ಕರ್ನಾಟಕದಲ್ಲಿ ಮುಂಗಾರು ದುರ್ಬಲ: ದೆಹಲಿಯಲ್ಲಿ ಭಾರಿ ಮಳೆ ಶುರು

ನವದೆಹಲಿ, ಜೂನ್ 22: ದೆಹಲಿಯಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ.ಇಂದು ದೆಹಲಿಯ ಸುತ್ತಮುತ್ತಲ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕಳೆದ ಎರಡು ದಿನಗಳಿಂದ ಮಳೆ ಬರುತ್ತಿರುವ ಕಾರಣ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್‌ಗೆ ಬಂದು ನಿಂತಿದ್ದು, ಜನತೆ ಸ್ವಲ್ಪ ನಿರಾಳರಾಗಿದ್ದಾರೆ.

ಜೂನ್ 25ರಷ್ಟೊತ್ತಿಗೆ ಹರ್ಯಾಣ, ದೆಹಲಿಯಲ್ಲಿ ಮಳೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಇನ್ನು ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಂಡಿದೆ. ಕೆಲವೇ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ.

ಕರ್ನಾಟಕದ ಕರಾವಳಿ ಭಾಗದಲ್ಲಿ ಹೆಚ್ಚು ಮಳೆ

ಕರ್ನಾಟಕದ ಕರಾವಳಿ ಭಾಗದಲ್ಲಿ ಹೆಚ್ಚು ಮಳೆ

ಮಂಗಳೂರು, ಅಂಕೋಲಾ, ಕುಮಟಾ, ಧರ್ಮಸ್ಥಳ, ಕುಂದಾಪುರ, ಕೋಟಾ, ಮಡಿಕೇರಿ, ಕೊಲ್ಲೂರು, ಉಡುಪಿ, ಮೂಡಬಿದಿರೆ, ಪಣಂಬೂರು, ಕದ್ರ, ಹೊನ್ನಾವರ, ಪುತ್ತೂರು, ಕೊಟ್ಟಿಗೆಹಾರ, ಸಕಲೇಶಪುರದಲ್ಲಿ ಹೆಚ್ಚು ಮಳೆಯಾಗಿದೆ.

ಜೂನ್ 26ರವರೆಗೆ ಕರ್ನಾಟಕದ ವಾತಾವರಣ ಹೇಗಿರಲಿದೆ

ಜೂನ್ 26ರವರೆಗೆ ಕರ್ನಾಟಕದ ವಾತಾವರಣ ಹೇಗಿರಲಿದೆ

ಜೂನ್ 26ರವರೆಗೆ ಕರ್ನಾಟಕದ ಕರಾವಳಿ ಭಾಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗಲಿದೆ. ಜೂನ್ 24ರಂದು ಮಳೆ ಕೊಂಚ ಬಿಡುವು ಪಡೆಯಲಿದೆ. ಜೂನ್ 22,23ರಂದು ಭಾರಿ ಮಳೆಯಾಗುವ ನಿರೀಕ್ಷೆ ಇದೆ.

ಮಳೆ ಬೀಳದ ಪ್ರದೇಶಗಳು

ಮಳೆ ಬೀಳದ ಪ್ರದೇಶಗಳು

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಸಾಧಾರಣ ಮಳೆಯಾಗಲಿದೆ. ಜೂನ್ 26ರಂದು ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ. 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+