Tirupati: ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಅರವಿಂದ್ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಇಂದು ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ಅವರ ಪತ್ನಿ ಸುನೀತ್ ಕೇಜ್ರಿವಾಲ್ ಕೂಡ ಅವರ ಜೊತೆಗಿದ್ದರು. ಅರವಿಂದ್ ಕೇಜ್ರಿವಾಲ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಪೋಸ್ಟ್ ವನ್ನು ಹಂಚಿಕೊಂಡಿದ್ದಾರೆ.

ಈ ಹಿಂದೆ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿರುವ ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅರವಿಂದ್ ಕೇಜ್ರಿವಾಲ್ ಆರತಿಯಲ್ಲಿ ಪಾಲ್ಗೊಂಡು ವೈಷ್ಣೋ ದೇವಿ ಆಶೀರ್ವಾದ ಪಡೆದರು. ಇಂದು ಆಂಧ್ರಪ್ರದೇಶದ ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ಆಶೀರ್ವಾದ ಪಡೆದಿದ್ದಾರೆ. ಜೈಲಿನಿಂದ ಹೊರಬಂದ ಬಳಿಕ ಅರವಿಂದ್ ಕೇಜ್ರಿವಾಲ್ ದೇವಸ್ಥಾನಗಳಿಗೆ ಭೇಟಿ ನೀಡುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದೆ.

Delhi Former Chief Minister Arvind Kejriwal visit Tirupati temple

ಈ ವರ್ಷದ ಮಾರ್ಚ್ ತಿಂಗಳಲ್ಲಿ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಇಡಿಯಿಂದ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಯಿತು. ಆದರೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು ಮಾಡಿತ್ತು. ಜೈಲಿನಿಂದ ಬಿಡುಗಡೆಯಾದ ನಂತರ ಅರವಿಂದ್ ಕೇಜ್ರಿವಾಲ್ ಕನ್ನಾಟ್ ಪ್ಲೇಸ್‌ನಲ್ಲಿರುವ ಹನುಮಾನ್ ದೇವಾಲಯಕ್ಕೆ ಭೇಟಿ ನೀಡಿದ್ದರು. ಇದಾದ ನಂತರ ಅವರು ತಮ್ಮ ಪತ್ನಿ ಸುನೀತಾ ಕೇಜ್ರಿವಾಲ್ ಅವರೊಂದಿಗೆ ವೈಷ್ಣೋ ದೇವಿ ದೇವಸ್ಥಾನಕ್ಕೆ ತೆರಳಿ ವೈಷ್ಣೋ ದೇವಿ ದರ್ಶನ ಪಡೆದರು.

ದೆಹಲಿಯಲ್ಲಿ ಚುನಾವಣೆಗೆ ಸಿದ್ಧತೆ

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ನಂತರ ದೆಹಲಿಯಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಹೀಗಿರುವಾಗ ಎಲ್ಲೆಡೆ ಚುನಾವಣಾ ತಯಾರಿ ಜೋರಾಗಿ ನಡೆಯುತ್ತಿದೆ. ಬಿಜೆಪಿ, ಕಾಂಗ್ರೆಸ್ ಅಥವಾ ಆಮ್ ಆದ್ಮಿ ಈ ಮೂರು ಪಕ್ಷ ಮತದಾರರನ್ನು ಓಲೈಸಲು ಯತ್ನಿಸುತ್ತಿದ್ದು, ಪರಸ್ಪರ ವಾದ ಪ್ರತಿವಾದ ಜೋರಾಗಿದೆ.

ಈ ಸರಣಿಯಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿರಂತರವಾಗಿ ಒಂದರ ಹಿಂದೆ ಒಂದರಂತೆ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ಹಿಂದೆ ವೈಷ್ಣೋ ದೇವಿ ದರ್ಶನದ ನಂತರ ಇದೀಗ ಅರವಿಂದ್ ಕೇಜ್ರಿವಾಲ್ ತಿರುಪತಿ ದೇವಸ್ಥಾನಕ್ಕೆ ತೆರಳಿ ತಿರುಪತಿ ದೇವರ ದರ್ಶನ ಪಡೆದಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಗುರುವಾರ ಬೆಳಗ್ಗೆ ಆಂಧ್ರಪ್ರದೇಶದ ತಿರುಮಲದಲ್ಲಿರುವ ವೆಂಕಟೇಶ್ವರನ ದರ್ಶನ ಪಡೆದರು. ದರ್ಶನದ ನಂತರ ದೇವಾಲಯದ ಅಧಿಕಾರಿಗಳು ಅವರನ್ನು ಬರಮಾಡಿಕೊಂಡರು. ನಂತರ, ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಅಧಿಕಾರಿಗಳು ಅವರಿಗೆ ವೆಂಕಟೇಶ್ವರನ ಪವಿತ್ರ ನೈವೇದ್ಯವನ್ನು ನೀಡಿದರು.

ತಿರುಪತಿ ಬಾಲಾಜಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಮಾತನಾಡಿದ ಕೇಜ್ರಿವಾಲ್ ಅವರು, "ಇಂದು, ನಾನು ನನ್ನ ಪತ್ನಿಯೊಂದಿಗೆ ತಿರುಪತಿ ಬಾಲಾಜಿಯ ಆಶೀರ್ವಾದ ಪಡೆಯಲು ಬಂದಿದ್ದೇನೆ. ಇದು ನನ್ನ ಮೊದಲ ಬಾರಿಗೆ ಭೇಟಿ ಆಗಿದೆ. ನಾನು ಎಲ್ಲರ ಯೋಗಕ್ಷೇಮಕ್ಕಾಗಿ ಮತ್ತು ನಮ್ಮ ದೇಶದ ಹಾಗೂ ವಿಶೇಷವಾಗಿ ದೆಹಲಿಯ ಸಮೃದ್ಧಿಗಾಗಿ ಪ್ರಾರ್ಥಿಸಿದೆ" ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+