Maha Kumbh: ಮಹಾಕುಂಭದಲ್ಲಿ ಪುಣ್ಯಸ್ನಾನ ಮಾಡಿದ ಡಿ.ಕೆ ಶಿವಕುಮಾರ್
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭಾನುವಾರ ಮಹಾ ಕುಂಭಮೇಳದಲ್ಲಿ ಕುಟುಂಬ ಸಮೇತ ಪಾಲ್ಗೊಂಡು ಪುಣ್ಯ ಸ್ನಾನ ಮಾಡಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಕುಂಭ ಮೇಳದ ಬಗ್ಗೆ ನೀಡಿದ ಹೇಳಿಕೆಗೆ ಟೀಕೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ನಾಯಕರೇ ಕುಂಭ ಮೇಳದಲ್ಲಿ ಪಾಲ್ಗೊಂಡು ಭಕ್ತಿ ಪ್ರದರ್ಶನ ಮಾಡುತ್ತಿದ್ದಾರೆ.
ಮಹಾ ಕುಂಭ ಮೇಳದಲ್ಲಿ ಪಾಲ್ಗೊಂಡಿರುವ ಬಗ್ಗೆ ಡಿಕೆ ಶಿವಕುಮಾರ್ ಅವರೇ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪುಣ್ಯ ಸ್ನಾನದ ಫೋಟೊಗಳನ್ನು ಹಂಚಿಕೊಂಡಿದ್ದಾರೆ. "ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕುಟುಂಬ ಸಮೇತ ಪಾಲ್ಗೊಂಡು, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದೆ. 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿದ್ದು ನಿಜಕ್ಕೂ ಖುಷಿ ತಂದಿದೆ." ಎಂದು ತಮ್ಮ ಸಂತಸ ವ್ಯಕ್ತಪಡಿಸಿದ್ದಾರೆ.

ಡಿ.ಕೆ ಶಿವಕುಮಾರ್ ಪುತ್ರಿ ಭೇಟಿ
ಇದಕ್ಕೂ ಮುನ್ನ ಡಿ ಕೆ ಶಿವಕುಮಾರ್ ಮಗಳು ಕೂಡ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಪಾಲ್ಗೊಂಡಿದ್ದರು. ಮಹಾಕುಂಭಮೇಳದಲ್ಲಿ ಭಾಗವಹಿಸಿದ್ದ ವಿಡಿಯೋವನ್ನು ಅವರು ಹಂಚಿಕೊಂಡಿದ್ದಾರೆ. ಇದು ಸೋಷಿಯಲ್ ಮೀಡಿಯಾದಲ್ಲಿ ಗಮನ ಸೆಳೆದ ಬೆನ್ನಲ್ಲೇ ಡಿಕೆ ಶಿವಕುಮಾರ್ ಕೂಡ ಕುಟುಂಬದ ಜೊತೆ ಕುಂಭ ಮೇಳದಲ್ಲಿ ಭಾಗವಹಿಸಿರುವುದು ವಿಶೇಷವಾಗಿದೆ.
ಮಹಾ ಕುಂಭ ಮೇಳದಲ್ಲಿ ಸ್ನಾನ ಮಾಡಿ, ಪೂಜೆ ಮಾಡುವ ವಿಡಿಯೋ ಹಂಚಿಕೊಂಡಿರುವ ಡಿ.ಕೆ ಶಿವಕುಮಾರ್, ಭಕ್ತಿಯಿಂದ ಕರೆದರೆ ಬರುವ, ಭಕ್ತರ ಇಷ್ಟಾರ್ಥ ಈಡೇರಿಸುವ ಅವನೇ ನಮ್ಮ ಪರಶಿವ ಎಂದು ಹೇಳಿದ್ದಾರೆ.












Click it and Unblock the Notifications