ನಟ ರಣಬೀರ್ ಕಪೂರ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ, ಕಾರಣವೇನು ಗೊತ್ತಾ?
ನವದೆಹಲಿ, ಅಕ್ಟೋಬರ್ 04: ಗೇಮಿಂಗ್ ಆಪ್ ಮೇಲೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಣಬೀರ್ ಕಪೂರ್‌ಗೆ ಶುಕ್ರವಾರ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.
ಮಹಾದೇವ್ ಆನ್‌ಲೈನ್ ಬುಕ್ ಬೆಟ್ಟಿಂಗ್ ಆಪ್‌ಗೆ ರಣಬೀರ್ ಕಪೂರ್ ಸೋಷಿಯಲ್ ಮೀಡಿಯಾ ಇನ್‌ಪ್ಲೂಯನ್ಸರ್ ಆಗಿದ್ದಾರೆ. ಅಲ್ಲದೆ ಈ ಆಪ್‌ಗಾಗಿ ಪ್ರಚಾರ ಕೈಗೊಳ್ಳಲು ಹಣವನ್ನು ಸ್ವೀಕರಿಸಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧ ವಿಚಾರಣೆಗೆ ರಣಬೀರ್ ಕಪೂರ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.

ಬಾಲಿವುಡ್ ನಟರು, ಗಾಯಕರು ಮತ್ತು ಹಾಸ್ಯನಟರು ಸೇರಿದಂತೆ ಹಲವಾರು ಖ್ಯಾತ ಸೆಲೆಬ್ರಿಟಿಗಳು ದುಬೈನಲ್ಲಿ ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್‌ನ ಸಹ-ಪ್ರವರ್ತಕ ಸೌರಭ್ ಚಂದ್ರಕರ್ ಅವರ ಅದ್ದೂರಿ ವಿವಾಹದಲ್ಲಿ ಭಾಗವಹಿಸಿದ್ದಕ್ಕಾಗಿ ತನಿಖಾ ಸಂಸ್ಥೆಯ ವಿಚಾರಣೆಗೆ ಒಳಗಾಗಬೇಕಿದೆ. ಆಪ್ ವಿರುದ್ಧ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಲವು ಸೆಲೆಬ್ರಿಟಿಗಳನ್ನು ಸಾಕ್ಷಿಗಳಾಗಿ ಸಮನ್ಸ್ ನೀಡುವ ಸಾಧ್ಯತೆಯಿದೆ ಎಂದು ಏಜೆನ್ಸಿ ಮೂಲಗಳು ತಿಳಿಸಿವೆ.
ಕಳೆದ ತಿಂಗಳು ಆನ್‌ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸು ವಂಚನೆ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆ ₹ 417 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿತ್ತು.
ಏನಿದು ಮಹದೇವ್ ಆನ್‌ಲೈನ್ ಬೆಟ್ಟಿಂಗ್ ಆಪ್ ಕೇಸ್?
ಮಹದೇವ್ ಆನ್‌ಲೈನ್ ಬುಕ್ ಆ್ಯಪ್ ಯುಎಇಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. ಇದರೊಂದಿಗೆ ಸಂಪರ್ಕ ಹೊಂದಿದ ಮನಿ ಲಾಂಡರಿಂಗ್ ನೆಟ್‌ವರ್ಕ್‌ಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕೋಲ್ಕತ್ತಾ, ಭೋಪಾಲ್, ಮುಂಬೈ ಸೇರಿದಂತೆ ಹಲವು ನಗರಗಳಲ್ಲಿ ಹುಡುಕಾಟ ನಡೆಸಿತ್ತು.
ಈ ಬೃಹತ್ ಪ್ರಮಾಣದ ಹಣ ವರ್ಗಾವಣೆ ಕಾರ್ಯಾಚರಣೆಗಳನ್ನು ಆಫ್-ಶೋರ್ ಖಾತೆಗಳಿಗೆ ಬೆಟ್ಟಿಂಗ್ ಆದಾಯವನ್ನು ಸಿಫನ್ ಮಾಡಲು ವೇದಿಕೆಯನ್ನು ಬಳಸಿಕೊಂಡು ಮಾಡಲಾಗುತ್ತಿದೆ ಎಂದು ಆರೋಪ ಮಾಡಲಾಗಿದೆ. ಈ ಆಪ್‌ನ ಪ್ರಚಾರಕರು ಮದುವೆಗೆ ₹ 200 ಕೋಟಿ ಖರ್ಚು ಮಾಡಿದ್ದಾರೆ. ಇದರ ಫಲಾನುಭವಿಗಳನ್ನು ಹಿಡಿಯಲು ಸಂಸ್ಥೆ ಹಣದ ಹಾದಿಯನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದೆ ಎಂದು ಇಡಿ ಮೂಲಗಳು ತಿಳಿಸಿವೆ.
ಆರೋಪಿಗಳಾದ ಸೌರಭ್ ಚಂದ್ರಕರ್ ಮತ್ತು ರವಿ ಉಪ್ಪಲ್ ಪ್ರಸ್ತುತ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿದ್ದಾರೆ. ಜಾರಿ ನಿರ್ದೇಶನಾಲಯ ಮತ್ತು ಛತ್ತೀಸ್‌ಗಢ ಪೊಲೀಸರು ಆಗಸ್ಟ್‌ನಲ್ಲಿ ಆರೋಪಿಗಳ ವಿರುದ್ಧ ಲುಕ್‌ಔಟ್ ಸುತ್ತೋಲೆಗಳನ್ನು ಹೊರಡಿಸಿದ್ದಾರೆ. ಇವರಿಬ್ಬರು ಕಳೆದ ತಿಂಗಳು ಆಸ್ಟ್ರೇಲಿಯಾಕ್ಕೆ ಭೇಟಿ ನೀಡಲು ಪ್ರಯತ್ನಿಸಿದ್ದರು ಆದರೆ ಭಾರತದಲ್ಲಿ ಅಕ್ರಮ ಹಣ ವರ್ಗಾವಣೆಯ ತನಿಖೆಯಿಂದಾಗಿ ಪ್ರವೇಶವನ್ನು ನಿರಾಕರಿಸಲಾಯಿತು.












Click it and Unblock the Notifications