ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಿಡ್ನಿ ಕಸಿ ಚಿಕಿತ್ಸೆ ನಂತರ ಮನೆಗೆ ಮರಳಿದ ಜೇಟ್ಲಿ

By Sachhidananda Acharya
|
Google Oneindia Kannada News

ನವದೆಹಲಿ, ಜೂನ್ 4: ಕಿಡ್ನಿ ಕಸಿ ಚಿಕಿತ್ಸೆಯ ನಂತರ ಹಣಕಾಸು ಸಚಿವ ಅರುಣ್ ಜೇಟ್ಲಿ ಮನೆಗೆ ಮರಳಿದ್ದಾರೆ. ಅವರು ಮೂರು ವಾರಗಳ ಕಾಲ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು.

ಈ ಸಂಬಂಧ ಟ್ಟೀಟ್ ಮಾಡಿರುವ 65 ವರ್ಷದ ಅರುಣ್ ಜೇಟ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರು, ದಾದಿಯರು ಮತ್ತು ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಮೇ 12ರಂದು ಅರುಣ್ ಜೇಟ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮೇ 14ರಂದು ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ಅಲರ್ಜಿಗೆ ಒಳಗಾಗುವ ಸಾಧ್ಯತೆ ಇದ್ದುದರಿಂದ ಆಸ್ಪತ್ರೆಯ ಐಸಿಯುನಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.

ಅರುಣ್ ಜೇಟ್ಲಿ ಅವರಿಗೆ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಅರುಣ್ ಜೇಟ್ಲಿ ಅವರಿಗೆ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ

ಆಸ್ಪತ್ರೆಯಿಂದ ಬಿಡುಗಡೆ ಹೊಂದುತ್ತಿರುವ ಸಂದರ್ಭದಲ್ಲಿ ತಾವು ಗುಣಮುಖರಾಗಲೆಂದು ಪ್ರಾರ್ಥಿಸಿದ ಹಿತೈಷಿಗಳು, ಸಹದ್ಯೋಗಿಗಳು ಮತ್ತು ಗೆಳೆಯರಿಗೂ ಅವರು ಧನ್ಯವಾದ ಹೇಳಿದ್ದಾರೆ.

Delighted to be back at Home: Arun Jaitley

ಈ ಹಿಂದೆಯೇ ಅರುಣ್ ಜೇಟ್ಲಿ ಆಸ್ಪತ್ರೆ ಸೇರಿದ ಹಿನ್ನೆಲೆಯಲ್ಲಿ ಅವರ ಹಣಕಾಸು ಖಾತೆಯನ್ನು ಹೆಚ್ಚುವರಿ ಹೊಣೆಗಾರಿಕೆಯಾಗಿ ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರಿಗೆ ನೀಡಲಾಗಿದೆ.

ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ನಾನು ಆರಾಮವಾಗಿದ್ದೇನೆ. ಕೆಲವೇ ದಿನಗಳಲ್ಲಿ ಚೇತರಿಸಿಕೊಂಡು ಕೆಲಸಕ್ಕೆ ವಾಪಾಸಾಗುತ್ತೇನೆ ಎಂದು ಜೇಟ್ಲಿ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

English summary
After three-week stay at AIIMS for a kidney transplant, Union Minister Arun Jaitley is back to home.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X