Get Updates
Get notified of breaking news, exclusive insights, and must-see stories!

Devendra Fadnavis: ದೇವೇಂದ್ರ ಫಡ್ನವೀಸ್ ಹೆಸರು ಬದಲು, ಹೆಚ್ಚಿದ ಕುತೂಹಲ

ಮುಂಬೈ, ಡಿಸೆಂಬರ್ 4: ಮಹಾರಾಷ್ಟ್ರದಲ್ಲಿ ಗುರುವಾರ 'ಮಹಾಯತಿ' ಮೈತ್ರಿಕೂಟದ ಹೊಸ ಸರ್ಕಾರ ರಚನೆಯಾಗಲಿದೆ. ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಮುಂಬೈನಲ್ಲಿ ನಡೆಯಲಿರುವ ಪ್ರಮಾಣ ವಚನ ಸಮಾರಂಭದ ಆಹ್ವಾನ ಪತ್ರಿಕೆಯಲ್ಲಿನ ಹೆಸರು ಕುತೂಹಲಕ್ಕೆ ಕಾರಣವಾಗಿದೆ. ನಿಯೋಜಿತ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೆಸರು ಬದಲಾವಣೆ ಮಾಡಿಕೊಂಡರೆ? ಎಂಬ ಕುತೂಹಲ ಹುಟ್ಟುಹಾಕಿದೆ.

ಗುರುವಾರ ಸಂಜೆ 5.30ಕ್ಕೆ ಮುಂಬೈನ ಆಜಾದ್ ಮೈದಾನದಲ್ಲಿ ನಡೆಯುವ ಸಮಾರಂಭದಲ್ಲಿ 3ನೇ ಬಾರಿಗೆ ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಶಿವಸೇನೆಯ ಏಕನಾಥ್ ಶಿಂಧೆ, ಎನ್‌ಸಿಪಿಯ ಅಜಿತ್ ಪವಾರ್ ಸಹ ಪ್ರಮಾಣ ವಚನವನ್ನು ಸ್ವೀಕರಿಸಲಿದ್ದಾರೆ.

Devendra Fadnavis Name Change Surprise On Oath Ceremony Invite

ಪ್ರಮಾಣ ವಚನ ಸಮಾರಂಭದ ಆಹ್ವಾನ ಪತ್ರಿಕೆಯಲ್ಲಿ ದೇವೇಂದ್ರ ಫಡ್ನವೀಸ್ ಹೆಸರನ್ನು 'ದೇವೇಂದ್ರ ಸರಿತಾ ಗಂಗಾಧರ ರಾವ್ ಫಡ್ನವೀಸ್' ಎಂದು ಮುದ್ರಿಸಲಾಗಿದೆ. ಸರಿತಾ ಎಂಬುದು ದೇವೇಂದ್ರ ಫಡ್ನವೀಸ್ ತಾಯಿಯ ಹೆಸರು, ಗಂಗಾಧರ ರಾವ್ ಎಂಬುದು ಫಡ್ನವೀಸ್ ತಂದೆಯ ಹೆಸರು.

ದೇವೇಂದ್ರ ಫಡ್ನವೀಸ್ 2014 ಮತ್ತು 2019ರ ವಿಧಾನಸಭೆ ಚುನಾವಣೆಯ ಬಳಿಕ ಪ್ರಮಾಣ ವಚನ ಸಮಾರಂಭದ ಆಹ್ವಾನ ಪತ್ರಿಕೆಯಲ್ಲಿ ದೇವೇಂದ್ರ ಗಂಗಾಧರ ರಾವ್ ಫಡ್ನವೀಸ್ ಎಂದು ಹೆಸರು ಉಲ್ಲೇಖಿಸಲಾಗಿತ್ತು. ಮರಾಠಿಗರು ತಮ್ಮ ಹೆಸರಿನ ನಡುವೆ ತಾಯಿಯ ಹೆಸರನ್ನು ಸೇರಿಸಿಕೊಳ್ಳುತ್ತಾರೆ. ಆದರೆ ಈ ಬಾರಿ ದೇವೇಂದ್ರ ಫಡ್ನವೀಸ್ ತಾಯಿಯ ಹೆಸರನ್ನು ಸಹ ಸೇರಿಸಿಕೊಂಡಿದ್ದಾರೆ.

