ಪ್ರಧಾನಿ ಮೋದಿ ವಿರುದ್ಧ ಹೈದರಾಬಾದ್‌ನಲ್ಲಿ ಮೊಳಗಿದ ಆಕ್ರೋಶ!
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತೆಲಂಗಾಣದ ಮಹಬೂಬ್‌ನಗರಕ್ಕೆ ಮಹತ್ವದ ಭೇಟಿ ನೀಡಲಿರುವ ಸಂದರ್ಭದಲ್ಲೇ ಭಾರಿ ಆಕ್ರೋಶ ವ್ಯಕ್ತವಾಗಿದೆ. ತೆಲಂಗಾಣ ರಾಜ್ಯದಲ್ಲಿ ಇನ್ನೇನು ಕೆಲವೇ ವಾರಗಳಲ್ಲಿ ವಿಧಾನಸಭೆ ಚುನಾವಣೆ ಕೂಡ ನಡೆಯಲಿದೆ. ಹೀಗೆ ನೆರೆಯ ರಾಜ್ಯ ತೆಲಂಗಾಣ ಚುನಾವಣೆಗೆ ಸಜ್ಜಾಗಿರುವ ಸಮಯದಲ್ಲೇ ಪ್ರಧಾನಿ ಮೋದಿ ಮಹತ್ವದ ಭೇಟಿ ನೀಡುತ್ತಿದ್ದಾರೆ, ಆದರೆ ಪ್ರಧಾನಿ ವಿರುದ್ಧವೇ ಈಗ ಆಕ್ರೋಶ ವ್ಯಕ್ತವಾಗುತ್ತಿದೆ.
ತೆಲಂಗಾಣದಲ್ಲಿ ಬಿಜೆಪಿ ಇದುವರೆಗೆ ಗಟ್ಟಿಯಾಗಿ ನೆಲೆಯೂರಿಲ್ಲ. ಹೀಗಾಗಿ ಕಮಲ ಅರಳಿಸಿ ಅಧಿಕಾರ ಪಡೆಯಲು ಬಿಜೆಪಿ ಹೈಕಮಾಂಡ್ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ. ಈ ಹಿನ್ನೆಲೆ ಬಿಜೆಪಿ ವರಿಷ್ಠರು ಸಾಕಷ್ಟು ಪ್ರಮುಖ ಸಭೆಗಳನ್ನು ತೆಲಂಗಾಣದಲ್ಲಿ ನಡೆಸಿ, ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಈ ವೇಳೆ ಮಹಬೂಬ್‌ನಗರಕ್ಕೆ ಪ್ರಧಾನಿ ಮೋದಿ ಕೂಡ ಭೇಟಿ ನೀಡುತ್ತಿರುವುದು ಸಾಕಷ್ಟು ಕುತೂಹಲ ಕೆರಳಿಸಿತ್ತು. ಆದರೆ ದಿಢೀರ್ ಪ್ರಧಾನಿಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಹಾಗಾದ್ರೆ ಪಿಎಂ ಮೋದಿ ವಿರುದ್ಧ ಹೀಗೆ ಆಕ್ರೋಶ ವ್ಯಕ್ತವಾಗಿದ್ದು ಏಕೆ? ಇದರ ಹಿಂದಿನ ಕಾರಣ ಏನು? ಸಂಪೂರ್ಣ ಮಾಹಿತಿ ಇಲ್ಲಿದೆ, ಮುಂದೆ ಓದಿ.

ಮೋದಿ ಅವರಿಂದ ಮಲತಾಯಿ ಧೋರಣೆ?
ಹೌದು, ಪ್ರಧಾನಿ ಮೋದಿ ಅವರ ವಿರುದ್ಧ ಇದೀಗ ಮಲತಾಯಿ ಧೋರಣೆ ಆರೋಪ ಕೇಳಿ ಬಂದಿದೆ. ಅಂದಹಾಗೆ ನೀರಾವರಿ ಯೋಜನೆಯಲ್ಲಿ ಪ್ರಧಾನಿ ಮೋದಿ ಅವರು ತೆಲಂಗಾಣದ ಜನರಿಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಪೋಸ್ಟರ್‌ಗಳನ್ನ ಅಂಟಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಈ ಮೂಲಕ ಚುನಾವಣೆಗೆ ಮುನ್ನ ಪಿಎಂ ಮೋದಿ ಅವರ ತೆಲಂಗಾಣ ಭೇಟಿಗೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಆದರೆ ಇದೆಲ್ಲಾ ರಾಜಕೀಯ ಪ್ರೇರಿತ ಎಂಬ ಆರೋಪವನ್ನು ಆಡಳಿತ ಪಕ್ಷದ ನಾಯಕರು ಮಾಡುತ್ತಿದ್ದಾರೆ.
ಚುನಾವಣೆ ಸಮಯದಲ್ಲೇ ಪೋಸ್ಟರ್ ವಾರ್
ಇದೀಗ ಪೋಸ್ಟರ್ ಮೂಲಕ ಆರೋಪ ಮಾಡಿರುವಂತೆ, ಆಂಧ್ರದ ಪೊಲಾವರಂ ಪ್ರಾಜೆಕ್ಟ್ ಹಾಗೂ ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ನೀಡಲಾಗಿದೆ. ಆದರೆ ತೆಲಂಗಾಣದ ಪಲಮುರು ಯೋಜನೆ ಬಗ್ಗೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸಿದೆ ಎಂದು ಆರೋಪಿಸಲಾಗಿದೆ. ಇದೇ ಕಾರಣಕ್ಕೆ ಇದೀಗ ತೀವ್ರ ಆಕ್ರೋಶ ಕೂಡ ವ್ಯಕ್ತವಾಗಿದೆ. ಮತ್ತೊಂದು ಕಡೆ ತೆಲಂಗಾಣ ಚುನಾವಣೆ ಹತ್ತಿರ ಬರ್ತಿದ್ದಂತೆ ಈ ರೀತಿಯ ಬೆಳವಣಿಗೆ ಗಮನ ಸೆಳೆಯುತ್ತಿದೆ.

ಒಟ್ನಲ್ಲಿ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ತೆಲಂಗಾಣದಲ್ಲಿ ರಾಜಕೀಯ ಕಿತ್ತಾಟ ಹಾಗೂ ಆರೋಪ ಮತ್ತು ಪ್ರತ್ಯಾರೋಪ ಜೋರಾಗಿದೆ. ಇದೇ ಸಂದರ್ಭದಲ್ಲಿ ತೆಲಂಗಾಣದ ವಿಜಯ ಯಾತ್ರೆಗೆ ಬಿಜೆಪಿ ಪಣತೊಟ್ಟಿದೆ. ಆದರೆ ಮತದಾರ ಪ್ರಭು ಯಾರ ಪರವಾಗಿ ಮತ ಹಾಕುತ್ತಾನೆ? ಯಾವ ಪಕ್ಷಕ್ಕೆ ಅಧಿಕಾರ ಸಿಗುತ್ತೆ? ಅನ್ನೋದನ್ನ ಕಾದು ನೋಡಬೇಕಿದೆ. ಈ ಮಧ್ಯೆ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಕೇಳಿಬಂದಿರುವ ಆರೋಪವನ್ನ ಈಗ ಬಿಜೆಪಿ ನಾಯಕರು ಹೇಗೆ ಎದುರಿಸುತ್ತಾರೆ ಎಂಬುದು ಕೂಡ ಕುತೂಹಲದ ಸಂಗತಿ.












Click it and Unblock the Notifications