ದೆಹಲಿ ಸಿಎಂ ರೇಖಾಗುಪ್ತಾಗೆ ಅಧಿಕಾರಕ್ಕೆ ಬಂದ ಮೊದಲ ವಾರವೇ ಬಿಗ್‌ಶಾಕ್!
ದೆಹಲಿಯ ನೂತನ ಮುಖ್ಯಮಂತ್ರಿ ರೇಖಾಗುಪ್ತಾಗೆ ಪ್ರಾರಂಭದಲ್ಲೇ ಸಮಸ್ಯೆ ಎದುರಾಗಿದೆ. ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿಯು ಅಮೋಘ ಸಾಧನೆ ಮಾಡಿದೆ. ಬರೋಬ್ಬರಿ 27 ವರ್ಷಗಳ ನಂತರ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದೆ. ಆದರೆ ಅಧಿಕಾರಕ್ಕೆ ಬರುತ್ತಿದ್ದಂತೆಯೇ ರೇಖಾಗುಪ್ತಾಗೆ ವಿಘ್ನಗಳು ಶುರುವಾಗಿವೆ. ದೆಹಲಿಯಲ್ಲಿ ಪರಿಸ್ಥಿತಿ ತಿಳಿಯಾಗಿ ಇಲ್ಲ. ಮೊದಲ ಬಾರಿ ಶಾಸಕಿಯಾದಾಗಲೇ ರೇಖಾಗುಪ್ತಾ ಅವರಿಗೆ ಮುಖ್ಯಮಂತ್ರಿಯಂತಹ ಮಹತ್ವದ ಜವಾಬ್ದಾರಿ ಸಿಕ್ಕಿದ್ದು. ಮೊದಲ ಹಂತದಲ್ಲೇ ಅವರಿಗೆ ಶಾಕ್ ಎದುರಾಗಿದೆ. ರೇಖಾ ಗುಪ್ತಾ ಅವರಿಗೆ ದೆಹಲಿಯ ಮಾಜಿ ಮುಖ್ಯಮಂತ್ರಿ ಅತಿಶಿ ಅವರು ಶಾಕ್ ಕೊಟ್ಟಿದ್ದಾರೆ. ಅದೇನು ಎನ್ನುವ ವಿವರ ಇಲ್ಲಿದೆ.
ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ವಾರದಲ್ಲೇ ರೇಖಾ ಗುಪ್ತಾಗೆ ಇನ್ನಿಲ್ಲದ ಸಂಕಷ್ಟ ಶುರುವಾಗಿದೆ. ಹೌದು ದೆಹಲಿಯ ನೂತನ ಮುಖ್ಯಮಂತ್ರಿ ರೇಖಾಗುಪ್ತಾ ಅವರಿಗೆ ಚುನಾವಣೆಯಲ್ಲಿ ಬಿಜೆಪಿ ನೀಡಿದ್ದ ಭರವಸೆಗಳನ್ನು ಈಡೇರಿಸುವುದು ಇದೀಗ ಸವಾಲಾಗಿ ಪರಿಣಮಿಸಿದೆ.
ಆಮ್ ಆದ್ಮಿ ಪಾರ್ಟಿಯ ನಾಯಕಿ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅತಿಶಿ ಅವರು ರೇಖಾಗುಪ್ತಾ ಅವರಿಗೆ ಪ್ರಾರಂಭದಲ್ಲೇ ತಲೆನೋವಾಗಿದ್ದಾರೆ. ಬಿಜೆಪಿಯು ದೆಹಲಿ ವಿಧಾನಸಭೆ ಚುನಾವಣೆ ಸಮಯದಲ್ಲಿ ನೀಡಿದ್ದ ಭರವಸೆಯನ್ನು ಕೂಡಲೇ ಜಾರಿ ಮಾಡಬೇಕು ಅಂತ ಆಗ್ರಹಿಸಿದ್ದಾರೆ. ಮಹಿಳೆಯರಿಗೆ ಪ್ರತಿ ತಿಂಗಳೂ 2,500 ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಘೋಷಿಸಲಾಗಿತ್ತು. ಈ ಬಗ್ಗೆ ನಾನು ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಅವರೊಂದಿಗೆ ಚರ್ಚೆ ಮಾಡುವುದಿದೆ. ಮಾತನಾಡುವುದಕ್ಕೆ ಸಮಯ ಕೇಳಿರುವುದಾಗಿ ಅವರು ಹೇಳಿದ್ದಾರೆ.

