‘ಜನತಾ ಜನಾರ್ಧನ’ನ ಬಗ್ಗೆ ಪ್ರಧಾನಿ ಮೋದಿ ಮನದಾಳದ ಮಾತು!
ಪಂಚರಾಜ್ಯ ಚುನಾವಣೆ ಪೈಕಿ 4 ರಾಜ್ಯಗಳ ಫಲಿತಾಂಶ ಇಂದು ಹೊರಬಿದ್ದಿದ್ದು, ಬಿಜೆಪಿಗೆ ಅದ್ಭುತ ಜಯ ಸಿಕ್ಕಿದೆ. ಅದರಲ್ಲೂ ಮಧ್ಯ ಭಾರತದ ರಾಜ್ಯಗಳಾದ ಛತ್ತೀಸ್‌ಗಢ ಸೇರಿದಂತೆ ಮಧ್ಯಪ್ರದೇಶ ರಾಜ್ಯದಲ್ಲಿ ಬಿಜೆಪಿ ಪ್ರಚಂಡ ಜಯ ಸಾಧಿಸಿದೆ. ಹಾಗೇ ಉತ್ತರ ಭಾರತದಲ್ಲಿ ತನ್ನದೇ ಶಕ್ತಿ ಹೊಂದಿರುವ ರಾಜಸ್ಥಾನದಲ್ಲೂ, ಬಿಜೆಪಿ ತನ್ನ ಗೆಲುವಿನ ಬಾವುಟ ನೆಟ್ಟಿದೆ. ಈ ಬಗ್ಗೆ ಇದೀಗ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.
ಮಧ್ಯಪ್ರದೇಶ ರಾಜ್ಯದಲ್ಲಿ 160ಕ್ಕೂ ಹೆಚ್ಚು ಸ್ಥಾನ ಪಡೆದು ಬಿಜೆಪಿ ಅಧಿಕಾರದ ಗದ್ದುಗೆಗೆ, ಮತ್ತೊಮ್ಮೆ ಭರ್ಜರಿ ಎಂಟ್ರಿ ಕೊಟ್ಟಿದೆ. ಹಾಗೇ ರಾಜಸ್ಥಾನದಲ್ಲಿ 115 ಸ್ಥಾನ ಪಡೆದಿದೆ. ಈ ಸಮಯದಲ್ಲೇ ಛತ್ತೀಸ್‌ಗಢ ರಾಜ್ಯದಲ್ಲಿ 54 ಸ್ಥಾನ ಪಡೆದಿದೆ ಬಿಜೆಪಿ. ಈ ಮೂಲಕವಾಗಿ 3 ರಾಜ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ಬಿಜೆಪಿ ಇಲ್ಲಿ ಸರ್ಕಾರ ರಚನೆ ಮಾಡಲಿದೆ. ಇದೇ ವೇಳೆ ಪ್ರಧಾನಿ ಮೋದಿ ಕೂಡ ಈ ಗೆಲುವಿನ ಬಗ್ಗೆ ಮಾತನಾಡಿದ್ದಾರೆ.

ಜನತಾ ಜನಾರ್ಧನನಿಗೆ ಪ್ರಧಾನಿ ಸಂದೇಶ!
ಪ್ರಧಾನಿ ನರೇಂದ್ರ ಮೋದಿ 4 ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಟ್ವೀಟ್ ಮಾಡಿದ್ದು, 'ಜನತಾ ಜನಾರ್ದನನಿಗೆ ನಮಿಸುತ್ತಾ ಛತ್ತೀಸ್‌ಗಢ, ಮಧ್ಯಪ್ರದೇಶ & ರಾಜಸ್ಥಾನ ಫಲಿತಾಂಶಗಳು ಭಾರತದ ಜನರು ಉತ್ತಮ ಆಡಳಿತ ಮತ್ತು ಅಭಿವೃದ್ಧಿಯ ರಾಜಕೀಯ ನೀಡುವ ಬಿಜೆಪಿ ಪಕ್ಷದ ಜತೆ ದೃಢವಾಗಿ ಇದ್ದಾರೆ ಎಂಬುದನ್ನು ಸೂಚಿಸುತ್ತದೆ. ಈ ರಾಜ್ಯಗಳ ಜನರಿಗೆ ಅವರ ಅಚಲ ಬೆಂಬಲಕ್ಕಾಗಿ ನಾನು ಧನ್ಯವಾದ ಹೇಳುತ್ತೇನೆ.
We bow to the Janta Janardan.
— Narendra Modi (@narendramodi) December 3, 2023
The results in Chhattisgarh, Madhya Pradesh and Rajasthan indicate that the people of India are firmly with politics of good governance and development, which the @BJP4India stands for.
I thank the people of these states for their unwavering…
ಅವರ ಯೋಗಕ್ಷೇಮಕ್ಕಾಗಿ ನಾವು ದಣಿವರಿಯಿಲ್ಲದೆ ಶ್ರಮಿಸುತ್ತೇವೆ ಎಂದು ಅವರಿಗೆ ಭರವಸೆ ನೀಡುತ್ತೇನೆ. ದಣಿವರಿಯದೆ ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೆ ವಿಶೇಷ ಧನ್ಯವಾದ. ಅವರು ಅನುಕರಣೀಯ! ಅವರು ದಣಿವರಿಯದೆ ಕೆಲಸ ಮಾಡಿದ್ದಾರೆ ಮತ್ತು ನಮ್ಮ ಅಭಿವೃದ್ಧಿ ಕಾರ್ಯಸೂಚಿಯನ್ನು ಜನರಿಗೆ ತಲುಪಿಸಿದ್ದಾರೆ.' ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ರಿಯಾಕ್ಷನ್ ಕೊಟ್ಟಿದ್ದಾರೆ.
My dear sisters and brothers of Telangana,
— Narendra Modi (@narendramodi) December 3, 2023
Thank you for your support to the @BJP4India. Over the last few years, this support has only been increasing and this trend will continue in the times to come.
Our bond with Telangana is unbreakable and we will keep working for the…
ತೆಲಂಗಾಣದಲ್ಲಿ ಬೆಂಬಲ ಹೆಚ್ಚಾಗುತ್ತಿದೆ!
ಪ್ರಧಾನಿ ಮೋದಿ ಅವರು ತೆಲಂಗಾಣ ರಾಜ್ಯದ ಬಗ್ಗೆಯೂ ಪ್ರಸ್ತಾಪ ಮಾಡಿದ್ದು, 'ನನ್ನ ಪ್ರೀತಿಯ ತೆಲಂಗಾಣದ ಸಹೋದರ -ಸಹೋದರಿಯರೇ ಬಿಜೆಪಿಗೆ ನೀವು ನೀಡಿದ ಬೆಂಬಲಕ್ಕೆ ಧನ್ಯವಾದಗಳು. ಕಳೆದ ಕೆಲವು ವರ್ಷಗಳಿಂದ, ಈ ಬೆಂಬಲ ಹೆಚ್ಚಾಗುತ್ತಾ ಬರುತ್ತಿದೆ. ಈ ಬಾಂಧವ್ಯವು ಮುಂಬರುವ ಸಮಯಗಳಲ್ಲಿ ಮುಂದುವರಿಯುತ್ತದೆ. ನಾವು ಜನರಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ. ತೆಲಂಗಾಣದ ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರ ಶ್ರಮದಾಯಕ ಪ್ರಯತ್ನ ಪ್ರಶಂಸಿಸುತ್ತೇವೆ.' ಅಂತಾ ಟ್ವೀಟ್ ಮೂಲಕ ತಿಳಿಸಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications