ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ದೆಹಲಿಯಲ್ಲಿ ಸಾಮೂಹಿಕ ಅತ್ಯಾಚಾರ: ನಿರ್ಭಯಾ ನೆನಪಿಸುವ ಮತ್ತೊಂದು ಪ್ರಕರಣ

|
Google Oneindia Kannada News

ನವದೆಹಲಿ, ಅಕ್ಟೋಬರ್‌ 19: ದೆಹಲಿಯ ಗಾಜಿಯಾಬಾದ್‌ನಲ್ಲಿ 'ನಿರ್ಭಯಾ ಅತ್ಯಾಚಾರ' ಪ್ರಕರಣವನ್ನು ನೆನಪಿಸುವಂತಹ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ರಾಷ್ಟ್ರ ರಾಜಧಾನಿಯಲ್ಲಿ 40 ವರ್ಷದ ಮಹಿಳೆಯನ್ನು ಅಪಹರಿಸಿರುವ ಐವರು ಗಾಜಿಯಾಬಾದ್‌ನಲ್ಲಿ ಅತ್ಯಾಚಾರ ನಡೆಸಿದ್ದಾರೆ. ಎರಡು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿರುವ ದುರುಳರು, ಆಕೆಗೆ ಚಿತ್ರಹಿಂಸೆಯನ್ನೂ ನೀಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಸದ್ಯ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿರುವ ಸಂತ್ರಸ್ತೆಗೆ ಐವರು ಆರೋಪಿಗಳು ಪರಿಚಿತರೆಂದು ತಿಳಿದುಬಂದಿದೆ. ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನೊಬ್ಬನಿಗಾಗಿ ಶೋಧ ನಡೆಸಲಾಗುತ್ತಿದೆ.

Delhi Woman Allegedly Kidnapped In Ghaziabad Gang Raped Tortured

'ಅತ್ಯಾಚಾರಕ್ಕೆ ಒಳಗಾಗಿರುವ ಮಹಿಳೆಯ ಸ್ಥಿತಿ ತುಂಬಾ ಗಂಭೀರವಾಗಿದೆ. ಆಕೆಯ ದೇಹದೊಳಗೆ ತೂರಿಸಲಾಗಿರುವ ಕಬ್ಬಿಣದ ರಾಡ್ ಇನ್ನೂ ಇದೆ' ಎಂದು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಟ್ವೀಟ್ ಮಾಡಿದ್ದಾರೆ.

ದೆಹಲಿಗೆ ಸಮೀಪವಿರುವ ಗಾಜಿಯಾಬಾದ್‌ನ ಆಶ್ರಮ ರಸ್ತೆಯ ಬಳಿ ಮಹಿಳೆಯನ್ನು ಎಸೆಯಲಾಗಿತ್ತು. ಆಕೆ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಆಕೆಯನ್ನು ಜಿಟಿಬಿ ಆಸ್ಪತ್ರೆಗೆ ಕರೆದೊಯ್ದು ಚಿಕೆತ್ಸೆ ನೀಡಲಾಗುತ್ತಿದೆ. ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಜನ್ಮದಿನದ ಆಚರಣೆಗೆ ತೆರಳಿದ್ದ ಮಹಿಳೆಯನ್ನು ಗಾಜಿಯಾಬಾದ್‌ನಲ್ಲಿ ಅಪಹರಿಸಲಾಗಿತ್ತು. ಕಾರಿನಲ್ಲಿ ಬಂದಿದ್ದ ಐವರು ದುಷ್ಕರ್ಮಿಗಳು ಆಕೆಯನ್ನು ಅಪಹರಿಸಿ ಬೇರೊಂದು ಸ್ಥಳಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಆಕೆಯನ್ನು ಕೂಡಿ ಹಾಕಿ ಎರಡು ದಿನಗಳ ಕಾಲ ಹಿಂಸೆ ನೀಡಿದ್ದಾರೆ. ಸಾಮೂಹಿಕ ಅತ್ಯಾಚಾರವನ್ನೂ ಎಸಗಿದ್ದಾರೆ. ನಿರ್ಭಯಾ ಪ್ರಕರಣದಲ್ಲಿ ನಡೆದಂತೆ ಆಕೆಯ ದೇಹದಲ್ಲಿಯೂ ಕಬ್ಬಿನದ ರಾಡನ್ನು ತುರುಕಿದ್ದಾರೆ ಎಂದು ತಿಳಿದುಬಂದಿದೆ.

'ಗಾಜಿಯಾಬಾದ್‌ನಲ್ಲಿ ದೆಹಲಿ ಯುವತಿಯನ್ನು ಅಪಹರಿಸಲಾಗಿದೆ. ಎರಡು ದಿನಗಳ ಕಾಲ, ಐವರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಆಕೆಯ ಖಾಸಗಿ ಭಾಗಗಳಲ್ಲಿ ರಾಡ್ ಅನ್ನು ತುರುಕಿದ್ದಾರೆ. ರಾಡ್ ಇನ್ನೂ ಆಕೆಯ ದೇಹದೊಳಗೆ ಇದೆ. ಆಕೆ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ' ಎಂದು ಮಹಿಳಾ ಆಯೋಗ ತಿಳಿಸಿದೆ.

ಪ್ರಕರಣವು ಗಂಭೀರವಾಗಿದೆ. ಆ ಹಿನ್ನೆಲೆಯಲ್ಲಿ, ಆರೋಪಿಗಳ ವಿವರ ನೀಡುವಂತೆ ಗಾಜಿಯಾಬಾದ್‌ ಪೊಲೀಸ್ ವರಿಷ್ಠಾಧಿಕಾರಿಗೆ ದೆಹಲಿ ಮಹಿಳಾ ಆಯೋಗ ನೋಟಿಸ್‌ ನೀಡಿದೆ.

English summary
Woman was gang raped in Ghaziabad near Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X