ಮಧ್ಯಪ್ರದೇಶದಲ್ಲಿ ಅಮಾನವೀಯ ಘಟನೆ: ಅರೆ ಬೆತ್ತಲೆಯಾಗಿ ಸಹಾಯಕ್ಕಾಗಿ ಓಡಾಡಿದ ಅತ್ಯಾಚಾರಕ್ಕೊಳಗಾದ ಬಾಲಕಿ!
ಉಜ್ಜಯಿನಿ ಸೆಪ್ಟೆಂಬರ್ 27: ಉಜ್ಜಯಿನಿಯಲ್ಲಿ ಮನುಕುಲವೇ ತಲೆ ತಗ್ಗಿಸುವಂತಹ ಘಟನೆ ಬೆಳಕಿಗೆ ಬಂದಿದೆ. ಅತ್ಯಾಚಾರದ ಬಳಿಕ ರಕ್ತಸ್ರಾವದಿಂದ ಅರೆಬೆತ್ತಲೆಯಾಗಿ 12 ವರ್ಷದ ಬಾಲಕಿ ಮನೆ ಮನೆಗೆ ತೆರಳಿ ಸಹಾಯ ಕೇಳಿದ ಅಮಾನವೀಯ ಘಟನೆ ನಡೆದಿದೆ.
ಜನರು ಅವಳನ್ನು ನೋಡಿದರೂ ಸಹಾಯ ಮಾಡಲು ನಿರಾಕರಿಸಿದ್ದು ಕಂಡು ಬಂದಿದೆ. ಅವಳು ಸಹಾಯಕ್ಕಾಗಿ ಬಂದಾಗ ಒಬ್ಬ ವ್ಯಕ್ತಿ ಅವಳನ್ನು ಓಡಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರ ಮೇಲಿನ ದೌರ್ಜನ್ಯಗಳು ಸಾಮಾನ್ಯವಾಗಿರುವ ಈ ಕಾಲದಲ್ಲಿ ಸಮಾಜವನ್ನು ಬೆಚ್ಚಿಬೀಳಿಸುವ ಈ ದೃಶ್ಯ ಮಧ್ಯಪ್ರದೇಶದ ಉಜ್ಜಯಿನಿಯಿಂದ ಸುಮಾರು 15 ಕಿಮೀ ದೂರದಲ್ಲಿರುವ ಬದ್‌ನಗರ ರಸ್ತೆಯಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹುಡುಗಿ ತನ್ನನ್ನು ಅರೆ ಬಟ್ಟೆಯಲ್ಲಿ ಮುಚ್ಚಿಕೊಂಡು ಬೀದಿಗಳಲ್ಲಿ ಅಲೆದಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಲ್ಲಿನ ಅರ್ಚಕರೊಬ್ಬರು ಲೈಂಗಿಕ ದೌರ್ಜನ್ಯದ ಶಂಕೆ ವ್ಯಕ್ತಪಡಿಸಿ, ಟವೆಲ್‌ನಿಂದ ಬಾಲಕಿಗೆ ಹೊದಿಸಿ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದು ಮಾನವೀಯತೆ ತೋರಿದ್ದಾರೆ. ಬಾಲಕಿಗೆ ನಡೆದ ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ.
ಗಾಯಗಳು ಗಂಭೀರವಾಗಿದ್ದರಿಂದ ಬಾಲಕಿಯನ್ನು ಇಂದೋರ್‌ಗೆ ರವಾನಿಸಲಾಗಿದೆ. ಅಲ್ಲಿ ಆಕೆಗೆ ರಕ್ತದ ಅವಶ್ಯಕತೆ ಇದ್ದಾಗ ಪೊಲೀಸ್ ಸಿಬ್ಬಂದಿ ಮುಂದೆ ಬಂದು ಸಹಾಯಹಸ್ತ ಚಾಚಿದ್ದಾರೆ. ಆಕೆಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಆದರೆ ಬಾಲಕಿಯ ಗುರುತು ಮಾತ್ರ ಪತ್ತೆಯಾಗಿಲ್ಲ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ.
