Get Updates
Get notified of breaking news, exclusive insights, and must-see stories!

ಉತ್ತರಾಖಂಡದ ಅಭಿವೃದ್ಧಿ ಡಬಲ್ ಎಂಜಿನ್ ಸರ್ಕಾರದ ಮೊದಲ ಆದ್ಯತೆ; ಮೋದಿ

ಅಲ್ಮೋರಾ, ಫೆಬ್ರವರಿ 11: ಉತ್ತರಾಖಂಡದ ಅಭಿವೃದ್ಧಿಯು ಬಿಜೆಪಿಯ ಡಬಲ್ ಎಂಜಿನ್ ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡ ವಿಧಾನಸಭೆ ಚುನಾವಣಾ ಪ್ರಚಾರವನ್ನುದ್ದೇಶಿಸಿ ಹೇಳಿದರು.

ಫೆಬ್ರವರಿ 14ರ ಶುಕ್ರವಾರದಂದು ಉತ್ತರಾಖಂಡದ ಅಲ್ಮೋರಾದಲ್ಲಿ ನಡೆದ ವಿಧಾನಸಭಾ ಚುನಾವಣಾ ಸಮಾವೇಶದಲ್ಲಿ ಹೇಳಿದ ಅವರು, ರಾಜ್ಯದ ಗಡಿಗ್ರಾಮಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಬಿಜೆಪಿಯ ಆದ್ಯತೆಯಾಗಿದ್ದು, ಪರ್ವತಮಾಲಾ ಮತ್ತು ವೈಬ್ರೆಂಟ್ ವಿಲೇಜ್ ಯೋಜನೆಯಿಂದ ಜನರಿಗೆ ಪ್ರಯೋಜನವಾಗಲಿದೆ ಎಂದು ತಿಳಿಸಿದರು.

ಉತ್ತರಾಖಂಡದ ಜಮ್ರಾಣಿ ಅಣೆಕಟ್ಟು ಯೋಜನೆ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು. ಮುಂದಿನ ಐದು ವರ್ಷಗಳಲ್ಲಿ ರಾಜ್ಯದ ಕುಮಾನ್ ಪ್ರದೇಶದಲ್ಲಿ ಮಾನಸಖಂಡ ಪ್ರವಾಸೋದ್ಯಮ ಸರ್ಕ್ಯೂಟ್ ಅನ್ನು ಆದ್ಯತೆಯ ಮೇಲೆ ಅಭಿವೃದ್ಧಿಪಡಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು.

Development of Uttarakhand is the First Priority of the Double Engine Government; PM Narendra Modi

ಸಮಾವೇಶವನ್ನುದ್ದೇಶಿಸಿ ಮಾತನಾಡುವಾಗ ಪ್ರಧಾನಿ ಮೋದಿ ಅವರು, "ಡಬಲ್ ಇಂಜಿನ್" ಸರ್ಕಾರಕ್ಕೆ ಮತ್ತೊಮ್ಮೆ ಮತ ಚಲಾಯಿಸುವ ಬಗ್ಗೆ ಉತ್ತರಾಖಂಡ ಜನರು ಮನಸ್ಸು ಮಾಡಿದ್ದಾರೆ ಎಂದು ಹೇಳಿದರು.

"ಗುರುವಾರ ಉತ್ತರಪ್ರದೇಶದಲ್ಲಿ ಮೊದಲ ಹಂತದ ಮತದಾನದ ನಂತರ, ಬಿಜೆಪಿ ದಾಖಲೆಯ ಸಂಖ್ಯೆಯಲ್ಲಿ ಗೆಲುವು ಸಾಧಿಸುವುದು ಸ್ಪಷ್ಟವಾಗಿದೆ. ನಮಗಿಂತ ಹೆಚ್ಚು ಸಾರ್ವಜನಿಕರು ಈ ಚುನಾವಣೆಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಸಂಕಲ್ಪ ಮಾಡಿದ್ದಾರೆ. ಮತದಾರರು ಎಂದಿಗೂ ಒಳ್ಳೆಯ ಉದ್ದೇಶ ಹೊಂದಿರುವವರ ಪಕ್ಷವನ್ನು ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

ಒಂದೇ ಹಂತದಲ್ಲಿ ಫೆ.14ರಂದು ಮತದಾನ
ಉತ್ತರಾಖಂಡದಲ್ಲಿ ಜನವರಿ 21ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಜನವರಿ 21ರಿಂದ ಜ.28ರವರೆಗೆ ಅವಕಾಶವಿರುತ್ತದೆ. ಜನವರಿ 29ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಜನವರಿ 31 ಕೊನೆಯ ದಿನಾಂಕವಾಗಿದೆ.

ಉತ್ತರಾಖಂಡ ರಾಜ್ಯದ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಫೆ.14ರಂದು ಮತದಾನ ನಡೆಯಲಿದೆ. ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ. ಉತ್ತರಾಖಂಡ ಅಭ್ಯರ್ಥಿಗಳ ವೆಚ್ಚದ ಮಿತಿ 40 ಲಕ್ಷ ರೂ. ಇರಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. 2017ರ ಉತ್ತರಾಖಂಡ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 70 ಸ್ಥಾನಗಳ ಪೈಕಿ ಬಿಜೆಪಿ 57 ಸ್ಥಾನಗಳನ್ನು ಗೆದ್ದಿತ್ತು.

Development of Uttarakhand is the First Priority of the Double Engine Government; PM Narendra Modi

ಉತ್ತರಪ್ರದೇಶದಲ್ಲಿ ಶೇ.60.17ರಷ್ಟು ಮತದಾನ
ಏಳು ಹಂತದ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಗುರುವಾರ ಪೂರ್ಣಗೊಂಡಿದೆ. ಈ ವೇಳೆ ಶೇ.60.17ರಷ್ಟು ಮತದಾನವಾಗಿದೆ.

ಈ ಮಧ್ಯೆ ಚುನಾವಣಾ ಆಯೋಗವು ಮಣಿಪುರ ವಿಧಾನಸಭಾ ಚುನಾವಣೆಯ ಮತದಾನದ ದಿನಾಂಕಗಳನ್ನು ಪರಿಷ್ಕರಿಸಿದ್ದು, ಮೊದಲ ಹಂತದ ಮತದಾನ ಫೆಬ್ರವರಿ 27ರ ಬದಲಿಗೆ ಫೆಬ್ರವರಿ 28ರಂದು ಮತ್ತು ಎರಡನೇ ಹಂತ ಮಾರ್ಚ್ 3ರ ಬದಲಿಗೆ ಮಾರ್ಚ್ 5ರಂದು ನಡೆಯಲಿದೆ.

ಉತ್ತರಾಖಂಡ್‌ನಲ್ಲಿ ಪ್ರಧಾನಿ ಮೋದಿ ಶುಕ್ರವಾರ ಮಧ್ಯಾಹ್ನ ಅಲ್ಮೋರಾದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಣಿಪುರ, ಗೋವಾ, ಪಂಜಾಬ್, ಉತ್ತರಾಖಂಡ ಮತ್ತು ಉತ್ತರಪ್ರದೇಶದ ವಿಧಾನಸಭೆ ಚುನಾವಣೆ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ನಡೆಯಲಿದೆ. ಮಾರ್ಚ್ 10ರಂದು ಐದೂ ರಾಜ್ಯಗಳ ಮತಗಳ ಎಣಿಕೆ ಕಾರ್ಯ ನಡೆಯಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+