• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ದೆಹಲಿ ಹಾಗೂ ಮಹಾರಾಷ್ಟ್ರದಲ್ಲಿ ದಾಖಲೆ ಪ್ರಮಾಣದ ಕೊರೊನಾ ಸೋಂಕಿತರು ಪತ್ತೆ

|

ನವದೆಹಲಿ, ಏಪ್ರಿಲ್ 16: ದೆಹಲಿ ಹಾಗೂ ಮಹಾರಾಷ್ಟ್ರದಲ್ಲಿ ದಾಖಲೆ ಪ್ರಮಾಣದ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.ದೆಹಲಿಯಲ್ಲಿ 19,486 ಕೊರೊನಾ ಸೋಂಕಿತರು ಪತ್ತೆಯಾಗಿದ್ದರೆ ಮಹಾರಾಷ್ಟ್ರದಲ್ಲಿ 63,729 ಸೋಂಕಿತರು ಪತ್ತೆಯಾಗಿದ್ದಾರೆ.

ದೆಹಲಿಯಲ್ಲಿ ಒಂದೇ ದಿನ 141 ಮಂದಿ ಮೃತಪಟ್ಟಿದ್ದಾರೆ, 61,000 ಸಕ್ರಿಯ ಪ್ರಕರಣಗಳಿವೆ, ಚೇತರಿಕೆ ಪ್ರಮಾಣ ಶೇ.90.94ಕ್ಕೆ ಇಳಿದಿದೆ. ದೆಹಲಿಯಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.19.69ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 12,649 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಆಕ್ಸಿಜನ್ ವ್ಯರ್ಥವಾಗದಂತೆ ನೋಡಿಕೊಳ್ಳಲು ರಾಜ್ಯಗಳಿಗೆ ಕೇಂದ್ರದ ಸೂಚನೆ

ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 398 ಮಂದಿ ಸಾವನ್ನಪ್ಪಿದ್ದಾರೆ, 45,335 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಒಟ್ಟು 1,42,91,917 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಪ್ರಸ್ತುತ 15,69,743 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪತ್ತೆಗೆ ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 14,73,210 ಜನರ ಮಾದರಿಯನ್ನು ತಪಾಸಣೆಗೊಳಪಡಿಸಲಾಗಿದೆ ದೇಶದಲ್ಲಿ ಈವರೆಗೂ 26,34,76,625 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ದೇಶಾದ್ಯಂತ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ದರ್ಜೆಯ ಆಮ್ಲಜನಕ ಉತ್ಪಾದನೆ ಪೂರೈಕೆ ಹೆಚ್ಚಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಕೋವಿಡ್-19 ಏರಿಕೆ ಹಿನ್ನೆಲೆಯಲ್ಲಿ ದೇಶಾದ್ಯಂತ ಸಮರ್ಪಕ ಆಮ್ಲಜನಕ ಸಾಧನಗಳ ಲಭ್ಯತೆಯ ಕುರಿತು ಏ.16 ರಂದು ಸಮಗ್ರ ಪರಿಶೀಲನೆ ನಡೆಸಿದರು.

ದೇಶಾದ್ಯಂತ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರ ನಡುವೆ ಪ್ರಧಾನಿ ನರೇಂದ್ರ ಮೋದಿ ಹೆಚ್ಚಿನ ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆ ಮಾಡುವ ಸಾಧನಗಳ ತಯಾರಿಕೆಯನ್ನು ಏರಿಕೆ ಮಾಡುವಂತೆ ಕರೆ ನೀಡಿದ್ದಾರೆ.

English summary
Maharashtra and Delhi on Friday reported their biggest ever single-day surge in coronavirus cases, according to government data. This comes as the country logged over 2 lakh Covid cases for the second consecutive day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X