Get Updates
Get notified of breaking news, exclusive insights, and must-see stories!

'ನೀವು ಪ್ರಧಾನಿಯಾದರೆ ಕಾಂಗ್ರೆಸ್ ಪಕ್ಷ ಸಹಿಸಿಕೊಳ್ಳುತ್ತದೆಯೇ'

ನವದೆಹಲಿ, ಫೆಬ್ರವರಿ 08: ನೀವು ಪ್ರಧಾನಿಯಾದರೆ ಕಾಂಗ್ರೆಸ್ ಪಕ್ಷ ಸಹಿಸಿಕೊಳ್ಳುತ್ತದೆಯೇ? ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ತೀಕ್ಷ್ಣವಾಗಿ ಪ್ರಶ್ನೆ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಬಾಂಧವ್ಯದ ಬಗ್ಗೆ ಲಘುವಾಗಿ ಮಾತನಾಡಿದ ಖರ್ಗೆ ಅವರಿಗೆ ತಿರುಗೇಟು ನೀಡಿದ ಮಾಜಿ ಪ್ರಧಾನಿಗಳು, ಖರ್ಗೆ ಅವರೇ.. ನೀವು ಪ್ರಧಾನಮಂತ್ರಿಯಾದರೆ, ನೀವು ಅಧ್ಯಕ್ಷರಾಗಿರುವ ಕಾಂಗ್ರೆಸ್ ಪಕ್ಷ ಮುಕ್ತವಾಗಿ ಬೆಂಬಲ ಕೊಡುತ್ತದೆಯೇ? ಆ ಬಗ್ಗೆ ಹೇಳಿ" ಎಂದು ಮಾಜಿ ದೇವೇಗೌಡರು ಕೇಳಿದರು.

Deve Gowda asked Kharge whether the Congress party would tolerate him if he became the PM

ಈ ಬಗ್ಗೆ ರಾಜ್ಯಸಭೆಯಲ್ಲಿ ಮಾತನಾಡಿದ ದೇವೇಗೌಡರು, ರಾಜ್ಯಸಭೆಯಲ್ಲಿ ಮೊದಲು ಮಾತನಾಡಿದ ಪ್ರಧಾನಿ ಮೋದಿಯವರು ಹಿಂದಿನ ಪ್ರಧಾನ ಮಂತ್ರಿಗಳಾದ ಡಾ.ಮನಮೋಹನ್ ಸಿಂಗ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅದರ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಮನಮೋಹನ್ ಸಿಂಗ್ ಅವರು ಒಳ್ಳೆಯ ಕೆಲಸ ಮಾಡಿದ್ದಾರೆ. ಹೀಗಾಗಿ ಅವರ ಬಗ್ಗೆ ಪ್ರಧಾನಿ ಅವರು ಒಳ್ಳೆಯ ಮಾತುಗಳನ್ನು ಆಡಿದ್ದಾರೆ. ಅದಕ್ಕಾಗಿ ಮೋದಿ ಅವರಿಗೆ ಧನ್ಯವಾದ ಹೇಳುತ್ತೇನೆ.ಒಳ್ಳೆಯ ಕೆಲಸಗಳನ್ನು ಮೆಚ್ಚಿಕೊಂಡು ಕೆಟ್ಟದ್ದನ್ನು ಟೀಕಿಸಬೇಕು ಎಂದು ಖರ್ಗೆ ಹೇಳಿದ್ದರು.

ಈ ಮಾತಿನ ಭರದಲ್ಲಿ ಮಾಜಿ ಪ್ರಧಾನಿಗಳ ಹೆಸರನ್ನು ಎಳೆದು ತಂದಿದ್ದ ಖರ್ಗೆ ಅವರು, 'ಮೋದಿ ಮತ್ತು ದೇವೇಗೌಡರ ಪ್ರೇಮ ಸ್ವಲ್ಪ ತಡವಾಗಿದೆ ಮೂಡಿದೆ' ಎಂದಿದ್ದರು. ಇದಕ್ಕೆ ದೇವೇಗೌಡರು ಉತ್ತರ ನೀಡಿದರು. ಸದನದಲ್ಲಿ ಖರ್ಗೆ ಅವರ ಬಗ್ಗೆ ಒಳ್ಳೆಯ ಮಾತುಗಳನ್ನೇ ಆಡಿದ ಮಾಜಿ ಪ್ರಧಾನಿಗಳು, ಮಲ್ಲಿಕಾರ್ಜುನ ಖರ್ಗೆ ಅವರು ಪ್ರಾಮಾಣಿಕ ವ್ಯಕ್ತಿ. ಡಾ.ಮನಮೋಹನ್ ಸಿಂಗ್ ಅವರು ಅಪ್ಪಟ ಪ್ರಾಮಾಣಿಕ ವ್ಯಕ್ತಿ, ಆದರೆ, ಕಾಂಗ್ರೆಸ್ ತನ್ನನ್ನು ತಾನೇ ದುರ್ಬಲಗೊಳಿಸಿಕೊಳ್ಳುತ್ತಿದೆ. ಖರ್ಗೆ ಅವರು ಪ್ರಧಾನಿಯಂತಹ ಉನ್ನತ ಸ್ಥಾನಕ್ಕೆ ಏರಿದರೆ ಕಾಂಗ್ರೆಸ್ ಪಕ್ಷ ಸಹಿಸಿಕೊಳ್ಳುತ್ತದೆಯೇ? ಎಂದು ದೇವೇಗೌಡರು ಟೀಕಾ ಪ್ರಹಾರ ನಡೆಸಿದರು.

ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಆಗಬೇಕು ಎಂಬುದು ನನ್ನ ಅಪೇಕ್ಷೆ ಆಗಿತ್ತು. ಅವರೇನು ನನ್ನ ಸ್ವಂತದವರು ಅಲ್ಲ, ನನ್ನ ಸ್ವಂತ ಮಗನೂ ಅಲ್ಲ. ಆದರೆ, ಅವರಿಗೆ ಅರ್ಹತೆ ಇದೆ. ಅವರು ಉನ್ನತ ಸ್ಥಾನಕ್ಕೆ ಬಂದರೆ ಕಾಂಗ್ರೆಸ್ ನಾಯಕರು ಸಹಿಸಿಕೊಳ್ಳುತ್ತಾರೆಯೇ? ಎಂದು ನೇರವಾಗಿ ಪ್ರಶ್ನಿಸಿದರು.

1991ರಲ್ಲಿ ನರಸಿಂಹ ರಾವ್ ಅವರು ಪ್ರಧಾನಿ ಆಗಿದ್ದರು, ಡಾ.ಮನಮೋಹನ್ ಸಿಂಗ್ ಅವರು ಹಣಕಾಸು ಸಚಿವರಾಗಿದ್ದರು. ಈ ದೇಶವನ್ನು ಉಳಿಸಲು ಮನಮೋಹನ್ ಸಿಂಗ್ ಅವರು ಏನೆಲ್ಲಾ ಮಾಡಿದ್ದಾರೆ ಎಂಬುದರ ಬಗ್ಗೆ ನಾನು ಸಾಕಷ್ಟು ಮಾತನಾಡಬಲ್ಲೆ ಎಂದು ಕಾಂಗ್ರೆಸ್ ಪಕ್ಷಕ್ಕೆ ದೇವೇಗೌಡ್ರು ಟಾಂಗ್ ಕೊಟ್ಟರು.

ಮನಮೋಹನ್ ಸಿಂಗ್ ಅವರು ದೇಶದ ಹಣಕಾಸು ಸಚಿವರಾಗಿದ್ದಾಗ ಈ ದೇಶದ ಆರ್ಥಿಕ ಸ್ಥಿತಿ ಹೇಗಿತ್ತು ಎನ್ನುವುದು ನನಗೆ ಗೊತ್ತಿದೆ. 130 ಟನ್ ಬಂಗಾರವನ್ನು ಭಾರತ ಸರ್ಕಾರ ವಿದೇಶಿ ಬ್ಯಾಂಕುಗಳಲ್ಲಿ ಒತ್ತೆ ಇಟ್ಟಿತ್ತು. ಆ ಸಂದರ್ಭದಲ್ಲಿ ನರಸಿಂಹರಾವ್ ಅವರ ನೇತೃತ್ವದಲ್ಲಿ ದೇಶವನ್ನು ಉಳಿಸಲು ಮನಮೋಹನ್ ಸಿಂಗ್ ಏನೆಲ್ಲಾ ಮಾಡಿದರು ಎನ್ನುವುದು ನನಗೆ ಬಹಳ ಚೆನ್ನಾಗಿ ಗೊತ್ತಿದೆ. ಅಂತಹ ಮನಮೋಹನ್ ಸಿಂಗ್ ಅವರು ಈ ಸದನದಲ್ಲಿ ಕಣ್ಣೀರು ಹಾಕಿದರು ಎಂದು ದೇವೇಗೌಡರು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+