DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ : ಮಹತ್ವದ ಮಾಹಿತಿ ಕೊಟ್ಟ ಡಿ.ಕೆ.ಶಿವಕುಮಾರ್

ನವದೆಹಲಿ, ಜುಲೈ 09: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ. ಕುಡಿಯುವ ನೀರಿನ ಉದ್ದೇಶದ ಎತ್ತಿನಹೊಳೆ ಯೋಜನೆಗೆ ಶೇ.25 ರಷ್ಟು ಆರ್ಥಿಕ ಸಹಾಯ, ಕಳಸಾ ಬಂಡೂರಿ ಯೋಜನೆ, ಕೃಷ್ಣಾ ನದಿ ನೀರಿನ ವಿಚಾರವಾಗಿ ಕೇಂದ್ರ ಜಲಶಕ್ತಿ ಹಾಗೂ ಪರಿಸರ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಗಿದೆ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ನವದೆಹಲಿಯ ಕರ್ನಾಟಕ ಭನವದಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿಯನ್ನ ನೀಡಿದ್ದು, ಆರು ನೀರಾವರಿ ಯೋಜನೆಗಳಾದ ಸೊನ್ನತಿ ಏತ ನೀರಾವರಿ ಯೋಜನೆಗೆ ₹ 804.66 ಕೋಟಿ, ಯುಕೆಪಿಯ ಇಂಡಿ ಶಾಖಾ ಕಾಲುವೆಗೆ ₹2,666.70 ಕೋಟಿ, ಮಲಪ್ರಭಾ ಕಾಲುವೆ ಮೂರನೇ ಹಂತಕ್ಕೆ ₹3000 ಕೋಟಿ, ಘಟಪ್ರಭಾ ಬಲದಂಡೆ ಕಾಲುವೆ ಮತ್ತು ಚಿಕ್ಕೋಡಿ ಶಾಖಾ ನಾಲೆಗೆ ₹1,444.42 ಕೋಟಿ, ಬೆಣ್ಣೆಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನಿರ್ವಹಣೆಗಾಗಿ ₹1,610 ಕೋಟಿ ಸೇರಿದಂತೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ. ಇದರಲ್ಲಿ ಒಂದಕ್ಕೆ ಅನುದಾನ ನೀಡಲಾಗಿದೆ ಎಂಬ ಮಾಹಿತಿ ಬಂದಿದೆ. ಆದರೆ ನಮಗೆ ಇನ್ನು ಅಧಿಕೃತವಾಗಿ ತಿಳಿಸಿಲ್ಲ ಎಂದು ತಿಳಿಸಿದರು.

We have submitted a request to Center For Grants For Six Irrigation Projects In The State DK Shivakumar

ಎತ್ತಿನಹೊಳೆ ಯೋಜನೆಯನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಎಂದು ಅನುಮೋದಿಸಿ ಶೇ.25 ರಷ್ಟು ಆರ್ಥಿಕ ಸಹಾಯ ನೀಡಬೇಕಾಗಿ ಮನವಿ ಮಾಡಿದ್ದೇನೆ. ಈ ಯೋಜನೆ ಕಾಮಗಾರಿಯನ್ನು ತುಮಕೂರು ಹಾಗೂ ಹಾಸನ ಭಾಗದಲ್ಲಿ ನಿಲ್ಲಿಸಲಾಗಿತ್ತು. ಯೋಜನೆ ಹಾದು ಹೋಗುವ ಕಡೆ ಕಂದಾಯ ಭೂಮಿ ಹೊಂದಿದ್ದ ರೈತರಿಗೆ ಪೋಡಿ ವಿತರಣೆ ಮಾಡಿ ಪರಿಹಾರವನ್ನೂ ನೀಡಲಾಗಿತ್ತು ಎಂದು ಡಿ ಕೆ ಶಿವಕುಮಾರ್‌ ಅವರು ತಿಳಿಸಿದರು.

