Breakthrough Infection; ಡೆಲ್ಟಾ, ಆಲ್ಫಾ ರೂಪಾಂತರ ಪ್ರಮುಖ ಕಾರಣ...
ನವದೆಹಲಿ, ಆಗಸ್ಟ್ 23: ಇದುವರೆಗೂ ದೇಶದಲ್ಲಿ ದಾಖಲಾಗಿರುವ ಪ್ರಗತಿ ಸೋಂಕಿನ ಪ್ರಕರಣಗಳಿಗೆ (Breakthrough infection) ಡೆಲ್ಟಾ ಹಾಗೂ ಆಲ್ಫಾ ರೂಪಾಂತರಗಳು ಕಾರಣವಾಗಿವೆ. ಇವುಗಳ ಹೊರತಾಗಿ ಬೇರೆ ಯಾವುದೇ ರೂಪಾಂತರ ಪತ್ತೆಯಾಗಿಲ್ಲ ಎಂದು ಜೈವಿಕ ತಂತ್ರಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
'ದೇಶದಲ್ಲಿ ದಾಖಲಾಗುತ್ತಿರುವ ಮರು ಸೋಂಕು, ಪ್ರಗತಿ ಸೋಂಕಿನ ಪ್ರಕರಣಗಳಿಗೆ ಡೆಲ್ಟಾ, ಆಲ್ಫಾ ರೂಪಾಂತರಗಳೇ ಕಾರಣವಾಗಿವೆ ಹೊರತು ಬೇರೆ ರೂಪಾಂತರವಿಲ್ಲ ಎಂಬುದು ಜೆನೋಮ್ ಸೀಕ್ವೆನ್ಸಿಂಗ್‌ನಲ್ಲಿ ಕಂಡುಬಂದಿದೆ' ಎಂದು ಹೇಳಿದ್ದಾರೆ.
ಸೋಂಕಿನ ವಿರುದ್ಧ ಹೋರಾಡಲು ಸಂಪೂರ್ಣ ಪ್ರಮಾಣದ ಕೊರೊನಾ ಲಸಿಕೆ ಪಡೆದುಕೊಂಡ ನಂತರವೂ ಮತ್ತೆ ಸೋಂಕು ಕಾಣಿಸಿಕೊಂಡರೆ ಅದನ್ನು breakthrough infection ಎಂದು ಕರೆಯಲಾಗುತ್ತದೆ.

ಲಸಿಕೆಯ ಪರಿಣಾಮಕಾರಿ ಅಂಶಗಳನ್ನು ತಪ್ಪಿಸಿ ಸೋಂಕು ತಗುಲುವ ಪ್ರಮಾಣ ಹೆಚ್ಚಾಗಿದೆ. ಕೊರೊನಾ ಸೋಂಕಿನ ಜೆನೋಮ್ ಸೀಕ್ವೆನ್ಸಿಂಗ್‌ನಲ್ಲಿ (ವಂಶವಾಹಿ ಪತ್ತೆ ಪರೀಕ್ಷೆ) ತೊಡಗಿಕೊಂಡಿರುವ INSACOG, ದೇಶದಲ್ಲಿ ಪ್ರಗತಿ ಸೋಂಕಿನ ಪ್ರಕರಣಗಳು ಹೆಚ್ಚಿನ ಮಟ್ಟದಲ್ಲಿ ದಾಖಲಾಗುತ್ತಿರುವ ಕುರಿತು ಕಳೆದ ವಾರ ಉಲ್ಲೇಖಿಸಿದೆ.
ಇದಾಗ್ಯೂ ಸೋಂಕು ಗಂಭೀರ ಸ್ವರೂಪ ಪಡೆಯುವುದನ್ನು ಹಾಗೂ ಸೋಂಕಿನಿಂದ ಸಂಭವಿಸುವ ಮರಣ ಪ್ರಮಾಣವನ್ನು ತಗ್ಗಿಸುವಲ್ಲಿ ಕೊರೊನಾ ಲಸಿಕೆ ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ಭರವಸೆ ನೀಡಿದೆ.
ಈ ಎಲ್ಲಾ ಪ್ರಗತಿ ಸೋಂಕಿಗೆ ಡೆಲ್ಟಾ ರೂಪಾಂತರವೇ ಕಾರಣ ಎಂಬುದು ಜೆನೋಮ್ ಸೀಕ್ವೆನ್ಸಿಂಗ್‌ನಲ್ಲಿ ಪತ್ತೆಯಾಗಿರುವುದಾಗಿ ತಿಳಿಸಿದೆ.
ದೇಶದಲ್ಲಿ ಹೊಸ ಪ್ರಕರಣಗಳ ಪತ್ತೆ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲಾಗುತ್ತಿದೆ. 30,230 ಸೋಂಕಿನ ಪ್ರಕರಣಗಳ ಮಾದರಿಗಳನ್ನು ಪರೀಕ್ಷಿಸಿದ್ದು, ಅದರಲ್ಲಿ 20,324 ಪ್ರಕರಣಗಳಿಗೆ ಡೆಲ್ಟಾ ರೂಪಾಂತರ ಕಾರಣವಾಗಿದೆ ಎಂದು ಮಾಹಿತಿ ನೀಡಿದೆ.
