ಜೈಲಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ರಾಮ್ ರಹೀಮ್ ಅನುಯಾಯಿ!

ಅಂಬಲಾ(ಹರ್ಯಾಣ), ಸೆಪ್ಟೆಂಬರ್ 4: ಹರ್ಯಾಣದ ಪಂಚಕುಲಾದಲ್ಲಿ ಆಗಸ್ಟ್ 25 ರಂದು ನಡೆದ ಗಲಭೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಡೇರಾ ಸಚ್ಚಾ ಸೌದದ ಅನುಯಾಯಿಯೊಬ್ಬ ಜೈಲಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆಪ್ಟೆಂಬರ್ 3 ರಂದು ನಡೆದಿದೆ.

ಉತ್ತರ ಪ್ರದೇಶದ ಸರಸ್ವ ಎಂಬಲ್ಲಿಯ ರವೀಂದರ್(28) ಎಂಬ ವ್ಯಕ್ತಿಯೇ ಆತ್ಮಹತ್ಯೆ ಮಾಡಿಕೊಂಡವರು. ಜೈಲಿನ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

Dera Sacha Sauda follower, arrested in Panchakula violance commits suicide in jail

ಡೇರಾ ಸಚ್ಚಾ ಸೌದದ ಮುಖ್ಯಸ್ಥ ರಾಮ್ ರಹೀಮ್ ಬಾಬಾನನ್ನು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಿದ ಸಿಬಿಐ ವಿಶೇಷ ನ್ಯಾಯಾಲಯ, ಆತನಿಗೆ 20 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿತ್ತು.

ಸಿಬಿಐ ನ್ಯಾಯಾಲಯದ ತೀರ್ಪಿನ ವಿರುದ್ಧ ಹರ್ಯಾಣದ ಪಂಚಕುಲದಲ್ಲಿ ಗಲಭೆ ಎದ್ದು 30 ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದರು. ಘಟನೆಗೆ ಸಂಬಂಧಿಸಿದಂತೆ ಬಾಬಾನ ಹಲವು ಅನುಯಾಯಿಗಳನ್ನು ಬಂಧಿಸಲಾಗಿತ್ತು. ಅವರಲ್ಲಿ ರವೀಂದರ್ ಸಹ ಒಬ್ಬರಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+