Breaking: ದೆಹಲಿ ಮಹಾನಗರ ಪಾಲಿಕೆಗೆ ಚುನಾವಣೆ ಘೋಷಣೆ
ನವದೆಹಲಿ, ನವೆಂಬರ್ 04; ತೀವ್ರ ಕುತೂಹಲಕ್ಕೆ ದಾರಿ ಮಾಡಿಕೊಟ್ಟಿದ್ದ ದೆಹಲಿಯ ಮಹಾನಗರ ಪಾಲಿಕೆಗಳ 272 ಸ್ಥಾನಕ್ಕೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಡಿಸೆಂಬರ್ 4ರಂದು ಚುನಾವಣೆ ನಡೆಯಲಿದ್ದು ಫಲಿತಾಂಶಗಳು ಡಿಸೆಂಬರ್ 7ರಂದು ಪ್ರಕಟಗೊಳ್ಳಲಿವೆ.
ಗುಜರಾತ್ ವಿಧಾನಸಭೆ ಚುನಾವಣೆ ಸಮಯದಲ್ಲೇ ದೆಹಲಿಯ ಮಹಾನಗರ ಪಾಲಿಕೆಗಳ ಚುನಾವಣೆ ದಿನಾಂಕ ನಿಗದಿ ಮಾಡಲಾಗಿದ್ದು ಚುನಾವಣೆಯ ಬಗ್ಗೆ ಭಾರೀ ಕುತೂಹಲ ಮೂಡಿಸಿದೆ.
ಈ ಹಿಂದೆ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆ ದಿನಾಂಕ ಘೋಷಣೆ ಮುಂದೂಡಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಎಎಪಿ ಬೇಸರ ವ್ಯಕ್ತಪಡಿಸಿತ್ತು. ಸಮಯಕ್ಕನುಸಾರ ಚುನಾವಣೆ ನಡೆಸಿ, ಬಿಜೆಪಿ ಗೆಲುವು ಸಾಧಿಸಿದ್ದೇ ಆದಲ್ಲಿ ಆಮ್ ಆದ್ಮಿ ಪಕ್ಷ ರಾಜಕೀಯ ನಿವೃತ್ತಿ ಪಡೆದುಕೊಳ್ಳುಲಿದೆ ಎಂದು ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದರು.

ಬಿಜೆಪಿಗೆ ಚುನಾವಣೆಯಲ್ಲಿ ಸೋಲುವ ಭಯ ಕಾಡುತ್ತಿದೆ ಎಂದು ಆರೋಪಿಸಿದ್ದರು. ಕೇಂದ್ರದ ಆದೇಶದ ಮೇರೆಗೆ ಎಂಸಿಡಿ ಚುನಾವಣೆಗಳಿಗೆ ಚುನಾವಣಾ ಆಯೋಗ ದಿನಾಂಕ ನಿಗದಿಪಡಿಸಲು ಹಿಂದೇಟು ಹಾಕುತ್ತಿದೆ ಎಂದು ಟೀಕಿಸಿದ್ದರು.
ಆದರೀಗ ಗುಜರಾತ್ ವಿಧಾನಸಭೆ ಚುನಾವಣೆಯ ಸಮಯದಲ್ಲೇ ದೆಹಲಿ ಪಾಲಿಕೆ ಚುನಾವಣೆ ದಿನಾಂಕ ನಿಗದಿಯಾಗಿದ್ದು ಎಎಪಿ ಪಾಲಿಗೆ ಇದೊಂದು ಬಹು ದೊಡ್ಡ ಸವಾಲಾಗಿದೆ.












Click it and Unblock the Notifications