Get Updates
Get notified of breaking news, exclusive insights, and must-see stories!

ಮುಲಾಯಂ ಸಿಂಗ್ ಯಾದವ್‌ನಿಧನಕ್ಕೆ ಗಣ್ಯರ ಸಂತಾಪ

ಲಕ್ನೋ, ಅಕ್ಟೋಬರ್ 10: ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್‌ ಯಾದವ್‌ ಅವರು ನಿಧನ ಹೊಂದಿದ್ದು, ಅವರ ನಿಧನಕ್ಕೆ ದೇಶಾದ್ಯಂತ ಗಣ್ಯರು ಕಂಬನಿ ಮಿಡಿದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ, ನಾವು ನಮ್ಮ ನಮ್ಮ ರಾಜ್ಯಗಳ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದಾಗ ನಾನು ಮುಲಾಯಂ ಸಿಂಗ್ ಯಾದವ್ ಜೀ ಅವರೊಂದಿಗೆ ಅನೇಕ ಸಂವಾದಗಳನ್ನು ನಡೆಸಿದೆ. ಅವರ ನಿಕಟ ಒಡನಾಟವು ಮುಂದುವರೆದಿತ್ತು. ನಾನು ಯಾವಾಗಲೂ ಅವರ ಅಭಿಪ್ರಾಯಗಳನ್ನು ಕೇಳಲು ಎದುರು ನೋಡುತ್ತಿದ್ದೆ. ಅವರ ನಿಧನ ನನಗೆ ನೋವು ತಂದಿದೆ. ಅವರ ಕುಟುಂಬಕ್ಕೆ ಮತ್ತು ಲಕ್ಷಾಂತರ ಬೆಂಬಲಿಗರಿಗೆ ಸಂತಾಪ. ಓಂ ಶಾಂತಿ ಎಂದು ಸಂತಾಪ ಸೂಚಿಸಿದ್ದಾರೆ.

ಮುಲಾಯಂ ಸಿಂಗ್ ಯಾದವ್ ಜಿ ಉತ್ತರಪ್ರದೇಶ ಮತ್ತು ರಾಷ್ಟ್ರೀಯ ರಾಜಕೀಯದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡರು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಪ್ರಮುಖ ಸೈನಿಕರಾಗಿದ್ದರು. ರಕ್ಷಣಾ ಸಚಿವರಾಗಿ ಅವರು ಬಲಿಷ್ಠ ಭಾರತಕ್ಕಾಗಿ ಶ್ರಮಿಸಿದರು. ಅವರ ಸಂಸದೀಯ ಮಧ್ಯಸ್ಥಿಕೆಗಳು ಒಳನೋಟವುಳ್ಳವು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳನ್ನು ಹೆಚ್ಚಿಸಲು ಒತ್ತು ನೀಡಿದ್ದವು ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

ಮುಲಾಯಂ ಸಿಂಗ್ ಯಾದವ್ ಜಿ ಅವರು ಗಮನಾರ್ಹ ವ್ಯಕ್ತಿತ್ವ ಹೊಂದಿದ್ದರು. ಜನರ ಸಮಸ್ಯೆಗಳ ಬಗ್ಗೆ ಸಂವೇದನಾಶೀಲರಾಗಿದ್ದ ಅವರು ವಿನಮ್ರ ಮತ್ತು ನೆಲದ ನಾಯಕರಾಗಿ ವ್ಯಾಪಕವಾಗಿ ಪ್ರಶಂಸಿಸಲ್ಪಟ್ಟರು. ಅವರು ಶ್ರದ್ಧೆಯಿಂದ ಜನರಿಗೆ ಸೇವೆ ಸಲ್ಲಿಸಿದರು ಮತ್ತು ಲೋಕನಾಯಕ್ ಜೆಪಿ ಮತ್ತು ಡಾ. ಲೋಹಿಯಾ ಅವರ ಆದರ್ಶಗಳನ್ನು ಜನಪ್ರಿಯಗೊಳಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು ಎಂದು ಬರೆದಿದ್ದಾರೆ.

ಇನ್ನು ಮಾಜಿ ಪ್ರಧಾನಿ ಎಚ್‌ಡಿ ದೇರ್ವಗೌಡ ಸಹ ನನ್ನ ಬಹುಕಾಲದ ಸಹೋದ್ಯೋಗಿ ಮತ್ತು ಸ್ನೇಹಿತ ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಅವರ ಕುಟುಂಬ ಮತ್ತು ಅನುಯಾಯಿಗಳಿಗೆ ನನ್ನ ಸಂತಾಪ. ಅವರು ಜಾತ್ಯತೀತ ಮತ್ತು ಸಮಾಜವಾದಿ ರಾಜಕೀಯ ಸಂಪ್ರದಾಯಗಳಿಗೆ ಆಳವಾಗಿ ಬದ್ಧರಾಗಿದ್ದರು. ಅವನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ ಎಂದು ಟ್ವೀಟ್‌ ಮಾಡಿದ್ದಾರೆ.

ನೇತಾ ಜಿ ಅವರದು ಉತ್ಕೃಷ್ಟ ವ್ಯಕ್ತಿತ್ವ

ನೇತಾ ಜಿ ಅವರದು ಉತ್ಕೃಷ್ಟ ವ್ಯಕ್ತಿತ್ವ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಅವರು ಅಖಿಲೇಶ್ ಯಾದವ್‌ ಮತ್ತು ಅವರ ಇಡೀ ಕುಟುಂಬಕ್ಕೆ ನಮ್ಮ ಹೃತ್ಪೂರ್ವಕ ಸಂತಾಪವನ್ನು ತಿಳಿಸುತ್ತೇನೆ. ನೇತಾ ಜಿ ಅವರು ಉತ್ಕೃಷ್ಟ ವ್ಯಕ್ತಿತ್ವ ಮತ್ತು ಯುಪಿ ಮತ್ತು ದೇಶದ ಉಳಿದ ಭಾಗಗಳಿಗೆ ಅವರ ಕೊಡುಗೆಯನ್ನು ಮರೆಯಲಾಗುವುದಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

ದೇಶಕ್ಕೆ ತುಂಬಲಾರದ ನಷ್ಟ: ಮುರ್ಮು

ದೇಶಕ್ಕೆ ತುಂಬಲಾರದ ನಷ್ಟ: ಮುರ್ಮು

ರಾಷ್ಟ್ರಪತಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಲಾಯಂ ಸಿಂಗ್ ಯಾದವ್ ಅವರ ನಿಧನವು ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಸಾಮಾನ್ಯ ಪರಿಸರದಿಂದ ಬಂದ ಮುಲಾಯಂ ಸಿಂಗ್ ಯಾದವ್ ಜಿಯವರ ಸಾಧನೆಗಳು ಅಸಾಧಾರಣವಾದವು. 'ಧರ್ತಿ ಪುತ್ರ' ಮುಲಾಯಂ ಜಿ ಅವರು ಭೂಮಿಗೆ ಸಂಬಂಧಿಸಿದ ಹಿರಿಯ ನಾಯಕರಾಗಿದ್ದರು. ಎಲ್ಲ ಪಕ್ಷಗಳ ಜನರೂ ಅವರನ್ನು ಗೌರವಿಸುತ್ತಿದ್ದರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಆಳವಾದ ಸಂತಾಪಗಳು ಎಂದು ಟ್ವೀಟ್‌ ಮಾಡಿದ್ದಾರೆ.

ಸಮಾಜವಾದದ ಪ್ರಮುಖ ಸ್ತಂಭ

ಸಮಾಜವಾದದ ಪ್ರಮುಖ ಸ್ತಂಭ

ಉತ್ತರಪ್ರದೇಶದ ಹಾಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೂಡ ಮುಲಾಯಂ ಸಿಂಗ್‌ ಯಾದವ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್‌ ಮಾಡಿದ್ದು, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಜಿ ಅವರ ನಿಧನವು ಅತ್ಯಂತ ದುಃಖಕರವಾಗಿದೆ. ಅವರ ಮರಣವು ಸಮಾಜವಾದದ ಪ್ರಮುಖ ಸ್ತಂಭ ಮತ್ತು ಹೋರಾಟದ ಯುಗದ ಅಂತ್ಯವನ್ನು ಗುರುತಿಸಿದೆ. ನಾನು ಯಾದವ್‌ ಜೀ ಅವರ ಕುಟುಂಬ, ಪಕ್ಷ ಹಾಗೂ ಕಾರ್ಯಕರ್ತರಿಗೆ ಸಂತಾಪ ಸೂಚಿಸುತ್ತೇನೆ ಎಂದು ಟ್ವೀಟ್‌ ಮಾಡಿದ್ದಾರೆ.

ಅಖಿಲೇಶ್ ಯಾದವ್‌ಗೆ ಯೋಗಿ ಆದಿತ್ಯನಾಥ್‌ ಕರೆ

ಅಖಿಲೇಶ್ ಯಾದವ್‌ಗೆ ಯೋಗಿ ಆದಿತ್ಯನಾಥ್‌ ಕರೆ

ಮುಂದುವರೆದು ಮುಲಾಯಂ ಸಿಂಗ್ ಯಾದವ್ ಅವರ ನಿಧನದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತಿಮ ಸಂಸ್ಕಾರ ನೆರವೇರಲಿದೆ ಎಂದು ಯೋಗಿ ಆದಿತ್ಯನಾಥ್‌ ಟ್ವೀಟ್‌ ಮಾಡಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್‌ ಆವರು ಯಾದವ್‌ ಪುತ್ರ ಅಖಿಲೇಶ್ ಯಾದವ್ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಸಂತಾಪ ವ್ಯಕ್ತಪಡಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+