ಬರೀ ಭಾರತದಲ್ಲಿ ಮಾತ್ರವಲ್ಲ, ವಿಶ್ವದಾದ್ಯಂತ ಡೆಲ್ಟಾ ಹಾಗೂ ಡೆಲ್ಟಾ ಪ್ಲಸ್ ರೂಪಾಂತರಗಳ ಸಂಖ್ಯೆ ಹೆಚ್ಚಾಗಿದ್ದು, ಲಸಿಕೆ ಪಡೆದುಕೊಂಡ ನಂತರವೂ ಸೋಂಕು ತಾಗುತ್ತಿದೆ. ಭಾರತದಲ್ಲಿ ಕೇರಳ ರಾಜ್ಯದಲ್ಲಿ ಇಂಥ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದೆ.

ಮೇ ತಿಂಗಳಿನಿಂದಲೂ ಅಮೆರಿಕದಲ್ಲಿ ಪ್ರಗತಿ ಸೋಂಕಿನ ಪ್ರಕರಣಗಳಲ್ಲಿ ಭಾರೀ ಹೆಚ್ಚಳವಾಗಿದೆ. ಅಮೆರಿಕದಲ್ಲಿ ಈ ಕಾರಣಕ್ಕೆ ಕೊರೊನಾ ಲಸಿಕೆಯ ಬೂಸ್ಟರ್ ಡೋಸ್‌ಗಳನ್ನು ನೀಡುವ ತಯಾರಿಯಲ್ಲಿದೆ.
ದೇಶದಲ್ಲಿ ಪ್ರಗತಿ ಸೋಂಕು ಹೆಚ್ಚಿನ ಮಟ್ಟದಲ್ಲಿ ಹಲವು ಭಾಗಗಳಲ್ಲಿ ವರದಿಯಾಗುತ್ತಿದ್ದು, ಲಸಿಕೆಯೊಂದೇ ಸೋಂಕಿನ ವಿರುದ್ಧ 100% ರಕ್ಷಣೆ ನೀಡಲು ಸಾಧ್ಯವಿಲ್ಲ ಎಂಬುದನ್ನು ಈಚೆಗೆ ವೈದ್ಯಕೀಯ ವಿಶ್ಲೇಷಣೆಯೊಂದು ತಿಳಿಸಿದೆ.
ಜೀವಕೋಶಕ್ಕೆ ದಾಳಿ ಮಾಡಲು, ಹಾಗೆಯೇ ಪುನರುತ್ಪತ್ತಿಯಾಗುವಲ್ಲಿ ಡೆಲ್ಟಾ ಸೋಂಕು ಅತಿ ಸಮರ್ಥವಾಗಿದೆ ಎಂದು ಕೇರಳ ಐಎಂಎ ಸಂಶೋಧನಾ ಕೋಶದ ಉಪಾಧ್ಯಕ್ಷ ಡಾ. ರಾಜೀವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದೃಷ್ಟವಶಾತ್ ಹೆಚ್ಚಿನ ಪ್ರಗತಿ ಸೋಂಕು ಮೂಗು ಅಥವಾ ಗಂಟಲಿನಲ್ಲಿ ಮಾತ್ರ ಉಳಿಯುತ್ತಿದೆ. ಶ್ವಾಸಕೋಶದವರೆಗೂ ತಲುಪುತ್ತಿಲ್ಲ. ಸಂಪೂರ್ಣವಾಗಿ ಲಸಿಕೆ ಹಾಕಿದ ವಯಸ್ಕರಲ್ಲಿ ಗಂಭೀರವಾದ ಸೋಂಕು ಅಪರೂಪ ಎಂದು ಹೇಳಿದ್ದಾರೆ.
ಹೆಚ್ಚಿನ ಲಸಿಕಾ ವ್ಯಾಪ್ತಿ ಹಾಗೂ ಸೋಂಕಿನ ವಿರುದ್ಧ ಕಡಿಮೆ ರೋಗನಿರೋಧಕ ಶಕ್ತಿ ಹೊಂದಿರುವ ರಾಜ್ಯಗಳಲ್ಲಿ 40 ಸಾವಿರಕ್ಕೂ ಹೆಚ್ಚು ಪ್ರಗತಿಶೀಲ ಸೋಂಕುಗಳನ್ನು ಹೊಂದುವುದು ಸಹಜ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ. ಇದಾಗ್ಯೂ ಲಸಿಕೆಗಳು ತೀವ್ರ ರೋಗವನ್ನು ತಡೆಗಟ್ಟುವ ಸಾಮರ್ಥ್ಯ ಹೊಂದಿವೆ. ದೇಶದಲ್ಲಿ ಮರಣ ಸಾಧ್ಯತೆಯನ್ನು ಗಣನೀಯವಾಗಿ ತಗ್ಗಿಸಿವೆ ಎಂದು ತಜ್ಞರು ಒಟ್ಟಾರೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
-
Vastu Plants: ಮನೆಯಲ್ಲೇ ಐಶ್ವರ್ಯ ಹೆಚ್ಚಿಸಬೇಕಾ? ಈ 5 ಸಸ್ಯಗಳನ್ನು ಬೆಳೆಸಿ -
Vastu Tips: ವಾಸ್ತು ಪ್ರಕಾರ ನಮ್ಮ ಮನೆಯ ಸುತ್ತಮುತ್ತಲಿನ ವಿನ್ಯಾಸ ಹೇಗಿರಬೇಕು -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications