ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್-19 ಪರೀಕ್ಷೆಗಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ಸರ್ಕಾರಿ ಶಿಕ್ಷಕರ ನಿಯೋಜನೆ

|
Google Oneindia Kannada News

ನವದೆಹಲಿ, ಡಿಸೆಂಬರ್ 26: ವಿದೇಶದಿಂದ ಆಗಮಿಸುವ ಪ್ರಯಾಣಿಕರು ಕೋವಿಡ್-19 ಸೂಕ್ತ ನಡವಳಿಕೆಯನ್ನು ಅನುಸರಿಸುತ್ತಾರೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಡಿಸೆಂಬರ್ 31 ರಿಂದ ಜನವರಿ 15ರವರೆಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ನಿಯೋಜಿಸಲಾಗುವುದು ಎಂದು ದೆಹಲಿ ಸರ್ಕಾರ ನಿರ್ಧರಿಸಿದೆ.

ದೆಹಲಿಯಲ್ಲಿ ಚಳಿಗಾಲದ ರಜೆಯ ಕಾರಣ ಈ ಅವಧಿಯಲ್ಲಿ ಶಾಲೆಗಳನ್ನು ಮುಚ್ಚಲಾಗುವುದು ಎಂದು ಸೋಮವಾರ ಸರ್ಕಾರದ ಮೂಲಗಳು ತಿಳಿಸಿದೆ. ಕೋವಿಡ್ ಪ್ರಕರಣಗಳ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಸಿದ್ಧತೆಗಳನ್ನು ಪರಿಶೀಲಿಸಲು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಉನ್ನತ ಮಟ್ಟದ ಪರಿಶೀಲನಾ ಸಭೆಯನ್ನು ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಜಾಗತಿಕ ಮಟ್ಟದ ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧತೆಯನ್ನು ಖಚಿತಪಡಿಸಿಕೊಳ್ಳಲು ದೆಹಲಿ ಸರ್ಕಾರವು ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಭೌತಿಕವಾಗಿ ಭೇಟಿ ನೀಡಲು ಮುಂದಾಗಿದೆ.

Delhi: State Govt Teachers will Deployed At Airport to Check Covid Guidelines For Air Passengers

ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಸಿದ್ಧತೆ:

"ನಾವು ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಭೌತಿಕವಾಗಿ ಭೇಟಿ ನೀಡಲು ಪ್ರಾರಂಭಿಸಿದ್ದೇವೆ. ಹಾಸಿಗೆಗಳು, ದ್ರವ ವೈದ್ಯಕೀಯ ಆಮ್ಲಜನಕ, ವೆಂಟಿಲೇಟರ್‌ಗಳು ಮತ್ತು ಇತರ ಉಪಕರಣಗಳ ದಾಸ್ತಾನು ಸಿದ್ಧಪಡಿಸಲಾಗುತ್ತಿದೆ. ಸೋಮವಾರ ಸಂಜೆಯ ವೇಳೆಗೆ ಇದು ಸಿದ್ಧವಾಗಲಿದೆ ಎಂದು ಪೂರ್ವ ದೆಹಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅನಿಲ್ ಬಂಕಾ ತಿಳಿಸಿದ್ದಾರೆ.

ಈ ಮಧ್ಯೆ ಕೇಂದ್ರದ ನಿರ್ದೇಶನಗಳನ್ನು ಅನುಸರಿಸಿ ಮಂಗಳವಾರ ನಗರದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಅಣಕು ಡ್ರಿಲ್ ನಡೆಸಲಾಗುವುದು ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಇದರ ಜೊತೆಗೆ ಮತ್ತೊಬ್ಬ ಅಧಿಕಾರಿ ಸುದ್ದಿ ಪೋರ್ಟಲ್‌ಗೆ ಶೀಘ್ರದಲ್ಲೇ ಪರೀಕ್ಷೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ಹೇಳಿದರು. ಪ್ರಸ್ತುತ ನಗರದಲ್ಲಿ ಪ್ರತಿದಿನ ಸುಮಾರು 2,500 ರಿಂದ 3,000 ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.

English summary
Delhi: State Govt Teachers will Deployed At Airport to Check Covid Guidelines For Air Passengers. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X