Bomb Threat: ಬೆಳ್ಳಂ ಬೆಳಗ್ಗೆ ದೆಹಲಿ-ವಾರಣಾಸಿ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ
ನವದೆಹಲಿ, ಮೇ. 28: ಮಂಗಳವಾರ ಬೆಳ್ಳಂ ಬೆಳಗ್ಗೆ ದೆಹಲಿಯಿಂದ ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಎಎನ್‌ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ತಕ್ಷಣವೇ ಎಲ್ಲಾ ಪ್ರಯಾಣಿಕರನ್ನು ಸ್ಥಳಾಂತರಿಸಲಾಗಿದ್ದು, ತಪಾಸಣೆಗಾಗಿ ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಸ್ಥಳಾಂತರಿಸಲಾಯಿತು ಎಂದಿದ್ದಾರೆ.
ಬಾಂಬ್ ಬೆದರಿಕೆ ಬಂದ ನಂತರ ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಸ್ಥಳಾಂತರಿಸಲಾಗಿದೆ. ವಿಮಾನವನ್ನು ಸ್ಥಳಾಂತರಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ವಿಮಾನಯಾನ ಭದ್ರತೆ ಮತ್ತು ಬಾಂಬ್ ನಿಷ್ಕ್ರಿಯ ತಂಡವು ಪ್ರಸ್ತುತ ಸ್ಥಳದಲ್ಲಿದೆ ಎಂದು ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.

ದೆಹಲಿ-ವಾರಣಾಸಿ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ
ಮಂಗಳವಾರ ಬೆಳಗ್ಗೆ 5.35ಕ್ಕೆ ವಿಮಾನ ದೆಹಲಿಯಿಂದ ಟೇಕ್ ಆಫ್ ಆಗಬೇಕಿತ್ತು. ಬಾಂಬ್ ಬೆದರಿಕೆ ಸುದ್ದಿ ಬಂದ ಕೂಡಲೆ ಎಲ್ಲಾ ಪ್ರಯಾಣಿಕರನ್ನು ತುರ್ತು ದ್ವಾರದ ಮೂಲಕ ಸ್ಥಳಾಂತರಿಸಲಾಗಿದೆ. ಪ್ರಯಾಣಿಕರೆಲ್ಲರು ಸುರಕ್ಷಿತವಾಗಿದ್ದಾರೆ, ಪ್ರಸ್ತುತ ವಿಮಾನವನ್ನು ಪರಿಶೀಲಿಸಲಾಗುತ್ತಿದೆ.ವಿಮಾನದಲ್ಲಿ ಬಾಂಬ್ ಇದೆ ಎಂಬ ಸುದ್ದಿ ತಿಳಿದ ಕೂಡಲೇ ದೆಹಲಿ ಅಗ್ನಿಶಾಮಕ ತಂಡವು ಸ್ಥಳಕ್ಕೆ ತಲುಪಿತು.
VIDEO | Passengers of #IndiGo flight from #Delhi to #Varanasi were evacuated via emergency exit following a bomb threat, earlier today.
— Press Trust of India (@PTI_News) May 28, 2024
The aircraft has been moved to isolation bay and further investigations are being carried out. More details are awaited.
(Source: Third Party) pic.twitter.com/gg8EUKU8U0
ಇನ್ನು, ಇತ್ತೀಚೆಗೆ ದೇಶದಲ್ಲಿ ಹಲವು ಸರ್ಕಾರಿ ಸಂಸ್ಥೆಗಳು, ಶಾಲೆಗಳು, ಕಾಲೇಜುಗಳು, ಆಸ್ಪತ್ರೆಗಳು, ವಿಮಾನ ನಿಲ್ದಾಣಗಳು ಮತ್ತು ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಮೇಲ್‌ಗಳನ್ನು ಕಳುಹಿಸಲಾಗಿದೆ. ಇಲ್ಲಿಯವರೆಗೆ, ಅವೆಲ್ಲವೂ ನಕಲಿ ಎಂದು ತಿಳಿದುಬಂದಿದೆ.
ಸೋಮವಾರ ಮುಂಬೈನ ತಾಜ್ ಮಹಲ್ ಪ್ಯಾಲೇಸ್ ಹೋಟೆಲ್ ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಆದರೆ ಎರಡು ಸ್ಥಳಗಳಲ್ಲಿ ಕೂಲಂಕುಷವಾಗಿ ಶೋಧ ನಡೆಸಿದರೂ ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ.
ಕಳೆದ ವಾರ, ಲೇಡಿ ಶ್ರೀ ರಾಮ್ ಕಾಲೇಜು ಮತ್ತು ದೆಹಲಿ ವಿಶ್ವವಿದ್ಯಾನಿಲಯದ ಇತರ ಕೆಲವು ಕಾಲೇಜುಗಳಿಗೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದವು. ನಂತರ ಅನುಮಾನಾಸ್ಪದವಾಗಿ ಏನೂ ಪತ್ತೆಯಾಗದ ಕಾರಣ ಅದು ಸುಳ್ಳು ಎಂದು ತಿಳಿದುಬಂದಿದೆ. ಬೆಂಗಳೂರಿನ ಆಸ್ಪತ್ರೆ ಮತ್ತು ಶಾಲೆಗಳಿಗೂ ಬಾಂಬ್ ಬೆದರಿಕೆ ಹಾಕಲಾಗಿತ್ತು.












Click it and Unblock the Notifications