ಅರವಿಂದ್ ಕೇಜ್ರಿವಾಲ್ ಮನವಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್

ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾಡಿದ ಮನವಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದ್ದು, ದೆಹಲಿ ಸಿಎಂಗೆ ಶಾಕ್ ನೀಡಿದೆ.

ಕೇಜ್ರಿವಾಲ್ ಅವರನ್ನು ಬಂಧಿಸಲು ಕಾರಣವಾದ ಬಲವಾದ ಕಾರಣವನ್ನು ಕೇಂದ್ರ ಸಂಸ್ಥೆ ಹೊಂದಿದೆ ಎಂದು ಹೈಕೋರ್ಟ್ ಹೇಳಿದೆ. ಕೇಜ್ರಿವಾಲ್ ಅವರ ಅರ್ಜಿ ತಿರಸ್ಕಾರ ಮಾಡಿರುವ ಕಾರಣ, ಅವರು ಇನ್ನೂ ಜೈಲಿನಲ್ಲೇ ಇರಬೇಕಾಗುತ್ತದೆ.

Delhi High Court Dismisses Arvind Kejriwal s Appeal Against Arrest by ED

ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಶೇಷವಾಗಿ ಜಾರಿ ನಿರ್ದೇಶನಾಲಯವು ತನ್ನ ಬಳಿ ಸಾಕ್ಷ್ಯಾಧಾರಗಳನ್ನು ಹೊಂದಿದೆ ಎಂದು ಹೇಳಿಕೊಂಡಿದೆ. ಅವರು ಈಗ ರದ್ದಾದ ನಿಯಮವನ್ನು ರೂಪಿಸಲು ಪಿತೂರಿ ನಡೆಸಿದರು ಎಂದು ಹೇಳಿದೆ.

ಅರವಿಂದ್ ಕೇಜ್ರಿವಾಲ್ ಅವರೇ ದೆಹಲಿ ಮದ್ಯ ನೀತಿ ಪ್ರಕರಣದ "ಕಿಂಗ್‌ಪಿನ್" ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ಕಳೆದ ವಾರ ನಗರ ನ್ಯಾಯಾಲಯ ನೀಡಿದ ಆದೇಶದ ಪ್ರಕಾರ ಕೇಜ್ರಿವಾಲ್ ಏಪ್ರಿಲ್ 15 ರವರೆಗೆ ದೆಹಲಿಯ ತಿಹಾರ್ ಜೈಲಿನಲ್ಲೇ ಇರುತ್ತಾರೆ ಎಂದು ಕೋರ್ಟ್ ಹೇಳಿದೆ.

ಕೇಜ್ರಿವಾಲ್ ಅವರ ಬಂಧನವನ್ನು ವಿಸ್ತರಣೆ ಮಾಡುವಂತೆ ಜಾರಿ ನಿರ್ದೇಶನಾಲಯ ಮನವಿ ಮಾಡಿಲ್ಲ. ಆದರೆ ಅವರ ಜಾಮೀನಿಗೆ ವಿರುದ್ಧ ವಾದಿಸಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+