• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ದೀಪಾವಳಿ ಪಟಾಕಿ ನಿಷೇಧಿಸದ ರಾಜ್ಯಗಳ ಪಟ್ಟಿ

|

ನವದೆಹಲಿ, ನವೆಂಬರ್ 13: ವಾಯುಮಾಲಿನ್ಯ ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ಸಾಕಷ್ಟು ರಾಜ್ಯಗಳು ದೀಪಾವಳಿ ಪಟಾಕಿಯ ಖರೀದಿ ಹಾಗೂ ಮಾರಾಟದ ಮೇಲೆ ನಿಷೇಧ ಹೇರಿವೆ.

ದೆಹಲಿಯಲ್ಲಿ ವಾಯುಗುಣಮಟ್ಟ ಕಳಪೆಯಾಗಿರುವ ಹಿನ್ನೆಲೆಯಲ್ಲಿ ನವೆಂಬರ್ 9ರಿಂದ ನವೆಂಬರ್ 30ರವರೆಗೆ ಎಲ್ಲಾ ರೀತಿಯ ಪಟಾಕಿಗಳಿಗೆ ನಿಷೇಧ ಹೇರಲಾಗಿದೆ. ಒಂದು ದಿನದ ಸಂತೋಷ ಸಾವಿರಾರು ಕುಟುಂಬವನ್ನು ಕತ್ತಲೆಗೆ ದೂಡಬಾರದು ಎಂದು ಕಾಳಜಿಯೊಂದಿಗೆ ಹಸಿರು ನ್ಯಾಯಾಧಿಕರಣ ಪಟಾಕಿಯನ್ನು ಸಿಡಿಸದಂತೆ ಸೂಚಿಸಿದೆ.

ಹಸಿರು ಪಟಾಕಿ ಎಂದರೇನು?: ಸರ್ಕಾರದ ಸ್ಪಷ್ಟನೆ ಇಲ್ಲಿದೆ

ದೀಪಾವಳಿ, ಕಾಳಿ ಪೂಜಾ, ಛತ್, ಕಾರ್ತಿಕ ಪೂಜಾ ಹೀಗೆ ಯಾವುದೇ ಹಬ್ಬಗಳಲ್ಲಿ ಪಟಾಕಿ ಸಿಡಿಸದಂತೆ ಸೂಚಿಸಲಾಗಿದೆ. ಒಂದೊಮ್ಮೆ ನಿಯಮವನ್ನು ಉಲ್ಲಂಘಿಸಿದರೆ ಆರು ತಿಂಗಳುಗಳ ಕಾಲ ಜೈಲುವಾಸ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಯಾವ್ಯಾವ ರಾಜ್ಯಗಳಲ್ಲಿ ಪಟಾಕಿ ನಿಷೇಧಿಸಲಾಗಿದೆ ಎನ್ನುವ ಮಾಹಿತಿ ಇಲ್ಲಿದೆ

ದೆಹಲಿ: ನವೆಂಬರ್ 9 ರಿಂದ 30ರವರೆಗೆ ಎಲ್ಲಾ ರೀತಿಯ ಪಟಾಕಿಗಳಿಗೆ ನಿಷೇಧ ಹೇರಲಾಗಿದೆ. ಒಂದೊಮ್ಮೆ ನಿಯಮವನ್ನು ಉಲ್ಲಂಘಿಸಿದರೆ ಯಾರೇ ಆಗಿರಲಿ ವಾಯು ಕಾಯ್ದೆ ಪ್ರಕಾರ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಸಚಿವ ಗೋಪಾಲ್ ರಾಯ್ ತಿಳಿಸಿದ್ದಾರೆ.

ಮಹಾರಾಷ್ಟ್ರ:ಮಹಾರಾಷ್ಟ್ರದಲ್ಲಿ ನವೆಂಬರ್ 5 ರಂದು ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಈ ಬಾರಿ ದೀಪಾವಳಿಯನ್ನು ಕೇವಲ ದೀಪಗಳನ್ನು ಬೆಳಗುವುದರ ಮೂಲಕ ಸರಳವಾಗಿ ಆಚರಿಸಿ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ. ದೀಪಾವಳಿಯಂದು ಸಾರ್ವಜನಿಕವಾಗಿ ಪಟಾಕಿ ಹೊಡೆಯುವುದನ್ನು ನಿಷೇಧಿಸಲಾಗಿದೆ.

ಒಡಿಶಾ: ವಾಯು ಮಾಲಿನ್ಯ ಹೆಚ್ಚಾಗುತ್ತಿರುವ ಕಾರಣ ಪಟಾಕಿ ಖರೀದಿ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ನವೆಂಬರ್ 10ರಿಂದ 30ರವರೆಗೆ ಪಟಾಕಿಗಳ ಮೇಲೆ ನಿಷೇಧ ಹೇರಲಾಗಿದೆ.

ಕರ್ನಾಟಕ: ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಹೊಡೆಯುವಂತೆ ಮನವಿ ಮಾಡಿದ್ದಾರೆ. ಹಾಗೂ ರಾಜ್ಯದಲ್ಲಿ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲಾಗುತ್ತದೆ.

ರಾಜಸ್ಥಾನ: ಆರೋಗ್ಯದ ಹಿತದೃಷ್ಟಿಯಿಂದ ಪಟಾಕಿ ಹೊಡೆಯುವುದರಿಂದ ಅನೇಕ ಉಸಿರಾಟದ ತೊಂದರೆಗಳಿಗೆ ಕಾರಣವಾಗುವ ಹಿನ್ನೆಲೆಯಲ್ಲಿ ನಿಷೇಧ ಹೇರಿದೆ.

ಚಂಡೀಗಢ: ಈಗಿನಿಂದಲೇ ಪಟಾಕಿಗಳನ್ನು ಸಿಡಿಸುವುದನ್ನು ನಿಷೇಧಿಸುವಂತೆ ಆದೇಶ ಹೊರಡಿಸಲಾಗಿದೆ.

ಸಿಕ್ಕಿಂ: ಸರ್ಕಾರವು ಪಟಾಕಿ ಸಿಡಿಸುವುದಕ್ಕೆ ನಿಷೇಧ ಹೇರಿದೆ. ಮುಂದಿನ ಆದೇಶದವರೆಗೂ ಇದು ಮುಂದುವರೆಯಲಿದೆ.

English summary
Several states and Union Territories have imposed a ban on firecrackers and its sale in the event of increased air pollution.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X