Get Updates
Get notified of breaking news, exclusive insights, and must-see stories!

Wrestlers protest: ಇಂತಹ ದಿನಗಳನ್ನು ನೋಡಲು ಪದಕ ಗೆದ್ದು ತಂದೆವೇ..? ಕಣ್ಣೀರಿಟ್ಟ ವಿನೇಶ್ ಫೋಗಟ್

ನವದೆಹಲಿ, ಮೇ. 04: ದೆಹಲಿಯ ಪೋಲಿಸ್ ಸಿಬ್ಬಂದಿ ತಾವು ಪ್ರತಿಭಟನೆ ನಡೆಸುತ್ತಿರುವ ಗುಂಪಿನ ಕೆಲವು ಸದಸ್ಯರ ಮೇಲೆ ಹಲ್ಲೆ ಮಾಡಿರುವ ಆರೋಪದ ನಂತರ ಕುಸ್ತಿಪಟು ವಿನೇಶ್ ಫೋಗಟ್ ಭಾವುಕರಾಗಿದ್ದಾರೆ. "ಈ ದಿನವನ್ನು ನೋಡಲು ನಾವು ಪದಕಗಳನ್ನು ಗೆದ್ದಿದ್ದೇವೆಯೇ" ಎಂದು ಪ್ರಶ್ನಿಸಿರುವ ಅವರು ಕ್ಯಾಮೆರಾ ಮುಂದೆ ಕಣ್ಣೀರನ್ನು ತಡೆಯಲು ಪ್ರಯತ್ನಿಸಿದ್ದಾರೆ.

"ಕುಡಿದ" ಪೊಲೀಸ್ ಅಧಿಕಾರಿಯೊಬ್ಬರು ಮದ್ಯದ ಅಮಲಿನಲ್ಲಿ ಇಬ್ಬರು ಕುಸ್ತಿಪಟುಗಳ ಮೇಲೆ ಹಲ್ಲೆ ನಡೆಸಿದರು. ಆದರೆ ಅವರ ಸಹೋದ್ಯೋಗಿಗಳು ಮೂಕ ಪ್ರೇಕ್ಷಕರಾಗಿದ್ದರು ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. "ಮಹಿಳಾ ಪೊಲೀಸ್ ಅಧಿಕಾರಿಗಳು ಇರಲಿಲ್ಲ. ಆ ಪೊಲೀಸ್ ಅಧಿಕಾರಿ ಎಲ್ಲರನ್ನು ನೂಕ್ಕುತ್ತಿದ್ದರು ಮತ್ತು ಬಲವಂತವಾಗಿ ತಳ್ಳುತ್ತಿದ್ದರು" ಎಂದು ವಿನೇಶ್ ಫೋಗಟ್ ಹೇಳಿದ್ದಾರೆ.

 Did we win medals to see this day: wrestler Vinesh Phogat broke down

ಪೊಲೀಸರು ನಮ್ಮೊಂದಿಗೆ ಈ ರೀತಿ ವರ್ತಿಸಲು ನಾವು ಅಪರಾಧಿಗಳಲ್ಲ" ಎಂದು ಹೇಳಿರುವ ಅವರು, ಮಹಿಳಾ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಗೈರುಹಾಜರಾಗಿದ್ದನ್ನು ಪ್ರಶ್ನಿಸಿದ್ದಾರೆ. ನನ್ನನ್ನು ಪೊಲೀಸರು ನಿಂದಿಸಿದ್ದಾರೆ ಮತ್ತು ತಳ್ಳಿದ್ದಾರೆ. ಮಹಿಳಾ ಪೊಲೀಸ್ ಸಿಬ್ಬಂದಿ ಎಲ್ಲಿದ್ದಾರೆ" ಎಂದು ಕುಸ್ತಿಪಟು ವಿನೇಶ್ ಫೋಗಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುಧವಾರ ತಡರಾತ್ರಿ ಪ್ರತಿಭಟನಾ ನಿರತ ಕುಸ್ತಿಪಟುಗಳು ಮತ್ತು ದೆಹಲಿ ಪೊಲೀಸರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಪೊಲೀಸ್ ಸಿಬ್ಬಂದಿ ತಮ್ಮ ಮೇಲೆ ಹಲ್ಲೆ ನಡೆಸಿ ನಿಂದಿಸಿದ್ದಾರೆ . ತಮ್ಮ ಮೇಲೆ ಹಲ್ಲೆ ನಡೆಸಿದವರು ದೆಹಲಿ ಪೊಲೀಸ್ ಸಿಬ್ಬಂದಿ ಎಂದು ಕ್ರೀಡಾಪಟುಗಳು ಆರೋಪಿಸಿದ್ದಾರೆ.

ಆದರೆ ದಾಳಿಕೋರರ ಗುರುತಿನ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ರಾಷ್ಟ್ರ ರಾಜಧಾನಿಯ ಪ್ರತಿಭಟನಾ ಸ್ಥಳವಾದ ಜಂತರ್ ಮಂತರ್‌ನಲ್ಲಿ ಜನರು ಹಿಂಸಾಚಾರಕ್ಕೆ ಸಾಕ್ಷಿಯಾಗಿರುವುದು ಇದೇ ಮೊದಲು. ಸುದ್ದಿ ಸಂಸ್ಥೆ ಎಎನ್‌ಐ ಹಂಚಿಕೊಂಡಿರುವ ವಿಡಿಯೋದಲ್ಲಿ ಸ್ಥಳದಲ್ಲಿ ಕುಸ್ತಿಪಟುಗಳು ದೆಹಲಿ ಪೊಲೀಸರ ಸಮವಸ್ತ್ರದ ಸದಸ್ಯರೊಂದಿಗೆ ಜಗಳವಾಡುತ್ತಿರುವುದನ್ನು ಕಾಣಬಹುದಾಗಿದೆ.

ಘಟನೆ ಬಗ್ಗೆ ಪ್ರತಿಭಟನಾ ಸ್ಥಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಸ್ತಿಪಟು ಬಜರಂಗ್ ಪುನಿಯಾ, "ನಮಗೆ ಇಡೀ ದೇಶದ ಬೆಂಬಲದ ಅಗತ್ಯವಿದೆ, ಎಲ್ಲರೂ ದೆಹಲಿಗೆ ಬರಬೇಕು. ಪೊಲೀಸರು ನಮ್ಮ ವಿರುದ್ಧ ಬಲಪ್ರಯೋಗ ಮಾಡುತ್ತಿದ್ದಾರೆ, ಮಹಿಳೆಯರನ್ನು ನಿಂದಿಸುತ್ತಿದ್ದಾರೆ. ಆದರೆ, ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಏನನ್ನೂ ಮಾಡಿಲ್ಲ" ಎಂದು ಕಿಡಿಕಾರಿದ್ದಾರೆ.

 Did we win medals to see this day: wrestler Vinesh Phogat broke down

ಏಪ್ರಿಲ್ 23 ರಿಂದ ಜಂತರ್ ಮಂತರ್‌ನಲ್ಲಿ ಧರಣಿ ನಡೆಸುತ್ತಿರುವ ಕುಸ್ತಿಪಟುಗಳು, ಮಳೆಯಿಂದ ಹಾಸಿಗೆಗಳು ಒದ್ದೆಯಾದ ಕಾರಣ ಮಡಚುವ ಹಾಸಿಗೆಗಳನ್ನು ತರುತ್ತಿದ್ದರು. ಇದಕ್ಕೂ ಪೊಲೀಸರು ಅದಕ್ಕೆ ಅವಕಾಶ ನೀಡಲಿಲ್ಲ ಎಂದು ಆರೋಪಿಸಿದ್ದಾರೆ. ಘಟನೆಯ ನಂತರ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಸೋಮನಾಥ್ ಭಾರ್ತಿ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅನುಮತಿಯಿಲ್ಲದೆ ಮಡಚುವ ಹಾಸಿಗೆಗಳೊಂದಿಗೆ ಶಾಸಕರು ಪ್ರತಿಭಟನಾ ಸ್ಥಳಕ್ಕೆ ಬಂದಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಕುಸ್ತಿಪಟುಗಳು ಏಳು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಹಾಕಿರುವ ಆರೋಪದಲ್ಲಿ ಉತ್ತರ ಪ್ರದೇಶದ ಬಿಜೆಪಿ ಸಂಸದ ಮತ್ತು ಭಾರತ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಿಮಿನಲ್ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಸಂಸತ್ರಸ್ತರಲ್ಲಿ ಒಬ್ಬರು ಅಪ್ರಾಪ್ತರಾಗಿದ್ದಾರೆ. ಸುಪ್ರೀಂಕೋರ್ಟ್ ಮಧ್ಯ ಪ್ರವೇಶದ ನಂತರ ದೆಹಲಿ ಪೊಲೀಸರು ಶುಕ್ರವಾರ ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+