ತಾಯಿಯ ಹೇಳಿಕೆ: 2024ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಘೋಷಣೆಯಾದ ಬಳಿಕ ಸರೀತಾ ಅವರು, "ಬಿಜೆಪಿಯಲ್ಲಿ ಎಲ್ಲರೂ ತಮ್ಮ ಪುತ್ರ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂದು ಬಯಸಿದ್ದಾರೆ" ಎಂದು ಹೇಳಿದ್ದರು.

54 ವರ್ಷದ ದೇವೇಂದ್ರ ಫಡ್ನವೀಸ್ ಬ್ರಾಹ್ಮಣ ಸಮುದಾಯಕ್ಕೆ ಸೇರಿದವರು. ಫಡ್ನವೀಸ್‌ ತಂದೆ ವಿಧಾನ ಪರಿಷತ್ ಸದಸ್ಯರಾಗಿದ್ದರು. ಮೊದಲು ಜನಸಂಘದಲ್ಲಿದ್ದ ಅವರು ಬಳಿಕ ಬಿಜೆಪಿ ಸೇರಿದ್ದರು. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ದೇವೇಂದ್ರ ಫಡ್ನವೀಸ್‌ ಯುವಕರಾಗಿದ್ದಾಲೇ ನಿಧನ ಹೊಂದಿದರು.

ಈ ಬಾರಿ ಪ್ರಮಾಣ ವಚನ ಸಮಾರಂಭದ ಆಹ್ವಾನ ಪತ್ರಿಕೆಯಲ್ಲಿ ದೇವೇಂದ್ರ ಫಡ್ನವೀಸ್ ತಂದೆ ಜೊತೆ ತಾಯಿಯ ಹೆಸರನ್ನು ಸಹ ಸೇರಿಸಿಕೊಂಡಿದ್ದಾರೆ. 27ನೇ ವಯಸ್ಸಿನಲ್ಲಿಯೇ ದೇಶದ ಕಿರಿಯ ಮೇಯರ್ ಎಂಬ ಹೆಗ್ಗಳಿಕೆ ಪಡೆದಿದ್ದ ದೇವೇಂದ್ರ ಫಡ್ನವೀಸ್ 54ನೇ ವಯಸ್ಸಿನಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ 3ನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.

ದೇವೇಂದ್ರ ಫಡ್ನವೀಸ್ ಅಕ್ಟೋಬರ್ 2014 ರಿಂದ 2019ರ ತನಕ 5 ವರ್ಷಗಳ ಕಾಲ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದರು. 2019ರ ಚುನಾವಣೆ ಬಳಿಕ 23 ನವೆಂಬರ್ 2019 ರಿಂದ 28 ನವೆಂಬರ್ ತನಕ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದರು. ಆದರೆ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಕಾಂಗ್ರೆಸ್ ಜೊತೆ ಕೈ ಜೋಡಿಸಿದ ಕಾರಣ ಸರ್ಕಾರ ಪತನಗೊಂಡಿತ್ತು.

ಗುರುವಾರ ನಡೆಯಲಿರುವ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಸಮಾರಂಭದಲ್ಲಿ ಸುಮಾರು 2,000 ವಿವಿಐಪಿಗಳು ಮತ್ತು 40,000 ಬೆಂಬಲಿಗರು ಸಹ ಪಾಲ್ಗೊಳ್ಳಲಿದ್ದಾರೆ.

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 145. ಚುನಾವಣೆಯಲ್ಲಿ 'ಮಹಾಯತಿ' ಮೈತ್ರಿಕೂಟ 230 ಸ್ಥಾನಗಳನ್ನುಗಳಿಸಿದೆ. ಚುನಾವಣೆಯಲ್ಲಿ 132 ಸೀಟುಗಳನ್ನು ಗೆದ್ದಿರುವ ಬಿಜೆಪಿಗೆ ಮುಖ್ಯಮಂತ್ರಿ ಸ್ಥಾನ ಸಿಕ್ಕಿದೆ. 'ಮಹಾಯತಿ' ಮೈತ್ರಿಕೂಟದಲ್ಲಿ ಶಿವಸೇನೆ (ಏಕನಾಥ್ ಶಿಂಧೆ ಬಣ) 57, ಎನ್‌ಸಿಪಿ (ಅಜಿತ್ ಪವಾರ್ ಬಣ) 41 ಸೀಟುಗಳನ್ನು ಗೆದ್ದಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+