ 8ರಂದು ಮತ ಎಣಿಕೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+