Delhi High Court Recruitment 2026: 152 ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಂಬಳ ಎಷ್ಟು? ಇಲ್ಲಿದೆ ಮಾಹಿತಿ
ನವದೆಹಲಿ: ಕೇಂದ್ರ ಸರ್ಕಾರಿ ಸ್ವಾಮ್ಯದ ನ್ಯಾಯಾಂಗ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ಪದವೀಧರರಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ದೆಹಲಿ ಹೈಕೋರ್ಟ್ 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಒಟ್ಟು 152 'ಜೂನಿಯರ್ ಜ್ಯುಡಿಷಿಯಲ್ ಅಸಿಸ್ಟೆಂಟ್' ಅಥವಾ 'ರಿಸ್ಟೋರರ್' (Restorer) ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದೆಹಲಿ ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಫೆಬ್ರವರಿ 4, 2026 ರಂದು ಪ್ರಾರಂಭವಾಗಲಿದ್ದು, ಫೆಬ್ರವರಿ 23, 2026 ರಂದು ಕೊನೆಗೊಳ್ಳಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಕೇವಲ ಪದವಿ ಇದ್ದರೆ ಸಾಲದು, ಅಭ್ಯರ್ಥಿಯು ಕಂಪ್ಯೂಟರ್‌ನಲ್ಲಿ ನಿಮಿಷಕ್ಕೆ ಕನಿಷ್ಠ 35 ಪದಗಳ ವೇಗದಲ್ಲಿ (35 wpm) ಇಂಗ್ಲಿಷ್ ಟೈಪಿಂಗ್ ಮಾಡುವ ಸಾಮರ್ಥ್ಯ ಹೊಂದಿರಬೇಕು.
ಅಭ್ಯರ್ಥಿಯ ವಯಸ್ಸು ಜನವರಿ 1, 2026ಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 32 ವರ್ಷದೊಳಗಿರಬೇಕು. ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಬಹು ಹಂತದ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. ಒಟ್ಟು ನಾಲ್ಕು ಹಂತಗಳಿರುತ್ತವೆ:
1. ಪೂರ್ವಭಾವಿ ಪರೀಕ್ಷೆ: ಇದು ವಸ್ತುನಿಷ್ಠ ಮಾದರಿಯಾಗಿದ್ದು, ಸಾಮಾನ್ಯ ಜ್ಞಾನ, ಇಂಗ್ಲಿಷ್ ಭಾಷೆ, ಮತ್ತು ತಾರ್ಕಿಕ ಸಾಮರ್ಥ್ಯದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ
2. ಮುಖ್ಯ ಪರೀಕ್ಷೆ : ಇದು ವಿವರಣಾತ್ಮಕ ಮಾದರಿಯ ಪರೀಕ್ಷೆಯಾಗಿದೆ
3. ಟೈಪಿಂಗ್ ಪರೀಕ್ಷೆ: ಇದರಲ್ಲಿ ಇಂಗ್ಲಿಷ್ ಟೈಪಿಂಗ್ ವೇಗ ಮತ್ತು ನಿಖರತೆಯನ್ನು ಪರೀಕ್ಷಿಸಲಾಗುತ್ತದೆ.
4. ಸಂದರ್ಶನ : ಅಂತಿಮ ಹಂತದಲ್ಲಿ ಮೌಖಿಕ ಸಂದರ್ಶನ ನಡೆಯಲಿದೆ.
ಅರ್ಜಿ ಶುಲ್ಕದ ವಿವರ:
1. ಸಾಮಾನ್ಯ , ಒಬಿಸಿ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ: 1,500 ರೂ.
2. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ: 1,300 ರೂ. ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ದೆಹಲಿ ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, 'Recruitment' ವಿಭಾಗದಲ್ಲಿ ಲಭ್ಯವಿರುವ ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬೇಕು. ಅಗತ್ಯ ದಾಖಲೆಗಳು, ಫೋಟೋ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಬೇಕು. ತಪ್ಪು ಮಾಹಿತಿ ನೀಡಿದರೆ ಅರ್ಜಿ ತಿರಸ್ಕೃತಗೊಳ್ಳುವ ಸಾಧ್ಯತೆ ಇರುವುದರಿಂದ, ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಮುಂದುವರಿಯಲು ಕೋರಲಾಗಿದೆ.












Click it and Unblock the Notifications