
Delhi MCD Elections: ಸುಲ್ತಾನ್‌ಪುರಿಯಿಂದ ಎಎಪಿ ಟ್ರಾನ್ಸ್‌ಜೆಂಡರ್ ಅಭ್ಯರ್ಥಿ ಬೋಬಿಗೆ ಗೆಲುವು
ನವದೆಹಲಿ, ಡಿಸೆಂಬರ್ 07: ದೆಹಲಿ ಮಹಾನಗರ ಪಾಲಿಕೆ(MCD) ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಎಪಿ ಟ್ರಾನ್ಸ್‌ಜೆಂಡರ್ ಅಭ್ಯರ್ಥಿಯೊಬ್ಬರು ಗೆಲುವು ಸಾಧಿಸಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗ ಹೇಳಿದೆ.
ಟ್ರಾನ್ಸ್‌ಜೆಂಡರ್ ಬೋಬಿ ಅವರು ಸುಲ್ತಾನ್‌ಪುರಿ-ಎ ವಾರ್ಡ್‌ನಿಂದ ಸ್ಪರ್ಧಿಸಿದ್ದರು.
ಬೋಬಿ ಅವರು ಕಾಂಗ್ರೆಸ್ ಅಭ್ಯರ್ಥಿ ವರುಣಾ ಢಾಕಾ ಅವರನ್ನು 6,714 ಮತಗಳ ಅಂತರದಿಂದ ಸೋಲಿಸಿದ್ದಾರೆ.
ಪ್ರತಿಷ್ಠಿತ ಚುನಾವಣೆಯಲ್ಲಿ ಜಯ ಸಾಧಿಸಿರುವ ಬೋಬಿ, ದೆಹಲಿಯನ್ನು ಸುಂದರಗೊಳಿಸುವುದಾಗಿ ಹೇಳಿದ್ದಾರೆ.
Delhi MCD Election Results 2022 : ದೆಹಲಿ ಮಹಾನಗರ ಪಾಲಿಕೆ: ಇಂದು 8 ಗಂಟೆಗೆ ಮತ ಎಣಿಕೆ ಆರಂಭ
ಈ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ತಮ್ಮ ಕ್ಷೇತ್ರವನ್ನು ಸುಂದರಗೊಳಿಸಲು ಮತ್ತು ತನ್ನ ನೆರೆಹೊರೆಯವರ ಜೀವನವನ್ನು ಸುಧಾರಿಸಲು ಬಯಸುವುದಾಗಿ ತಿಳಿಸಿದ್ದಾರೆ.
ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿರುವ (ಎಂಸಿಡಿ) ಭ್ರಷ್ಟಾಚಾರವನ್ನು ತೊಡೆದುಹಾಕಲು ತಾನು ಕೆಲಸ ಮಾಡುತ್ತೇನೆ ಎಂದು ಬೋಬಿ ಹೇಳಿದ್ದಾರೆ.
ಪಕ್ಷದ ಗೆಲುವಿನ ನಂತರ ಮಾತನಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ದೆಹಲಿಯ ಜನತೆಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ದೆಹಲಿಯನ್ನು ಸುಂದರ ನಗರವನ್ನಾಗಿಸಲು ಕೇಂದ್ರ ಸಹಾಯ ಹಾಗೂ ಪ್ರಧಾನಿ ಮೋದಿ ಅವರ ಆಶೀರ್ವಾದ ಬೇಕು ಎಂದು ಹೇಳಿದ್ದಾರೆ.
ದೆಹಲಿಯ ಎಂಸಿಡಿಯಲ್ಲಿ ಕಳೆದ 15 ವರ್ಷಗಳ ಕಾಲ ಬಿಜೆಪಿ ಅಧಿಕಾರದಲ್ಲಿತ್ತು. ಬಿಜೆಪಿಯನ್ನು ಸೋಲುಸುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ದೆಹಲಿ ಮಹಾನಗರ ಪಾಲಿಕೆಯ ಗದ್ದುಗೆಯನ್ನು ಎಎಪಿ ಹಿಡಿದಿದೆ.
ಎಂಸಿಡಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ 134 ಸೀಟುಗಳು ದೊರೆತಿವೆ. ಬಿಜೆಪಿಯು 104 ಸ್ಥಾನಗಳಲ್ಲಿ ಜಯ ಗಳಿಸಿದೆ. ಕಾಂಗ್ರೆಸ್ ಕೇವಲ 9 ಸ್ಥಾನಗಳನ್ನು ಗೆದ್ದುಕೊಂಡಿದೆ. ಮೂರು ಕ್ಷೇತ್ರಗಳಲ್ಲಿ ಪಕ್ಷೇತರರು ಆಯ್ಕೆಯಾಗಿದ್ದಾರೆ.
ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ರಾಜ್ಯಸಭೆ ಸದಸ್ಯ ರಾಘವ್ ಚಡ್ಡಾ ಪಕ್ಷದ ಗೆಲುವಿಗೆ ಹರ್ಷ ವ್ಯಕ್ತಪಡಿಸಿದ್ದಾರೆ.