ಆದರೆ ತದ ನಂತರ ಅರಣ್ಯ ಇಲಾಖೆಯವರು ಇದು ನಮ್ಮ ಭೂಮಿ ಎಂದು ತಕರಾರು ತೆಗೆದರು. ಅವರ ಬಳಿ ಸಂಘರ್ಷ ಬೇಡ ಎಂದು ಬದಲಿ ಭೂಮಿ ನೀಡಿದ್ದೇವೆ. ಇದಕ್ಕೆ ಅರಣ್ಯ ಇಲಾಖೆಯವರು ಕ್ಲಿಯರೆನ್ಸ್ ಪ್ರಮಾಣ ಪತ್ರ ನೀಡಬೇಕಿತ್ತು, ಆದರೆ ಮಾಡಿಲ್ಲ. ಕೆಲವು ತಕರಾರುಗಳನು ಹಾಕಿದ್ದಾರೆ. ಈಗಾಗಲೇ ಕೇಂದ್ರ ಸಚಿವರನ್ನು ಮೂರು ಬಾರಿ ಭೇಟಿ ಮಾಡಲಾಗಿತ್ತು ಆದರೂ ಇದಕ್ಕೆ ಒಪ್ಪಿಗೆ ಸಿಕ್ಕಿಲ್ಲ. ಕಾಲುವೆ ತೆಗೆದಾಗ ಬರುವ ಮಣ್ಣನ್ನು ಇಲ್ಲಿಯೇ ಹಾಕಲಾಗುತ್ತಿದೆ. ಬದಲಾಗಿ 25 ಕಿಲೋ ಮೀಟರ್ ದೂರ ಹಾಕಿ ಎಂಬುದು ಅವರ ಪ್ರಮುಖ ತಕರಾರು. ಕೇಂದ್ರ ಸಚಿವರು ಸದ್ಯದಲ್ಲೇ ಇದನ್ನು ಬಗೆಹರಿಸುವುದಾಗಿ ತಿಳಿಸಿದ್ದಾರೆ ಎಂದರು.

ಖಾತೆಗೆ ಹಣ ಬರುವವರೆಗೂ ಖಾತರಿ ಇಲ್ಲ

ಭದ್ರಾ ಮೇಲ್ದಂಡೆ ವಿಚಾರವಾಗಿ ಮಾತನಾಡಿ, ಈ ಬಗ್ಗೆಯೂ ಅನುದಾನ ಕೇಳಿದ್ದೇವೆ. ಕೇಂದ್ರ ಸರ್ಕಾರದಿಂದ ಪರಿಷ್ಕೃತ ಅಂದಾಜು ಪಟ್ಟಿ ಕೇಳಿದ್ದರು ಅದನ್ನು ಕೂಡ ಸಲ್ಲಿಸಿದ್ದೇವೆ. ಈ ಹಿಂದೆ ಹೇಳಿದ್ದ ₹5,300 ಕೋಟಿಗಿಂತಲೂ ಹೆಚ್ಚು ಅನುದಾನದ ಪರಿಷ್ಕೃತ ಪಟ್ಟಿ ಕಳುಹಿಸಿದ್ದೇವೆ. ಈಗಾಗಲೇ ₹10,604 ಕೋಟಿ ಖರ್ಚು ಮಾಡಿದ್ದೇವೆ ಎಂದು ಹೇಳಿದ್ದೇವೆ. ಹಣ ನೀಡುತ್ತೇವೆ ಎಂದು ಹೇಳಿದ್ದಾರೆ. ಹಣ ಸರ್ಕಾರದ ಖಾತೆಗೆ ಬರುವವರೆಗೂ ನಂಬಿಕೆಯಿಲ್ಲ ಎಂದರು.

