Telangana Assembly polls: ಟಿಕೆಟ್ ನೀಡಲಿಲ್ಲ ಎಂದು ನೆಲದ ಮೇಲೆ ಬಿದ್ದು ಬಿಕ್ಕಿ ಬಿಕ್ಕಿ ಅತ್ತ ಮಾಜಿ ಉಪ ಮುಖ್ಯಮಂತ್ರಿ

ತೆಲಂಗಾಣ, ಅಗಸ್ಟ್‌ 23: ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ತಮಗೆ ಟಿಕೆಟ್ ಸಿಗಲಿಲ್ಲ ಎಂದು ಭಾರತ್ ರಾಷ್ಟ್ರ ಸಮಿತಿ ಮುಖಂಡ ಹಾಗೂ ತೆಲಂಗಾಣದ ಮಾಜಿ ಉಪಮುಖ್ಯಮಂತ್ರಿ ತಾಟಿಕೊಂಡ ರಾಜಯ್ಯ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಮುಂಬರುವ ಚುನಾವಣಾ ದಿನಾಂಕಗಳನ್ನು ಘೋಷಿಸುವ ಮೊದಲೇ ಬಿಆರ್‌ಎಸ್ ಪಕ್ಷವು ಆಗಸ್ಟ್ 21 ರಂದು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ವೇಳೆ ಘಾನ್‌ಪುರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್‌ಗಾಗಿ ಅವರು ಬೇಡಿಕೆ ಇಟ್ಟಿದ್ದರು ಆದರೆ ಪಕ್ಷವು ಅವರಿಗೆ ಟಿಕೆಟ್ ನೀಡಲು ನಿರಾಕರಿಸಿದೆ. ಈ ವರ್ಷದ ಕೊನೆಯಲ್ಲಿ ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

Denied ticket, Telangana’s former Deputy Chief Minister breaks down

ಇನ್ನೂ ಲೈಂಗಿಕ ಕಿರುಕುಳದ ಆರೋಪದ ಹಿನ್ನಲೆ ತಾಟಿಕೊಂಡ ರಾಜಯ್ಯ ಅವರಿಗೆ ಟಿಕೆಟ್‌ ಕೈ ತಪ್ಪಿದೆ ಎನ್ನಲಾಗಿದ್ದು, ಈ ಆರೋಪಗಳಿಂದಾಗಿ ಪಕ್ಷವು ಅವರಿಗೆ ಟಿಕೆಟ್ ನಿರಾಕರಿಸಿದೆ. ಕದಿಯಂ ಶ್ರೀಹರಿಯವರಿಗೆ ಪಕ್ಷವು ಘನಪುರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಿದೆ.

ರಾಜಯ್ಯ ಅವರು ಅಂಬೇಡ್ಕರ್ ಪ್ರತಿಮೆ ಕೇಂದ್ರಕ್ಕೆ ಆಗಮಿಸುತ್ತಿದ್ದಂತೆ ಅವರ ಬೆಂಬಲಿಗರು ಜೈ ರಾಜಯ್ಯ, ಜೈ ತೆಲಂಗಾಣ ಎಂದು ಘೋಷಣೆಗಳನ್ನು ಕೂಗಿದರು. ರಾಜಯ್ಯ ಭಾವುಕರಾಗಿ ಅನುಯಾಯಿಗಳ ಮುಂದೆ ಕಣ್ಣೀರಿಟ್ಟರು.

2014 ರಲ್ಲಿ ತೆಲಂಗಾಣ ರಚನೆಯಾದ ನಂತರ, ರಾಜಯ್ಯ ಅವರು ಸಿಎಂ ಕೆಸಿಆರ್ ಅವರ ಡೆಪ್ಯೂಟಿ ಸಿಎಂ ಆಗಿದ್ದರು ಅಲ್ಲದೆ ಅವರಿಗೆ ಆರೋಗ್ಯ ಖಾತೆಯನ್ನು ನೀಡಲಾಯಿತು. ಆದರೆ, ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ 2015ರಲ್ಲಿ ಅವರನ್ನು ಸಂಪುಟದಿಂದ ಕೈಬಿಡಲಾಗಿತ್ತು. ಆದರೆ, 2018ರಲ್ಲಿ ಅವರಿಗೆ ಅದೇ ಕ್ಷೇತ್ರದಿಂದ ಪಕ್ಷ ಟಿಕೆಟ್ ನೀಡಿತ್ತು.

BRS ಅಭ್ಯರ್ಥಿಗಳ ಮೊದಲನೇ ಪಟ್ಟಿಯನ್ನು ಪ್ರಕಟಿಸಿದ್ದು, ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮುಂಬರುವ ವಿಧಾನಸಭಾ ಚುನಾವಣೆಗೆ 119 ಸ್ಥಾನಗಳಲ್ಲಿ 115 ಅಭ್ಯರ್ಥಿಗಳನ್ನು ಕೆಸಿಆರ್ ಸೋಮವಾರ ಘೋಷಿಸಿದೆ. 29 ಮಂದಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಾಗಿದ್ದರೆ, 24 ಅಭ್ಯರ್ಥಿಗಳು ಒಬಿಸಿ ಸಮುದಾಯಕ್ಕೆ ಸೇರಿದವರು ಮತ್ತು ಮೂವರು ಅಲ್ಪಸಂಖ್ಯಾತರು. ಒಟ್ಟಾರೆ ಏಳು ಮಹಿಳಾ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+