ನಾನು CJPಯ ಅಧಿಕೃತ ಸದಸ್ಯನಲ್ಲ! ವದಂತಿಗಳಿಗೆ ತೆರೆ ಎಳೆದ ಯೂಟ್ಯೂಬರ್ ಧ್ರುವ್ ರಾಠಿ

ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಅವರು ಇತ್ತೀಚೆಗೆ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ (ಕಾಕ್ರೋಚ್ ಜನತಾ ಪಾರ್ಟಿ) ಪ್ರತಿಭಟನೆಯಲ್ಲಿ ಭಾಗವಹಿಸುವ ಮುನ್ನ ಪೊಲೀಸರ ವಶಕ್ಕೆ ಒಳಗಾಗಿ ಬಿಡುಗಡೆಯಾದ ಬಳಿಕ ಸೋಶಿಯಲ್‌ ಮಿಡಿಯಾದಲ್ಲಿ ಒಂದಿಷ್ಟು ವಂದತಿಗಳು ಹರಿದಾಡುತ್ತಿತ್ತು. ಇದೀಗ ಧ್ರುವ್‌ ರಾಠಿ ತಮ್ಮ ನಿಲುವಿನ ಬಗ್ಗೆ ಮಹತ್ವದ ಸ್ಪಷ್ಟನೆ ನೀಡಿದ್ದಾರೆ.

ಹೌದು, 'ನಾನು ಸಿಜೆಪಿಯ ಯಾವುದೇ ಅಧಿಕೃತ ಸದಸ್ಯನಲ್ಲ' ಎಂದು ಅವರು ಮಾಧ್ಯಮಗಳ ಮುಂದೆ ಬಹಿರಂಗವಾಗಿ ಹೇಳಿಕೆ ನೀಡುವ ಮೂಲಕ ರಾಜಕೀಯ ಪ್ರವೇಶದ ಕುರಿತು ಹಬ್ಬಿದ್ದ ಎಲ್ಲಾ ಊಹಾಪೋಹಗಳಿಗೆ ಅಧಿಕೃತವಾಗಿ ತೆರೆ ಎಳೆದಿದ್ದಾರೆ. ದೇಶದ ಪ್ರಚಲಿತ ವಿದ್ಯಮಾನಗಳ ಬಗ್ಗೆ ಸದಾ ಧ್ವನಿ ಎತ್ತುವ ಅವರು, ತಮ್ಮ ಹೋರಾಟ ಕೇವಲ ವೈಯಕ್ತಿಕ ನೆಲೆಯಲ್ಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Dhruv Rathee Clarifies Not a CJP Member Joined Jantar Mantar Protest Only in Individual Capacity

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಕ್ರೋಚ್ ಜನತಾ ಪಾರ್ಟಿ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿತ್ತು. ಈ ಪ್ರತಿಭಟನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ ಸೂಚಿಸಿದ್ದ ಧ್ರುವ್ ರಾಠಿ ಅವರನ್ನ ಗುರುಗ್ರಾಮದ ಅವರ ನಿವಾಸದಿಂದಲೇ ದೆಹಲಿ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದಿದ್ದರು.

ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ದೆಹಲಿಯಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು ಮತ್ತು ಹಲವು ಪ್ರತಿಭಟನಾಕಾರರನ್ನ ಪೊಲೀಸರು ತಡೆದಿದ್ದರು. ಕೆಲವು ಗಂಟೆಗಳ ಬಳಿಕ ಬಿಡುಗಡೆಯಾದ ಧ್ರುವ್ ರಾಠಿ, ಮಾಧ್ಯಮಗಳ ಜೊತೆ ಮಾತನಾಡಿ ತಮ್ಮ ನಿಲುವನ್ನ ಸ್ಪಷ್ಟಪಡಿಸಿದ್ದಾರೆ.

ವೈಯಕ್ತಿಕ ನೆಲೆಯಲ್ಲಿ ಪ್ರತಿಭಟನೆಯಲ್ಲಿ ಭಾಗಿ

ತಮ್ಮ ಹೇಳಿಕೆಯಲ್ಲಿ, "ನಾನು ಕೇವಲ ವೈಯಕ್ತಿಕವಾಗಿ ಈ ಪ್ರತಿಭಟನೆಗೆ ಬೆಂಬಲ ಸೂಚಿಸಲು ಬಂದಿದ್ದೇನೆಯೇ ಹೊರತು, ಸಿಜೆಪಿಯ ಅಂಗಸಂಸ್ಥೆಯಾಗಿಯಾಗಲಿ ಅಥವಾ ಆ ಪಕ್ಷದ ಅಧಿಕೃತ ಪ್ರತಿನಿಧಿಯಾಗಿಯಾಗಲಿ ಬಂದಿಲ್ಲ" ಎಂದು ರಾಠಿ ಹೇಳಿದ್ದಾರೆ.