ಹುಡುಗಿಯ ಹೆಸರು ಮತ್ತು ವಿಳಾಸವನ್ನು ಕೇಳಿದಾಗ ಅವಳು ಸರಿಯಾಗಿ ಉತ್ತರಿಸಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಳು ಎಂದು ತಿಳಿದು ಬಂದಿದೆ. ಪೊಲೀಸರು ಅಪರಿಚಿತ ಆರೋಪಿಗಳ ವಿರುದ್ಧ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ಕಟ್ಟುನಿಟ್ಟಿನ ರಕ್ಷಣೆ (ಪೋಕ್ಸೊ) ಕಾಯ್ದೆಯನ್ನು ಸಹ ಅನ್ವಯಿಸಲಾಗಿದೆ. ಆದಷ್ಟು ಬೇಗ ಆರೋಪಿಗಳನ್ನು ಪತ್ತೆ ಹಚ್ಚಲು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಉಜ್ಜಯಿನಿ ಪೊಲೀಸ್ ಮುಖ್ಯಸ್ಥ ಸಚಿನ್ ಶರ್ಮಾ ತಿಳಿಸಿದ್ದಾರೆ.

"ವೈದ್ಯಕೀಯ ಪರೀಕ್ಷೆಯು ಅತ್ಯಾಚಾರವನ್ನು ದೃಢಪಡಿಸಿದೆ. ನಾವು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದ್ದೇವೆ ಮತ್ತು ಇದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಯಾವುದೇ ಮಾಹಿತಿ ಸಿಕ್ಕರೆ ಪೊಲೀಸರಿಗೆ ತಿಳಿಸುವಂತೆ ನಾವು ಜನರಿಗೆ ಮನವಿ ಮಾಡುತ್ತೇವೆ" ಎಂದು ಶರ್ಮಾ ಹೇಳಿದರು.
ಅಪರಾಧ ನಡೆದ ಸ್ಥಳದ ಬಗ್ಗೆ ಸುದ್ದಿಗಾರರು ಪ್ರಶ್ನೆ ಮಾಡಿದಾಗ ಶರ್ಮಾ ಅವರು, "ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ, ನಾವು ಶೀಘ್ರದಲ್ಲೇ ಮಾಹಿತಿಯೊಂದಿಗೆ ಬರುತ್ತೇವೆ" ಎಂದು ಹೇಳಿದರು. "ಹುಡುಗಿಯು ಎಲ್ಲಿಂದ ಬಂದವಳು ಎಂದು ನಮಗೆ ನಿಖರವಾಗಿ ಹೇಳಲು ಸಾಧ್ಯವಾಗಲಿಲ್ಲ. ಆದರೆ ಅವಳ ಉಚ್ಚಾರಣೆಯು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನವಳು ಎಂದು ಸೂಚಿಸುತ್ತದೆ" ಎಂದು ಅವರು ಹೇಳಿದರು.
ಈ ಭಯಾನಕ ಘಟನೆಯು ಮಧ್ಯಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಮತ್ತೊಮ್ಮೆ ಬೆಳಕು ಚೆಲ್ಲುತ್ತದೆ. 2019 ಮತ್ತು 2021 ರ ನಡುವೆ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರವು ಅತಿ ಹೆಚ್ಚು ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳನ್ನು ವರದಿ ಮಾಡಿದೆ. ಅಲ್ಲದೆ 2021 ರಲ್ಲಿ ಮಧ್ಯಪ್ರದೇಶವು ದೇಶದಲ್ಲಿ ಅತ್ಯಾಚಾರದ ಹೆಚ್ಚಿನ ಘಟನೆಗಳನ್ನು ವರದಿ ಮಾಡಿದೆ. 2021 ರಲ್ಲಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಡೇಟಾ ಪ್ರಕಾರ 6,462 ಅತ್ಯಾಚಾರಗಳು ನಡೆದಿವೆ. ಅವುಗಳಲ್ಲಿ ಶೇಕಡಾ 50 ಕ್ಕಿಂತ ಹೆಚ್ಚು ಅಪ್ರಾಪ್ತರ ವಿರುದ್ಧದ ಅಪರಾಧಗಳಾಗಿವೆ. ಈ ಸಂಖ್ಯೆಯು ದಿನಕ್ಕೆ 18 ಅತ್ಯಾಚಾರಗಳು ನಡೆದಿವೆ ಎಂದು ತೋರಿಸುತ್ತದೆ.
-
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications