ಬೆಚ್ಚಿಬಿದ್ದ ದೆಹಲಿ: ಪ್ರೇಯಸಿಯನ್ನೇ ಕೊಂದು, 18 ದಿನ ದೇಹದ ಭಾಗಗಳನ್ನು ಎಸೆದ ಆರೋಪಿ
ನವದೆಹಲಿ, ನ.14: ಸೋಮವಾರ ಬೆಳಗ್ಗೆಯೇ ದೆಹಲಿಯ ಜೊತೆಗೆ ಇಡೀ ದೇಶವೇ ಬೆಚ್ಚಿಬಿದ್ದಿದೆ. ಅಪಹರಣ ಪ್ರಕರಣವೊಂದು ಭೀಕರ ಕೊಲೆ ಪ್ರಕರಣಕ್ಕೆ ಬದಲಾಗಿದೆ. ಕೊಲೆಯ ತೀವ್ರತೆ ಕಂಡು ಜನ ಆತಂಕಕ್ಕೆ ಒಳಗಾಗಿದ್ದಾರೆ.
ಹೌದು, ದೆಹಲಿಯಲ್ಲಿ ವರದಿಯಾಗಿರುವ ಈ ಆಘಾತಕಾರಿ ಪ್ರಕರಣದಲ್ಲಿ, ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಕತ್ತು ಹಿಸುಕಿ, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ 18 ದಿನಗಳ ಕಾಲ ದೆಹಲಿಯ ಮೆಹ್ರೌಲಿ ಅರಣ್ಯದಲ್ಲಿ ಎಸೆದಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತನ್ನ ಪ್ರೇಯಸಿಯ ದೇಹದ ಭಾಗಗಳನ್ನು ಬಿಸಾಡಲು ಆರೋಪಿ ಪ್ರತಿದಿನ ಮುಂಜಾನೆ 2 ಗಂಟೆಗೆ ಕಾಡಿಗೆ ಹೊರಹೋಗುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ಮೃತ ಯುವತಿಯನ್ನು ಶ್ರದ್ಧಾ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಅಫ್ತಾಬ್ ಅಮೀನ್ ಪೂನಾವಾಲಾ ಎಂದು ಗುರುತಿಸಲಾಗಿದೆ. ಆತನ ವಿರುದ್ಧ ಪೊಲಿಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಮೃತ ದೇಹವಿರಿಸಿಕೊಳ್ಳಲು ಫ್ರಿಜ್ ಖರೀದಿಸಿದ್ದ ಆರೋಪಿ
ಮೇ 18 ರಂದು ಇಬ್ಬರ ನಡುವೆ ಜಗಳವಾಗಿದೆ. ಜಗಳ ಅತೀರೇಕಕ್ಕೆ ಹೋದ ನಂತರ ಆರೋಪಿ ಅಫ್ತಾಬ್ ಅಮೀನ್ ಪೂನಾವಲ್ಲಾ ತನ್ನ ಲಿವ್-ಇನ್ ಸಂಗಾತಿ ಶ್ರದ್ಧಾಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಅವರು ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ್ದಾರೆ. ಮೃತ ದೇಹ ವಾಸನೆ ಬರದಂತೆ ತಡೆಯಲು ಮತ್ತು ತುಂಡುಗಳನ್ನು ಇರಿಸಿಕೊಳ್ಳಲು 300 ಲೀಟರ್ ಫ್ರಿಜ್ ಅನ್ನು ಖರೀದಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

