Delhi car blast: ದೆಹಲಿ ಕಾರು ಸ್ಫೋಟ ಪ್ರಕರಣದ ತನಿಖೆ NIAಗೆ ಹಸ್ತಾಂತರ

ರಾಷ್ಟ್ರರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಕಾರು ಸ್ಫೋಟವು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಕೆಂಪು ಕೋಟೆ ಬಳಿ ಹುಂಡೈ i20 ಕಾರಿನಲ್ಲಿ ಸ್ಫೋಟ ಸಂಭವಿಸಿ ಎಂಟು ಜನರು ಸಾವನ್ನಪ್ಪಿದ್ದಾರೆ. ಸದ್ಯ ದೆಹಲಿ ಕಾರು ಸ್ಫೋಟ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ರಾಷ್ಟ್ರೀಯ ತನಿಖಾ ದಳಕ್ಕೆ (NIA) ಹಸ್ತಾಂತರಿಸಲಾಗಿದೆ. ಕಾರು ಸ್ಫೋಟದ ಸ್ಥಳದಲ್ಲಿ ಎನ್‌ಐಎ ಮತ್ತು ವಿಧಿವಿಜ್ಞಾನ ತಜ್ಞರ ತಂಡಗಳು ತನಿಖೆ ನಡೆಸುತ್ತಿವೆ.

ರಾಷ್ಟ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ) ಸಹ ಸ್ಫೋಟದ ಸ್ಥಳದಲ್ಲಿ ತನಿಖೆ ನಡೆಸಿದೆ. ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟದ ತನಿಖೆ ನಡೆಯುತ್ತಿದ್ದು, ಘಟನಾ ಸ್ಥಳದಿಂದ ಅಧಿಕಾರಿಗಳು ಮತ್ತು ವಿಧಿವಿಜ್ಞಾನ ತಜ್ಞರು ಮಾದರಿಗಳನ್ನು ಸಂಗ್ರಹಿಸುತ್ತಿದ್ದಾರೆ. ಕಾರು ಸ್ಫೋಟದ ಸ್ಥಳದ ಬಳಿಯ ಲಜಪತ್ ರಾಯ್ ಮಾರುಕಟ್ಟೆ ಮತ್ತು ಪ್ರದೇಶದಲ್ಲಿ ಫಾರೆನ್ಸಿಕ್ ತಂಡ ತನಿಖೆ ಮುಂದುವರೆಸಿದೆ.

Delhi Red Fort Blast NIA Takes Over Car Explosion Probe

ದೆಹಲಿ ಕಾರು ಸ್ಫೋಟದ ನಂತರ ಮತ್ತೊಂದು ಸುತ್ತಿನ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ತವ್ಯ ಭವನದಲ್ಲಿರುವ ಗೃಹ ಸಚಿವಾಲಯಕ್ಕೆ ಆಗಮಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೋಲಾದಿಂದ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ದೆಹಲಿಯ ಕೆಂಪು ಕೋಟೆ ಬಳಿ ನಿನ್ನೆ ಸಂಜೆ ನಡೆದ ಸ್ಫೋಟದ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಇದು ದುರದೃಷ್ಟಕರ ಘಟನೆ. ಎಲ್ಲಾ ಸಂಸ್ಥೆಗಳು ತಮ್ಮ ಕೆಲಸ ಮಾಡುತ್ತಿವೆ. ನಾವು ನಿನ್ನೆ ಆಸ್ಪತ್ರೆಗೆ ಹೋಗಿ ಗಾಯಾಳುಗಳನ್ನು ಭೇಟಿ ಮಾಡಿದ್ದೇವೆ. ಸರ್ಕಾರದ ಬೆಂಬಲ ಅವರೊಂದಿಗಿದೆ. ಅವರ ಕುಟುಂಬಕ್ಕೆ ಯಾವುದೇ ಸಮಸ್ಯೆಗಳು ಎದುರಾಗಬಾರದು ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಹೇಳಿದ್ದಾರೆ.

ಸುಮ್ಮನೆ ಬಿಡೋದಿಲ್ಲ: ಮೋದಿ ಎಚ್ಚರಿಕೆ

ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಬಳಿ ನಡೆದ ಸ್ಫೋಟದ ಹಿಂದಿನ ಪಿತೂರಿಗಾರರನ್ನು ಸುಮ್ಮನೆ ಬಿಡಲಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಮ್ಮ ಸಂಸ್ಥೆಗಳು ಈ ಪಿತೂರಿಯನ್ನು ಭೇದಿಸುತ್ತವೆ. ಇದರ ಹಿಂದಿನ ಪಿತೂರಿಗಾರರನ್ನು ಸುಮ್ಮನೆ ಬಿಡಲಾಗುವುದಿಲ್ಲ ಎಂದು ಅವರು ಭೂತಾನ್‌ನ ಥಿಂಪುವಿನಲ್ಲಿ ಹೇಳಿದ್ದಾರೆ.

ಇಂದು ನಾನು ಭಾರವಾದ ಹೃದಯದಿಂದ ಇಲ್ಲಿಗೆ ಬಂದಿದ್ದೇನೆ. ನಿನ್ನೆ ಸಂಜೆ ದೆಹಲಿಯಲ್ಲಿ ನಡೆದ ಭೀಕರ ಘಟನೆ ಎಲ್ಲರನ್ನೂ ನೋವುಂಟು ಮಾಡಿದೆ. ಸಂತ್ರಸ್ತ ಕುಟುಂಬಗಳ ದುಃಖ ನನಗೆ ಅರ್ಥವಾಗಿದೆ. ಇಂದು ಇಡೀ ರಾಷ್ಟ್ರವು ಅವರೊಂದಿಗೆ ನಿಂತಿದೆ ಎಂದು ಮೋದಿ ಹೇಳಿದ್ದಾರೆ. ಘಟನೆಯ ತನಿಖೆಯಲ್ಲಿ ಭಾಗಿಯಾಗಿರುವ ಎಲ್ಲಾ ಸಂಸ್ಥೆಗಳೊಂದಿಗೆ ರಾತ್ರಿಯಿಡೀ ನಿರಂತರ ಸಂಪರ್ಕದಲ್ಲಿದ್ದೆ ಎಂದಿದ್ದಾರೆ.

ಮೂಲಗಳ ಪ್ರಕಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ನಿವಾಸಿ ಉಮರ್ ಮೊಹಮ್ಮದ್ ಎಂಬುವವರು ಐ20 ಕಾರಿನ ಮಾಲೀಕರಾಗಿದ್ದರು. ಸ್ಫೋಟ ಸಂಭವಿಸಿದಾಗ ಅವರೇ ಆ ಕಾರನ್ನು ಚಲಾಯಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಸದ್ಯ ಇದರ ತನಿಖೆ ಮುಂದುವರಿದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+