ಕನ್ಹಯ್ಯಾ ಕುಮಾರ್‌ಗೆ ಷರತ್ತುಬದ್ಧ ಮಧ್ಯಂತರ ಜಾಮೀನು
ನವದೆಹಲಿ ಮಾರ್ಚ್. 02: ದೇಶದ್ರೋಹದ ಆರೋಪದಡಿ ಬಂಧನವಾಗಿದ್ದ ಜವಾಹರಲಾಲ್ ನೆಹರು ವಿವಿ ವಿದ್ಯಾರ್ಥಿ ಸಂಘಟನೆ ಮುಖಂಡ ಕನ್ಹಯ್ಯಾ ಕುಮಾರ್ ಗೆ ದೆಹಲಿ ಹೈಕೋರ್ಟ್ ಅಂತಿಮವಾಗಿ ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಿದೆ.
ಕನ್ಹಯ್ಯಾ ಕುಮಾರ್ ಗೆ ದೆಹಲಿ ಹೈಕೋರ್ಟ್ ಆರು ತಿಂಗಳ ಕಾಲ ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಿದೆ. ಅಲ್ಲದೇ 10 ಸಾವಿರ ರು. ಬಾಂಡ್ ನೀಡುವಂತೆ ತಿಳಿಸಿದೆ.[ಬೇಲ್ ಕೇಳಿದ ಕನ್ಹಯ್ಯಾನನ್ನು ವಾಪಸ್ ಕಳಿಸಿದ್ದ ಸುಪ್ರೀಂಕೋರ್ಟ್]

ಮೊದಲು ಕನ್ಹಯ್ಯಾ ಕುಮಾರ್ ಗೆ ಜಾಮೀನು ನೀಡಲು ದೆಹಲಿ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದ್ದರು. ನಮ್ಮ ಬಳಿ ದೇಶದ್ರೋಹದ ಘೋಷಣೆ ಕೂಗಿದ ದಾಖಲೆಗಳಿವೆ ಎಂದು ಹೇಳಿದ್ದರು. ಆದರೆ ದೆಹಲಿ ಸರ್ಕಾರ ಜಾಮೀನು ನೀಡಲು ಅಡ್ಡಿ ಇಲ್ಲ ಎಂದು ವರದಿ ಸಲ್ಲಿಕೆ ಮಾಡಿತ್ತು.[ಕನ್ಹಯ್ಯಾ ಕುಮಾರ್ ಘೋಷಣೆ ಕೂಗಿದ 2 ವಿಡಿಯೋ ನಕಲಿ!]
ಎರಡು ವಾರದಿಂದ ಕನ್ಹಯ್ಯಾ ಕುಮಾರ್ ತಿಹಾರ್ ಜೈಲಿನಲ್ಲಿದ್ದರು. ಜಾಮೀನು ಅರ್ಜಿಯನ್ನು ಸುಪ್ರೀಂ ಗೂ ಹಿಂದೆ ಸಲ್ಲಿಕೆ ಮಾಡಲಾಗಿತ್ತು. ಆದರೆ ಸುಪ್ರೀಂ ಅರ್ಜಿಯನ್ನು ಕೆಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿತ್ತು.
ಯಾಕೆ ಬಂಧನಾಗಿತ್ತು?
ಫೆಬ್ರವರಿ 9 ರಂದು ಜವಾಹರಲಾಲ್ ನೆಹರು ವಿವಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಉಗ್ರ ಅಫ್ಜಲ್ ಗುರು ಪರ ಮತ್ತು ಭಾರತದ ವಿರುದ್ಧ ಘೋಷಣೆ ಕೂಗಲಾಗಿದೆ ಎಂಬ ಮಾತು ಕೇಳಿ ಬಂದಿತ್ತು. ಈ ಪ್ರಕರಣದ ನಂತರ ದೆಹಲಿ ಪೊಲೀಸರು ವಿದ್ಯಾರ್ಥಿ ಸಂಘಟನೆ ಮುಖಂಡ ಕನ್ಹಯ್ಯಾ ಕುಮಾರ್ ನನ್ನು ಬಂಧಿಸಿದ್ದರು.












Click it and Unblock the Notifications