Rain News: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕನ್ನಡಿಗರಿಗೆ ಮತ್ತೆ ಶಾಕ್!
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಭಾರಿ ಹಿನ್ನಡೆಯಾಗುತ್ತದೆ. ಅದ್ರಲ್ಲೂ ನೆರೆಯ ರಾಜ್ಯ ತಮಿಳುನಾಡಿನಲ್ಲಿ ಈಗ ಭಾರಿ ಮಳೆ ಸುರಿಯುತ್ತಿದ್ದರೂ, ಕಾವೇರಿ ನೀರು ಬಿಡುವಂತೆ ಕರ್ನಾಟಕದ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಇದೀಗ ಮತ್ತೊಮ್ಮೆ ಅಂತಹದ್ದೇ ಆದೇಶ ಹೊರಬಿದ್ದಿದ್ದು, ಕನ್ನಡಿಗರಿಗೆ ಈ ವರ್ಷ ಕುಡಿಯುವ ನೀರಿಗೂ ಭೀಕರ ಪರಿಸ್ಥಿತಿ ನಿರ್ಮಾಣ ಆಗುವುದು ಬಹುತೇಕ ಗ್ಯಾರಂಟಿ ಆಗಿದೆ.
ಹೌದು, ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರೆಗೆ ಅಂದ್ರೆ ಡಿಸೆಂಬರ್ 31ರ ತನಕ ಪ್ರತಿದಿನ 3,216 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕಕ್ಕೆ ಇದೀಗ ಶಿಫಾರಸು ಮಾಡಿದೆ. ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಪಟ್ಟಂತೆ ಕರ್ನಾಟಕ & ತಮಿಳುನಾಡು ರಾಜ್ಯದ ಅಧಿಕಾರಿಗಳ ಜೊತೆ ಕಾವೇರಿ ನೀರು ನಿಯಂತ್ರಣ ಸಮಿತಿಯ 90ನೇ ಸಭೆ ನಡೆಸಿತು. ಇಂದು ನಡೆದ ಮಹತ್ವದ ಸಭೆಯಲ್ಲಿ ಕರ್ನಾಟಕಕ್ಕೆ ರಿಲೀಫ್ ಸಿಗಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ ಆಗಿದ್ದೆ ಬೇರೆ ಕರ್ನಾಟಕದ ಮೇಲೆ ಮತ್ತೆ ಹೊರೆ ಬಿದ್ದಿದೆ.

ಕರ್ನಾಟಕದ ಮನವಿಗೆ ಬೆಲೆಯೇ ಇಲ್ವಾ?
ಮುಂದಿನ 30 ದಿನಗಳ ಕಾಲ ಕರ್ನಾಟಕ ಒಟ್ಟು 5,000 ಕ್ಯೂಸೆಕ್ ನೀರು ಹರಿಸಲು ಶಿಫಾರಸು ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಎದುರು ತಮಿಳುನಾಡು ಬೇಡಿಕೆ ಇಟ್ಟಿದೆ. ಆದ್ರೆ ಕರ್ನಾಟಕದ ಅಧಿಕಾರಿಗಳು ಕಾವೇರಿ ಕೊಳ್ಳದ ಪರಿಸ್ಥಿತಿ ವಿವರಿಸಿದ್ದರು. ಕರ್ನಾಟಕದ 4 ಜಲಾಶಯಗಳಿಗೆ ಒಳಹರಿವು ನಿಂತಿದೆ. 2023 ನ. 21ರಂತೆ ಈ ನಾಲ್ಕೂ ಜಲಾಶಯಗಳಲ್ಲಿನ ನೀರಿನ ಸಂಗ್ರಹ ಕುಸಿತ ಕಂಡಿದೆ. ಹೀಗಾಗಿ ನೀರಾವರಿ ಸೇರಿದಂತೆ ಕುಡಿಯುವ ನೀರು & ಇತರ ಅವಶ್ಯಕತೆಗೆ ನೀರಿನ ಕೊರತೆ ಎದುರಾಗಿದೆ ಹೀಗಾಗಿ ನೀರು ಬಿಡುವಂತೆ ಆದೇಶ ನೀಡಬೇಡಿ ಎಂದು ಕರ್ನಾಟಕ ಬೇಡಿಕೆ ಇಟ್ಟಿತ್ತು.
ಇಷ್ಟೆಲ್ಲದರ ನಡುವೆ ಡಿಸೆಂಬರ್ 31ರ ತನಕ ನಿತ್ಯ 3216 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಶಿಫಾರಸು ಮಾಡಿದೆ. ಈ ಮೂಲಕ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ದೊಡ್ಡ ಹಿನ್ನಡೆಯಾಗಿದೆ. ಅಲ್ಲದೆ ಈ ವರ್ಷ ಬೇಸಿಗೆ ಸಮಯಕ್ಕೆ ಕನಿಷ್ಠ ಕುಡಿಯುವ ನೀರಿಗೂ ತೊಂದರೆ ಎದುರಾಗುವ ಆತಂಕ ಆವರಿಸಿದೆ.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್












Click it and Unblock the Notifications