‘ಒಂದು ದೇಶ, ಒಂದು ಚುನಾವಣೆ’ ಒಕ್ಕೂಟ ವ್ಯವಸ್ಥೆ ಮೇಲಿನ ದಾಳಿ: ರಾಹುಲ್
ಲೋಕಸಭೆ ಚುನಾವಣೆ 2024ಕ್ಕೆ ಕೌಂಟ್‌ಡೌನ್ ಶುರುವಾದ ಸಂದರ್ಭದಲ್ಲೇ ಭಾರತದಲ್ಲಿ ಸಂಚಲನ ಸೃಷ್ಟಿಯಾಗಿದೆ. ಆದರೆ ಈ ಸಂಚಲನ ಸೃಷ್ಟಿಯಾಗಿದ್ದು 2024ರ ಲೋಕಸಭೆ ಚುನಾವಣೆ ಕಾರಣಕ್ಕೆ ಅಲ್ಲ, ಬದಲಾಗಿ 'ಒಂದು ದೇಶ, ಒಂದು ಚುನಾವಣೆ' ವ್ಯವಸ್ಥೆಯ ಕಾರಣಕ್ಕೆ. ಇದೀಗ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ವಿರೋಧ ಪಕ್ಷಗಳ ನಾಯಕರು ವಾಗ್ದಾಳಿ ತೀವ್ರಗೊಳಿಸಿದ್ದು, ರಾಹುಲ್ ಗಾಂಧಿ ಅಖಾಡ ಪ್ರವೇಶಿಸಿದ್ದಾರೆ.
INDIA, that is Bharat, is a Union of States.
— Rahul Gandhi (@RahulGandhi) September 3, 2023
The idea of ‘one nation, one election’ is an attack on the 🇮🇳 Union and all its States.
ಅಷ್ಟಕ್ಕೂ ರಾಜ್ಯಗಳ ವಿಧಾನಸಭೆಗಳು ಹಾಗೂ ಲೋಕಸಭೆಗೆ ಏಕಕಾಲಕ್ಕೆ ಚುನಾವಣೆ ನಡೆಸುವ 'ಒಂದು ದೇಶ ಒಂದು ಚುನಾವಣೆ' ಉದ್ದೇಶಕ್ಕೆ ಕಾಂಗ್ರೆಸ್ ನಾಯಕ ಮತ್ತು ಸಂಸದ ರಾಹುಲ್ ಗಾಂಧಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನ ರಾಹುಲ್ ಗಾಂಧಿ ಕಟುವಾಗಿ ಟೀಕಿಸಿದ್ದು, ಒಂದು ದೇಶ ಒಂದು ಚುನಾವಣೆ ಉದ್ದೇಶ ದೇಶದ ಒಕ್ಕೂಟ ವ್ಯವಸ್ಥೆ ಮತ್ತು ರಾಜ್ಯಗಳ ಮೇಲೆ ದಾಳಿ ನಡೆಸುವುದಾಗಿದೆ ಎಂದು ಆರೋಪ ಕೂಡ ಮಾಡಿದ್ದಾರೆ.

'ಇಂಡಿಯಾ ಅಂದರೆ ಭಾರತ, ಅದುವೇ..'
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪ ಮಾಡಿರುವ 'ಒಂದು ದೇಶ ಒಂದು ಚುನಾವಣೆ' ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದೀಗ ರಾಹುಲ್ ಗಾಂಧಿ ಕೂಡ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ಇದೇ ಟ್ವೀಟ್‌ನಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಬಗ್ಗೆ ಉಲ್ಲೇಖಿಸಿರುವ ರಾಹುಲ್, 'ಇಂಡಿಯಾ ಅಂದರೆ ಭಾರತ, ಅದುವೇ ರಾಜ್ಯಗಳ ಒಕ್ಕೂಟ' ಎಂದಿದ್ದಾರೆ. ಈ ಮೂಲಕ ಲೋಕಸಭೆ ಎಲೆಕ್ಷನ್‌ಗೆ ಮುನ್ನ ಮಿಂಚಿನ ಸಂಚಲನ ಸೃಷ್ಟಿಯಾಗಿದೆ.
ಏನಿದು ಹೊಸ ಚುನಾವಣೆ ವ್ಯವಸ್ಥೆ?
ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಯುತ್ತಿದ್ದವು. ರಾಜ್ಯ ವಿಧಾನಸಭೆಗಳು ಸೇರಿದಂತೆ ಲೋಕಸಭೆಗೆ ಒಂದೇ ಸಮಯಕ್ಕೆ ಚುನಾವಣೆ ನಡೆದಿವೆ. ಆದರೆ 1967 ರವರೆಗೆ ಇದ್ದ ಈ ವ್ಯವಸ್ಥೆ ನಂತರ ಬದಲಾಗುವ ಪರಿಸ್ಥಿತಿ ಸೃಷ್ಟಿಯಾಗಿತ್ತು. ಬದಲಾದ ಸನ್ನಿವೇಶ ಏಕಕಾಲಕ್ಕೆ ಚುನಾವಣೆ ನಡೆಯಲು ಅಡ್ಡಿಯಾಗಿತ್ತು. 1968 ಮತ್ತು 1969 ರಲ್ಲಿ ಕೆಲ ರಾಜ್ಯಗಳ ವಿಧಾನಸಭೆ ಅವಧಿಗೆ ಮುನ್ನವೇ ವಿಸರ್ಜನೆಗೊಂಡವು. ಅಲ್ಲದೆ 1970 ರಲ್ಲಿ ಲೋಕಸಭೆಯನ್ನು ವಿಸರ್ಜನೆ ಮಾಡಲಾಯಿತು. ಇದಾದ ನಂತರ ದೇಶಾದ್ಯಂತ ಒಂದೇ ಬಾರಿಗೆ ಚುನಾವಣೆ ನಡೆಸಲು ಸಲಹೆ ಕೇಳಿಬಂದಿತ್ತು.
ಸಮಿತಿ ರಚಿಸಿದ್ದ ಕಾನೂನು ಸಚಿವಾಲಯ
ಮತ್ತೊಂದ್ಕಡೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಸಮಿತಿಯನ್ನೂ ರಚನೆ ಮಾಡಲಾಗಿದ್ದು. ನಿನ್ನೆ ಆ ಸಮಿತಿಗೆ 7 ಸದಸ್ಯರನ್ನು ನೇಮಿಸಲಾಗಿತ್ತು. ಈ ಮೂಲಕ ಒಂದು ದೇಶ, ಒಂದು ಚುನಾವಣೆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿತ್ತು. ಈ ಸಮಿತಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಸಂಸದ ಅಧಿರ್ ರಂಜನ್ ಚೌಧರಿ, ಮಾಜಿ ಸಂಸದ ಗುಲಾಂ ನಬಿ ಆಜಾದ್, 15ನೇ ಹಣಕಾಸು ಆಯೋಗದ ಮಾಜಿ ಚೇರ್ಮನ್ ಎನ್.ಕೆ. ಸಿಂಗ್, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಡಾ. ಸುಭಾಷ್ ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ ಸೇರಿ ಮಾಜಿ ಚೀಫ್ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಇದ್ದಾರೆ. ಆದರೆ ಅಧಿರ್ ರಂಜನ್ ಚೌಧರಿ ಸಮಿತಿ ಸೇರಲ್ಲ ಎಂದು ಈಗಾಗಲೇ ಹೇಳಿದ್ದಾರೆ.

ಒಟ್ನಲ್ಲಿ 'ಒಂದು ದೇಶ, ಒಂದು ಚುನಾವಣೆ' ಬಗ್ಗೆ ಬಿಸಿಬಿಸಿ ಚರ್ಚೆ ನಡೆಯುವ ಸಂದರ್ಭ ರಾಹುಲ್ ಗಾಂಧಿ ಅಖಾಡ ಪ್ರವೇಶ ಮಾಡಿದ್ದಾರೆ. ಇನ್ನು ಈ ವಿಚಾರವಾಗಿ ಬಿಜೆಪಿ ಪಕ್ಷದ ನಾಯಕರು ರಾಹುಲ್ ಗಾಂಧಿ ವಿರುದ್ಧ ಮುಗಿಬೀಳುವ ನಿರೀಕ್ಷೆ ಇದೆ. ಹಾಗೇ ರಾಹುಲ್ ಮಾಡಿರುವ ಟ್ವೀಟ್ ಕುರಿತು ಚರ್ಚೆ ಕೂಡ ಆರಂಭವಾಗಿದೆ. ಆದರೆ ಈಗ ಮೂಡಿರುವ ಗೊಂದಲದ ಬಗ್ಗೆ ಹಾಗೂ 'ಒಂದು ದೇಶ ಒಂದು ಚುನಾವಣೆ' ಬಗ್ಗೆ ವಿಪಕ್ಷಗಳು ಆರೋಪ ಮುಂದುವರಿಸಿವೆ. ಅಲ್ಲದೆ 'ಒಂದು ದೇಶ ಒಂದು ಚುನಾವಣೆ' ವ್ಯವಸ್ಥೆ ಮೂಲಕ ದೇಶದ ಒಕ್ಕೂಟ ವ್ಯವಸ್ಥೆ ಅಂದರೆ ರಾಜ್ಯಗಳಿಗೆ ಅನ್ಯಾಯ ಆಗಲಿದೆ ಎಂದು ಆರೋಪಿಸುತ್ತಿವೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications