Himachal Pradesh Rain: ಕುಲುವಿನಲ್ಲಿ ಭೂಕುಸಿತದಲ್ಲಿ ಕುಸಿದ ಭಾರಿ ಕಟ್ಟಡಗಳು: ವಿಡಿಯೋ ನೋಡಿ
ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಕುಲು ಜಿಲ್ಲೆಯಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಹಲವಾರು ಮನೆಗಳು ಇಸ್ಪೀಟ್ ಎಲೆಗಳಂತೆ ಧರೆಗುರುಳಿವೆ. ಈ ಭಯಾನಕ ಘಟನೆ ಕ್ಯಾಮರಾದಲ್ಲಿ ಸೆರೆಹಿಡಿಯಲಾಗಿದೆ.
ಎಷ್ಟು ಹಾನಿಯಾಗಿದೆ ಎನ್ನುವುದು ಇನ್ನೂ ಅಂದಾಜಿಸಲು ಆಗಿಲ್ಲ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಮುಂಜಾಗ್ರತಾ ಕ್ರಮವಾಗಿ ಹಲವು ದಿನಗಳ ಹಿಂದೆಯೇ ಕಟ್ಟಡಗಳನ್ನು ಖಾಲಿ ಮಾಡಿಸಲಾಗಿತ್ತು. ಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ಪಟ್ಟಣವಾದ ಅನ್ನಿಯ ಮಾರುಕಟ್ಟೆ ಪ್ರದೇಶದಲ್ಲಿ ವಿನಾಶಕಾರಿ ಭೂಕುಸಿತ ಸಂಭವಿಸಿದೆ, ಇದು ಜಿಲ್ಲಾ ಕೇಂದ್ರವಾದ ಕುಲುನಿಂದ 76 ಕಿಮೀ ದೂರದಲ್ಲಿದೆ.

ಆಡಳಿತವು ಅಪಾಯವನ್ನು ಗುರುತಿಸಿ ಎರಡು ದಿನಗಳ ಹಿಂದೆ ವಾಣಿಜ್ಯ ಕಟ್ಟಡವನ್ನು ತೆರವು ಮಾಡಿದೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಹೇಳಿದ್ದಾರೆ. ಆದಾಗ್ಯೂ, ವೀಡಿಯೊದಲ್ಲಿ, ಹಲವಾರು ಮನೆಗಳು ಕುಸಿಯುತ್ತಿರುವುದನ್ನು ನೋಡಬಹುದಾಗಿದೆ.
Several buildings collapsed in Anni of Kullu district in Himachal Pradesh pic.twitter.com/qJZurRnSY9
— Weatherman Shubham (@shubhamtorres09) August 24, 2023
ಎಂಟರಿಂದ ಒಂಭತ್ತು ಕಟ್ಟಡಗಳು ಧರೆಗೆ
ವೀಡಿಯೊದಲ್ಲಿ ನೋಡಿದಂತೆ, ಅಣ್ಣಿ ಪಟ್ಟಣದ ಬಸ್ ನಿಲ್ದಾಣದ ಬಳಿ ಕನಿಷ್ಠ ಎಂಟರಿಂದ ಒಂಬತ್ತು ದೊಡ್ಡ ಕಟ್ಟಡಗಳು ಕುಸಿದಿವೆ. "ವಿನಾಶಕಾರಿ ಭೂಕುಸಿತದ ನಡುವೆ ಬೃಹತ್ ವಾಣಿಜ್ಯ ಕಟ್ಟಡವು ಕುಸಿಯುತ್ತಿರುವುದನ್ನು ನೋಡಬಹುದು. ಆಡಳಿತವು ಅಪಾಯವನ್ನು ಗುರುತಿಸಿದೆ ಮತ್ತು ಎರಡು ದಿನಗಳ ಹಿಂದೆ ಕಟ್ಟಡವನ್ನು ಯಶಸ್ವಿಯಾಗಿ ತೆರವು ಮಾಡಿದೆ" ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಟ್ವೀಟ್ ಮಾಡಿದ್ದಾರೆ.
ಹಿಮಾಚಲ ಪ್ರದೇಶವು ಕಳೆದ ಕೆಲವು ವಾರಗಳಲ್ಲಿ ನಿರಂತರ ಮಳೆ, ಮೇಘಸ್ಫೋಟ, ಭೂಕುಸಿತಗಳಿಂದ ಜರ್ಜರಿತವಾಗಿದೆ. ಹಿಮಾಚಲ ಪ್ರದೇಶದ ಕುಲು ಎಂಬಲ್ಲಿ ಗುರುವಾರ ಹೊಸದಾಗಿ ಭೂಕುಸಿತ ಸಂಭವಿಸಿದ್ದು, ಹಲವು ಕಟ್ಟಡಗಳು ಕುಸಿದಿವೆ.
ಕುಲು-ಮಂಡಿ ಹೆದ್ದಾರಿಯು ಹಾನಿಗೊಳಗಾಗಿದ್ದು, ಎರಡರ ಸಂಪರ್ಕ ಕಡಿತಗೊಂಡಿದ್ದು, ಹಲವಾರು ವಾಹನಗಳು ರಸ್ತೆಯಲ್ಲಿ ಸಿಲುಕಿಕೊಂಡಿವೆ. ಹಿಮಾಚಲ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು, ಹಿಮಾಚಲ ಪ್ರದೇಶದಾದ್ಯಂತ ಮುಂದಿನ ಎರಡು ದಿನಗಳವರೆಗೆ ಭಾರಿ ಮಳೆಯಾಗಲಿದ್ದು ಐಎಂಡಿ ರೆಡ್ ಅಲರ್ಟ್ ನೀಡಿದೆ.
2,022 ಮನೆಗಳು ಸಂಪೂರ್ಣ ಹಾನಿ
ಹಿಮಾಚಲ ಪ್ರದೇಶದಲ್ಲಿ ಈ ವರ್ಷ ಒಟ್ಟು 2,022 ಮನೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, 9,615 ಮನೆಗಳು ಭಾಗಶಃ ಹಾನಿಗೊಳಗಾಗಿದ್ದು, ಈ ವರ್ಷದ ಮುಂಗಾರು ಹಂಗಾಮಿನಲ್ಲಿ 113 ಭೂಕುಸಿತಗಳು ಸಂಭವಿಸಿವೆ.
ರಾಜ್ಯವು ಇತಿಹಾಸದಲ್ಲಿ ಅತ್ಯಂತ ಭೀಕರವಾದ ನೈಸರ್ಗಿಕ ವಿಕೋಪವನ್ನು ಎದುರಿಸುತ್ತಿದೆ. ಶಿಮ್ಲಾದಲ್ಲಿ 100 ಕ್ಕೂ ಹೆಚ್ಚು ಕಟ್ಟಡಗಳು ಕುಸಿದಿವೆ. ಶಿಮ್ಲಾದ ಪ್ರಸಿದ್ಧ ಸಮ್ಮರ್ ಹಿಲ್ ಪ್ರದೇಶದಲ್ಲಿನ ಪುರಾತನ ಶಿವ ದೇವಾಲಯವು ಈ ಮಳೆಗಾಲದಲ್ಲಿ ಕೊಚ್ಚಿಹೋಗಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ












Click it and Unblock the Notifications