ಈ ಸಂಬಂಧ ದೆಹಲಿ ಸಿಎಂ ರೇಖಾ ಗುಪ್ತಾ ಅವರಿಗೆ ಪತ್ರ ಬರೆದಿದ್ದು. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ವಿಧಾನಸಭೆ ಚುನಾವಣೆ ಸಮಯದಲ್ಲಿ ಪ್ರಚಾರ ಸಭೆಗಳಲ್ಲಿ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಬಗ್ಗೆ ಭರವಸೆ ಕೊಟ್ಟಿದ್ದರು. ಅಧಿಕಾರಕ್ಕೆ ಬಂದ ಕೂಡಲೇ ಜಾರಿ ಮಾಡುವುದಾಗಿ ಅವರು ಹೇಳಿದ್ದರು. ಆದರೆ, ಮೊದಲ ಕ್ಯಾಬಿನೆಟ್ ಸಭೆಯಲ್ಲಿಯೇ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಯೋಜನೆಗೆ ಸಂಬಂಧಿಸಿದಂತೆ ನಿರ್ಧಾರ ಯಾಕೆ ತೆಗೆದುಕೊಂಡಿಲ್ಲ ಅಂತ ಎಎಪಿ ಶಾಸಕಿ ಅತಿಶಿ ಅವರು ಪ್ರಶ್ನೆ ಮಾಡಿದ್ದಾರೆ.
ಭಾನುವಾರ ಭೇಟಿ ಸಾಧ್ಯತೆ: ಇನ್ನು ದೆಹಲಿಯ ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಹಾಗೂ ಮಾಜಿ ಮುಖ್ಯಮಂತ್ರಿ ಅತಿಶಿ ಅವರು ನಾಳೆ ಭೇಟಿ ಮಾಡಿ ಚರ್ಚೆ ಮಾಡುವ ಸಾಧ್ಯತೆ ಇದೆ. ಯಾಕೆಂದರೆ ನಾಳೆ ಭೇಟಿ ಮಾಡಿ ಚರ್ಚೆ ಮಾಡುವುದಕ್ಕೆ ಅವಕಾಶ ಕೊಡಿ ಎಂದು ಅವರು ಮನವಿ ಮಾಡಿದ್ದಾರೆ. ಅಲ್ಲದೆ ತಾವು ಮಾತ್ರವಲ್ಲದೆ ಪಕ್ಷದ ಶಾಸಕರು ಸಹ ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗಿದೆ.
ವಿಡಿಯೋ ವೈರಲ್: ಇನ್ನು ಈ ನಡುವೆ ದೆಹಲಿ ಸಿಎಂ ರೇಖಾ ಗುಪ್ತಾ ಅವರ ಹಳೆಯ ಹಾಗೂ ಹೊಸ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿವೆ. ರೇಖಾ ಗುಪ್ತಾ ಅವರು ಪೆನ್‌ನ ಕ್ಯಾಪ್ ತೆಗೆಯದೆ ಸಹಿ ಮಾಡುತ್ತಿರುವುದು ಹಾಗೂ ಒಂದೇ ಹೂಗುಚ್ಛವನ್ನು ಬಿಜೆಪಿ ನಾಯಕರು ಪದೇ ಪದೇ ಅವರಿಗೆ ಕೊಡುತ್ತಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
ಭರವಸೆ ಈಡೇರಿಸುವ ಸವಾಲು: ಆಮ್ ಆದ್ಮಿ ಪಾರ್ಟಿ ನೀಡಿದ್ದ ಭರವಸೆಗಳನ್ನು ಈಡೇರಿಸುವುದಾಗಿ ಇಲ್ಲವೇ ಅವರ ಎಲ್ಲಾ ಯೋಜನೆಗಳನ್ನು ಮುಂದುವರಿಸುವುದಾಗಿ ಬಿಜೆಪಿ ಭರವಸೆ ನೀಡಿತ್ತು. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರೇ ಯಾವುದೇ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದರು.












Click it and Unblock the Notifications