ಕಳೆದ ಎರಡು ವರ್ಷದಿಂದ ಅನುದಾನದ ಬಗ್ಗೆ ಹೇಳಿದ್ದನ್ನೇ ಕೇಂದ್ರ ಸರ್ಕಾರ ಹೇಳುತ್ತಿದೆ ಎಂದು ಕೇಳಿದಾಗ, "ಇದರ ಬಗ್ಗೆ ಕೇಂದ್ರ ಸರ್ಕಾರವನ್ನೇ ಕೇಳಬೇಕು. ಇದು ರಾಜಕೀಯವೇ? ಕೇಂದ್ರ ಸರ್ಕಾರದ ಬಳಿ ದುಡ್ಡಿಲ್ಲವೇ? ಎಂದು ಕೇಳಬೇಕು. ಯೋಜನೆಗೆ ಎಷ್ಟು ಖರ್ಚಾಗಿದೆ ಎಂದು ಮಾಹಿತಿ ಕೇಳಿದ್ದರು. ಅದನ್ನೂ ಸಹ ನೀಡಲಾಗಿದೆ. ಒಮ್ಮೆ ಮಾತ್ರ ಕ್ಯಾಬಿನೆಟ್ ಬಳಿ ಇದೆ ಎಂದು ಹೇಳಿದ್ದರು ಎಂದು ತಿಳಿಸಿದರು.

ನಮಗೆ ಸಹಕಾರ ನೀಡಿದರೆ ಗೋವಾದವರಿಗೂ ಸಹಕಾರ

ಗೋವಾದವರು ನಮ್ಮ ಭಾಗದಲ್ಲಿ ವಿದ್ಯುತ್ ಮಾರ್ಗ ಹಾಕಲು ನಾವು ತಕರಾರು ತೆಗೆದಿದ್ದೇವೆ ಎಂದು ಹೇಳಿದ್ದಾರೆ. ನೀವು ನಮಗೆ ಸಹಕಾರ ನೀಡುವುದಾದರೆ ನಾವು ನಿಮಗೆ ನೀಡುತ್ತೇವೆ ಎಂದು ಹೇಳಿದ್ದೇವೆ. ಒಂದು ವಾರದಲ್ಲಿ ಇದರ ಬಗ್ಗೆ ಕೇಂದ್ರ ಪರಿಸರ ಸಚಿವರು ಅಭಿಪ್ರಾಯ ತಿಳಿಸುವುದಾಗಿ ಹೇಳಿದ್ದಾರೆ. ಮುಂದಿನ ಸಂಸತ್ ಅಧಿವೇಶನ ನಡೆಯುವುದರ ಒಳಗಾಗಿ ಮತ್ತೆ ಭೇಟಿ ಮಾಡುತ್ತೇನೆ ಎಂದು ತಿಳಿಸಿದ್ದೇನೆ ಎಂದರು.

ಕಳಸಾ ಬಂಡೂರಿ ಕಾಮಗಾರಿ ಸಂಬಂಧವಾಗಿ ಬಿಜೆಪಿ ಸರ್ಕಾರವಿದ್ದ ವೇಳೆ ಕೆಲಸ ಮಾಡಬಹುದು ಎಂದು ಹೇಳಿದರು. ಈ ಪ್ರಕಾರವಾಗಿ ನಾವು ಟೆಂಡರ್ ಅನ್ನು ಕೂಡ ಕರೆಯಲಾಯಿತು. ಆದರೆ ಗೋವಾ ಸರ್ಕಾರ 09.01.2023 ರಲ್ಲಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಇದಕ್ಕೆ ನಮ್ಮ ಅಧಿಕಾರಿಗಳು ತಕ್ಷಣ ಉತ್ತರ ನೀಡಿ ʼನೀವು ಶೋಕಾಸ್ ನೋಟಿಸ್ ನೀಡಲು ಬರುವುದಿಲ್ಲʼ ಎಂದು ಹೇಳಿದ್ದಾರೆ. ಈ ವ್ಯಾಜ್ಯ ನ್ಯಾಯಾಲಯದಲ್ಲಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+