ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

"ತನ್ನ ಅವಶ್ಯಕತೆಗಳ ನಡುವೆಯೂ ಭಾರತ 123 ದೇಶಗಳಿಗೆ ಔಷಧ ಕಳುಹಿಸಿದೆ"

|
Google Oneindia Kannada News

ನವದೆಹಲಿ, ಮೇ 28: ತನ್ನ ಅವಶ್ಯಕತೆಗಳ ನಡುವೆಯೂ ಭಾರತ ಸುಮಾರು 123 ದೇಶಗಳಿಗೆ ಔಷಧಗಳನ್ನು ಸರಬರಾಜು ಮಾಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.

ಕೊರೊನಾ ಸೋಂಕನ್ನು ಎದುರಿಸಲು ರೋಗನಿರ್ಣಯ, ಚಿಕಿತ್ಸೆ ಹಾಗೂ ಲಸಿಕೆಗಳ ಅಭಿವೃದ್ಧಿಯಲ್ಲಿ ಜಾಗತಿಕ ಪ್ರಯತ್ನಗಳಿಗೆ ಭಾರತ ಪ್ರಮುಖ ಕೊಡುಗೆಗಳನ್ನು ನೀಡಿದೆ ಎಂದು ಹೇಳಿದರು.

ಭಾರತದಲ್ಲಿ ಒಂದೇ ದಿನ 26.58 ಲಕ್ಷ ಜನರಿಗೆ ಕೊರೊನಾವೈರಸ್ ಲಸಿಕೆ ಭಾರತದಲ್ಲಿ ಒಂದೇ ದಿನ 26.58 ಲಕ್ಷ ಜನರಿಗೆ ಕೊರೊನಾವೈರಸ್ ಲಸಿಕೆ

ತನ್ನ ಅವಶ್ಯಕತೆಗಳ ನಡುವೆಯೂ 59 ಎನ್‌ಎಎಂ ರಾಷ್ಟ್ರಗಳನ್ನು ಒಳಗೊಂಡಂತೆ 123 ದೇಶಗಳಿಗೆ ಔಷಧಗಳನ್ನು ಸರಬರಾಜು ಮಾಡಿದ್ದೇವೆ. ಜಗತ್ತಿನಲ್ಲಿ ಎಲ್ಲರೂ ಸುರಕ್ಷಿತ ಎಂಬುದು ಖಾತ್ರಿಯಾಗದ ಹೊರತು ಯಾರೂ ಸುರಕ್ಷಿತರಲ್ಲ ಎಂಬುದನ್ನು ನಾವು ಅರಿತುಕೊಂಡಿದ್ದೇವೆ. ಹೀಗಾಗಿ ನಮ್ಮ ಬಳಿ ಇರುವ ಔಷಧಗಳನ್ನು ಹಂಚಿಕೊಂಡಿದ್ದೇವೆ. ಕೊರೊನಾ ವಿರುದ್ಧ ಹಲವು ಔಷಧ, ಚಿಕಿತ್ಸೆ, ಲಸಿಕೆಗಳನ್ನು ಅಭಿವೃದ್ಧಿಪಡಿಸುತ್ತಿದ್ದೇವೆ ಎಂದು ವಿವರಿಸಿದರು.

Despite Own Needs, India Supplied Medicines To 123 Countries Says Harshvardhan

ಭಾರತವು ಸಾರ್ವತ್ರಿಕ ಆರೋಗ್ಯ ಸೇವೆಯನ್ನು ಸಾಧಿಸುವತ್ತ ಮುನ್ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ನಾಗರಿಕರು ವಿಶ್ವದರ್ಜೆಯ ಚಿಕಿತ್ಸಾ ಸೌಲಭ್ಯಗಳನ್ನು ಪಡೆಯಲಿದ್ದಾರೆ ಎಂದು ಭರವಸೆ ನೀಡಿದರು.

ಲಸಿಕಾ ಕಾರ್ಯಕ್ರಮಗಳಿಗೂ ವೇಗ ನೀಡಲಾಗುವುದು. ಒಂದು ವರ್ಷದಲ್ಲಿ ಈ ವ್ಯಾಪ್ತಿಯನ್ನು ಶೇ 90ಕ್ಕೆ ಏರಿಸುವ ಗುರಿ ಹೊಂದಿದ್ದು, ಗ್ರಾಮ ಆಧಾರಿತ ಸೂಕ್ಷ್ಮ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಪೂರ್ಣ ಆರೋಗ್ಯಪೂರ್ಣ ವಾತಾವರಣ ನಿರ್ಮಾಣ ಮಾಡುವತ್ತ ಭಾರತ ಮುನ್ನಡೆಯುತ್ತಿದೆ ಎಂದು ತಿಳಿಸಿದರು.

English summary
Despite its own needs, India supplied medicines to 123 countries says union minister Harsh Vardhan,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X