18 ದಿನ ಕಾಡಿಗೆ ಹೋಗಿ ದೇಹದ ತುಂಡುಗಳನ್ನು ಎಸೆದ ಆರೋಪಿ
ಶ್ರದ್ಧಾರನ್ನು ಕೊಲೆ ಮಾಡಿ ಆಕೆಯ ದೇಹದ ತುಂಡುಗಳನ್ನು ಎಸೆಯಲು ಆರೋಪಿಯು 18 ದಿನಗಳ ಕಾಲ ಮೆಹ್ರೌಲಿ ಅರಣ್ಯಕ್ಕೆ ತೆರಳಿದ್ದಾರೆ.
ಕಾಡಿನ ವಿವಿಧ ಪ್ರದೇಶಗಳಲ್ಲಿ ತುಂಡುಗಳನ್ನು ವಿಲೇವಾರಿ ಮಾಡಿದ್ದಾರೆ. ತನ್ನ ಪ್ರೇಯಸಿಯ ದೇಹದ ಭಾಗಗಳನ್ನು ಬಿಸಾಡಲು ಆರೋಪಿ ಅಫ್ತಾಬ್ ಅಮೀನ್ ಪೂನಾವಲ್ಲಾ ಪ್ರತಿದಿನ ಮುಂಜಾನೆ 2 ಗಂಟೆಗೆ ಕಾಡಿಗೆ ಹೊರಹೋಗುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಕುಟುಂಬದ ವಿರೋಧದ ನಡುವೆ ಆರೋಪಿ ಜೊತೆಗಿದ್ದ ಯುವತಿ
26 ವರ್ಷದ ಶ್ರದ್ಧಾ ಮುಂಬೈನ ಬಹುರಾಷ್ಟ್ರೀಯ ಕಂಪನಿಯ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿ ಆಕೆ ಆರೋಪಿ ಅಫ್ತಾಬ್ ಪೂನಾವಲ್ಲಾರನ್ನು ಭೇಟಿಯಾಗಿದ್ದರು. ಕೆಲ ಕಾಲದ ನಂತರ ಇಬ್ಬರೂ ಡೇಟಿಂಗ್ ಮಾಡಲು ಪ್ರಾರಂಭಿಸಿದ್ದರು. ಶ್ರದ್ಧಾ ಅವರ ಕುಟುಂಬವು ಇಬ್ಬರ ಸಂಬಂಧವನ್ನು ಒಪ್ಪದ ನಂತರ, ಜೋಡಿ ದೆಹಲಿಗೆ ಬಂದಿದ್ದರು. ಇಬ್ಬರು ಮೆಹ್ರೌಲಿಯ ಫ್ಲಾಟ್‌ನಲ್ಲಿ ವಾಸಿಸಲು ಪ್ರಾರಂಭಿಸಿದ್ದರು.

ಕೊಲೆಯಾಗಿ ಬದಲಾದ ಅಪಹರಣ ಪ್ರಕರಣ
ಸ್ವಲ್ಪ ಸಮಯದ ನಂತರ, ಶ್ರದ್ಧಾ ತನ್ನ ಮನೆಯವರ ಫೋನ್ ಕರೆಗಳಿಗೆ ಪ್ರತಿಕ್ರಿಯಿಸುವುದನ್ನು ನಿಲ್ಲಿಸಿದ್ದರು. ನವೆಂಬರ್ 8 ರಂದು, ಆಕೆಯ ತಂದೆ ವಿಕಾಸ್ ಮದನ್ ತನ್ನ ಮಗಳನ್ನು ನೋಡಲು ದೆಹಲಿಗೆ ಬಂದಿದ್ದರು. ಆದರೆ, ಆಕೆಯ ಫ್ಲ್ಯಾಟ್‌ಗೆ ಬೀಗ ಹಾಕಿರುವುದು ಕಂಡುಬಂದಿದೆ. ತಕ್ಷಣ ಅವರು ಮೆಹ್ರೌಲಿ ಪೊಲೀಸರನ್ನು ಸಂಪರ್ಕಿಸಿ, ಅಪಹರಣದ ಆರೋಪದ ಮೇಲೆ ದೂರು ದಾಖಲಿಸಿದರು.
ಅವರ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಶ್ರದ್ಧಾ ಆತನನ್ನು ಮದುವೆಯಾಗಲು ಬಯಸಿದ್ದರಿಂದ ಇಬ್ಬರೂ ಆಗಾಗ್ಗೆ ಜಗಳವಾಗುತ್ತಿತ್ತು ಎಂದು ತನಿಖೆಯ ವೇಳೆ ಆತ ಬಹಿರಂಗಪಡಿಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸದ್ಯ ಅರಣ್ಯದಿಂದ ಕೆಲವು ಅವಶೇಷಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ, ಅವು ಮಾನವ ಅವಶೇಷಗಳೇ ಎಂಬುದು ಇನ್ನು ತಿಳಿದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.












Click it and Unblock the Notifications