"ದೇಶದಾದ್ಯಂತ ಲಕ್ಷಾಂತರ ಸಾಮಾನ್ಯ ಜನರು ಹೇಗೆ ತಮ್ಮ ಹಕ್ಕುಗಳಿಗಾಗಿ ಪ್ರತಿಭಟನೆಗಳಲ್ಲಿ ಭಾಗವಹಿಸುತ್ತಾರೋ, ಅದೇ ರೀತಿ ನಾನೊಬ್ಬ ಸಾಮಾನ್ಯ ನಾಗರಿಕನಾಗಿ ನನ್ನ ಧ್ವನಿಯನ್ನು ಎತ್ತಿದ್ದೇನೆ. ನನ್ನ ಮತ್ತು ಕಾಕ್ರೋಚ್ ಜನತಾ ಪಾರ್ಟಿ ನಡುವೆ ಯಾವುದೇ ಅಧಿಕೃತ ರಾಜಕೀಯ ಸಂಬಂಧವಿಲ್ಲ" ಎಂಬುದನ್ನ ಅವರು ಒತ್ತಿ ಹೇಳಿದ್ದಾರೆ.

ರಾಜಕೀಯ ಪ್ರವೇಶಕ್ಕೆ ಸ್ಪಷ್ಟನೆ

ಧ್ರುವ್ ರಾಠಿ ಅವರು ಸಿಜೆಪಿ ಸೇರ್ಪಡೆಯಾಗಲಿದ್ದಾರೆ ಮತ್ತು ಮುಂಬರುವ ದಿನಗಳಲ್ಲಿ ಸಕ್ರಿಯ ರಾಜಕಾರಣಕ್ಕೆ ಕಾಲಿಡುತ್ತಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿತ್ತು. ಆದರೆ ಇದನ್ನ ಸಂಪೂರ್ಣವಾಗಿ ತಳ್ಳಿಹಾಕಿರುವ ಅವರು, ತಮಗೆ ರಾಜಕೀಯಕ್ಕೆ ಸೇರುವ ಯಾವುದೇ ಉದ್ದೇಶ ಅಥವಾ ಮಹತ್ವಾಕಾಂಕ್ಷೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

"ನನಗೆ ರಾಜಕಾರಣಿಯಾಗುವ ಆಸಕ್ತಿಯಿಲ್ಲ. ಆದರೆ, ದೇಶದ ಪ್ರಮುಖ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವುದು ನನ್ನ ಮೂಲಭೂತ ಹಕ್ಕು. ಒಂದು ವೇಳೆ ಯಾವುದೇ ರಾಜಕೀಯ ಪಕ್ಷವು ಸಾರ್ವಜನಿಕ ಹಿತಾಸಕ್ತಿಯ ಹಾಗೂ ಪ್ರಜಾಪ್ರಭುತ್ವದ ಉಳಿವಿನ ಗಂಭೀರ ವಿಚಾರಗಳನ್ನ ಕೈಗೆತ್ತಿಕೊಂಡರೆ, ಅದಕ್ಕೆ ಬೆಂಬಲ ಸೂಚಿಸುವುದರಲ್ಲಿ ಯಾವುದೇ ತಪ್ಪಿಲ್ಲ" ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಒಟ್ಟಾರೆಯಾಗಿ, ಧ್ರುವ್ ರಾಠಿ ಅವರ ಈ ಹೇಳಿಕೆಯು ಅವರ ರಾಜಕೀಯ ಪ್ರವೇಶದ ವದಂತಿಗಳಿಗೆ ಬ್ರೇಕ್ ಹಾಕಿದ್ದರೂ, ದೇಶದ ಆಡಳಿತಾತ್ಮಕ ಮತ್ತು ಸಾಂವಿಧಾನಿಕ ಪ್ರಶ್ನೆಗಳ ಬಗ್ಗೆ ಅವರು ನಿರಂತರವಾಗಿ ದನಿ ಎತ್ತಲಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಿದೆ. ಪ್ರಜಾಪ್ರಭುತ್ವದಲ್ಲಿ ಯುವಜನರು ಮತ್ತು ಪ್ರಭಾವಿ ವ್ಯಕ್ತಿಗಳು ರಾಜಕೀಯೇತರವಾಗಿ ಹೇಗೆ ಪಾಲ್ಗೊಳ್ಳಬಹುದು ಎಂಬುದಕ್ಕೆ ಇದೊಂದು ನಿದರ್ಶನವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+