• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನೇಣು ಕುಣಿಕೆಯಿಂದ ಯಾಕೂಬ್ ಗೆ ತಾತ್ಕಾಲಿಕ ರಿಲೀಫ್

By ವಿಕಾಸ್ ನಂಜಪ್ಪ
|

ನವದೆಹಲಿ, ಜುಲೈ 28: 1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ ಯಾಕೂಬ್ ಮೆಮನ್‌ ಗೆ ನೇಣು ಕುಣಿಕೆಯಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಜುಲೈ 30ರಂದು ಗಲ್ಲುಶಿಕ್ಷೆ ಪ್ರಕ್ರಿಯೆಗೆ ಸುಪ್ರೀಂಕೋರ್ಟ್ ಮಂಗಳವಾರ ತಾತ್ಕಾಲಿಕ ತಡೆ ನೀಡಿದ್ದು, ಈಗ ತ್ರಿಸದಸ್ಯ ವಿಭಾಗೀಯ ನ್ಯಾಯಾಪೀಠಕ್ಕೆ ಪ್ರಕರಣ ವರ್ಗಾವಣೆಯಾಗಿದೆ. ತ್ರಿಸದಸ್ಯ ಪೀಠ ಅಂತಿಮ ತೀರ್ಮಾನ ಕೈಗೊಳ್ಳುವವರೆಗೂ ಮೆಮನ್ ಗಲ್ಲುಶಿಕ್ಷೆ ಸಾಧ್ಯವಿಲ್ಲ.

ಜುಲೈ 30ರಂದು ಗಲ್ಲು ಶಿಕ್ಷೆಗೇರಬೇಕಿದ್ದ ಯಾಕೂಬ್ ಮೆಮನ್, ಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಮಂಗಳವಾರ ಸುಪ್ರೀಂಕೋರ್ಟಿನ ದ್ವಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿ ತಾತ್ಕಾಲಿಕ ತಡೆ ನೀಡಿದೆ. ಅರ್ಜಿ ವಿಚಾರಣೆಯನ್ನು ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠಕ್ಕೆ ವರ್ಗಾವಣೆ ಮಾಡಲಾಗಿದೆ. [ಮೆಮನ್ ಗಲ್ಲಿಗೇರಿಸಲು ಡೇಟ್ ಫಿಕ್ಸ್]

ವರ್ಗಾವಣೆ ಏಕೆ?: ದ್ವಿಸದಸ್ಯ ಪೀಠದ ನ್ಯಾಯಾಧೀಶರಾದ ಜಸ್ಟೀಸ್ ಎಆರ್ ದೇವ್ ಹಾಗೂ ಕುರಿಯನ್ ಜೋಸೆಫ್ ಅವರಿಬ್ಬರ ನಡುವೆ ಜುಲೈ 30ಕ್ಕೆ ಯಾಕೂಬ್ ನನ್ನು ಗಲ್ಲಿಗೇರಿಸುವ ವಿಷಯದಲ್ಲಿ ಭಿನ್ನಾಭಿಪ್ರಾಯ ಉಂಟಾಗಿದೆ. [ಮೆಮನ್ ಬೆಂಬಲಿಸುವವರು ದೇಶ ದ್ರೋಹಿಗಳು: ಟ್ವೀಟ್ ಅಭಿಮತ]

ಗಲ್ಲಿಗೇರಿಸಲು ಎರಡು ದಿನ ಬಾಕಿ ಇರುವಾಗ ಯಾಕೂಬ್ ಸಲ್ಲಿಸಿರುವ ಅರ್ಜಿ ಪುರಸ್ಕರಿಸಬೇಕೇ? ಈ ಪ್ರಕರಣದಲ್ಲಿ ಇನ್ನೂ ಅರ್ಜಿ ವಿಚಾರಣೆ ಅಗತ್ಯವಿದೆಯೇ? ಎಂಬ ಪ್ರಶ್ನೆಗಳಿಗೆ ಪರಿಹಾರ ಸಿಗದ ಕಾರಣ ವಿಸ್ತೃತ ನ್ಯಾಯಪೀಠಕ್ಕೆ ವರ್ಗಾಯಿಸಲಾಗಿದೆ.[ಸುಪ್ರೀಂ ಮೊರೆ ಹೋದ ಯಾಕೂಬ್]

ಮುಖ್ಯ ನ್ಯಾಯಮೂರ್ತಿಗಳ ಅಧಿಕಾರ: ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎಚ್ ಎಲ್ ದತ್ತು ಅವರು ಈ ವಿಷಯದ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ಹೊಂದಿದ್ದಾರೆ. ಹೊಸದಾಗಿ ತ್ರಿಸದಸ್ಯ ರಚನೆ ಜವಾಬ್ದಾರಿ ಕೂಡಾ ನ್ಯಾ. ದತ್ತು ಅವರ ಮೇಲಿದೆ.

ಈ ಹಿಂದೆ ಮೆಮನ್ ಸಲ್ಲಿಸಿದ್ದ ಕ್ಯೂರೇಟರ್ ಅರ್ಜಿಯನ್ನು ತಿರಸ್ಕರಿಸಿದ್ದ ತ್ರಿಸದಸ್ಯ ನ್ಯಾಯಪೀಠದಲ್ಲಿ ನ್ಯಾ. ದತ್ತು ಅವರು ಇದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು. ಇದಾದ ಬಳಿಕೆ ಮಹಾರಾಷ್ಟ್ರ ಸರ್ಕಾರ ಹಾಗೂ ಸುಪ್ರೀಂಕೋರ್ಟಿಗೆ ಮತ್ತೊಮ್ಮೆ ಮೆಮನ್ ಮನವಿ ಸಲ್ಲಿಸಿದ್ದರು.

ಮತ್ತೆ ಅರ್ಜಿ ಸಲ್ಲಿಸಿದ್ದು ಏಕೆ?: ಕ್ಯೂರೇಟರ್ ಅರ್ಜಿ ಸಲ್ಲಿಸುವುದಕ್ಕೂ ಮುನ್ನ ಇದ್ದ ಪರಿಸ್ಥಿತಿಗೂ ಈಗಿನ ಪರಿಸ್ಥಿತಿಗೂ ವ್ಯತ್ಯಾಸವಿದೆ. 1996 ಸ್ಕಿಜೋಫ್ರೆನಿಯಾ ಕಾಯಿಲೆಯಿಂದ ಬಳಲುತ್ತಿದ್ದೇನೆ. 20 ವರ್ಷಗಳಿಂದ ಜೈಲುವಾಸ ಅನುಭವಿಸಿದ್ದೇನೆ. ನನಗೆ ನೀಡಿರುವ ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿ, ಗಲ್ಲು ಹಾಗೂ ಜೀವಾವಧಿ ಎರಡನ್ನು ಹೇಗೆ ಅನುಭವಿಸಲಿ ಎಂದು ಪ್ರಶ್ನಿಸಿದ್ದಾರೆ. (ಒನ್ ಇಂಡಿಯಾ ಸುದ್ದಿ)

English summary
The final decision on whether Yakub Memon will be hanged or not will be taken by a larger Bench of the Supreme Court of India. The Bench of the Supreme Court which was split in its decision decided to refer the matter for a final decision to a large Bench.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X