CM Change: ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ; ಬಂಡೆಗೆ ಸುಲಭವಾಯ್ತಾ ಸಿಎಂ ಹಾದಿ: ಡಿ ಕೆ ಶಿವಕುಮಾರ್‌ ರಿಯಾಕ್ಷನ್‌

ನವದೆಹಲಿ, ಜುಲೈ 08: ಕಾಂಗ್ರೆಸ್‌ ಪಕ್ಷಕ್ಕೆ ಎರಡು ವರ್ಷ ತುಂಬಿದ ಬೆನ್ನಲ್ಲೇ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯ ಚೇಂಜ್‌ ಆಗ್ತಾರೆ ಡಿ ಕೆ ಶಿವಕುಮಾರ್‌ ಸಿಎಂ ಆಗ್ತಾರೆ ಎಂದು ಬಲವಾಗಿ ಕೇಳಿಬರ್ತಿದೆ. ಒಂದು ವೇಳೇ ಸಿದ್ದರಾಮಯ್ಯಯ ಐದು ವರ್ಷ ಸಿಎಂ ಎಂದು ಹೈಕಮಾಂಡ್‌ ಘೋಷಣೆ ಮಾಡಿದ್ರೆ ಡಿಕೆ ಶಿವಕುಮಾರ್ ಬಣ ಬಂಡಾಯ ಏಳುವ ಸಾಧ್ಯತೆ ಇದೆ.‌ ಹೀಗಾಗಿ ಹೈಕಮಾಂಡ್‌ ಜಾಣ ನಡೆ ಅನುಸರಿಸಿದೆ. ಕುರ್ಚಿಯಿಂದ ಕೆಳಗಿಳಿಯಲು ಒಪ್ಪದ ಸಿದ್ದರಾಮಯ್ಯರನ್ನು ದಿಲ್ಲಿ ರಾಜಕಾರಣಕ್ಕೆ ಕಳಿಸಲು ಮುಂದಾಗಿದೆ. ಸಿದ್ದರಾಮಯ್ಯ ಅವರನ್ನ ರಾಷ್ಟ್ರ ರಾಜಕಾರಣಕ್ಕೆ ಕಳುಹಿಸಿದರೆ ಡಿ ಕೆ ಶಿವಕುಮಾರ್‌ ಅವರ ಮುಖ್ಯಮಂತ್ರಿ ಹಾದಿ ಸುಲಭವಾಗಲಿದೆ ಎನ್ನುವ ಚರ್ಚೆ ಹುಟ್ಟಿಕೊಂಡಿದ್ದು, ಈ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ನವದೆಹಲಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿ ಕೆ ಶಿವಕುಮಾರ್‌, ಸಿದ್ದರಾಮಯ್ಯ ಅವರನ್ನು ಪಕ್ಷದ ಒಬಿಸಿ ಸಮಿತಿ ಅಧ್ಯಕ್ಷರ ಕುರಿತು ಚರ್ಚೆಯಾಗಿದೆ. ಪಕ್ಷ ಸಂಘಟನೆ ವಿಚಾರವಾಗಿ ಈ ಸಭೆ ನಡೆಯಲಿದೆ. ಇನ್ನು ರಾಷ್ಟ್ರ ಮಟ್ಟದ ಒಬಿಸಿ ನಾಯಕರ ಸಭೆಯು ಇದೇ ತಿಂಗಳು 15ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಕೆಪಿಸಿಸಿಯು ಈ ಸಭೆಯ ಆತಿಥ್ಯ ವಹಿಸಲಿದೆ. ನಮ್ಮ ರಾಜ್ಯದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಮುಖ್ಯಮಂತ್ರಿಗಳು ಈ ಸಭೆಯ ನೇತೃತ್ವ ವಹಿಸಲಿದ್ದಾರೆ. ಅವರು ಸಮಿತಿಯ ಮುಖ್ಯಸ್ಥರಲ್ಲದೇ ಇದ್ದರೂ, ದೇಶದ ಪ್ರಭಾವಿ ನಾಯಕರಾಗಿರುವ ಹಿನ್ನೆಲೆಯಲ್ಲಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಹಿಂದುಳಿದ ವರ್ಗಗಳ ಸಂಘಟನೆಯಲ್ಲಿ ಅವರ ಕೊಡುಗೆ ಪಕ್ಷಕ್ಕೆ ಅಪಾರವಾಗಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ಅವರ ನಾಯಕತ್ವ ಹಾಗೂ ಸಾಮರ್ಥ್ಯವನ್ನು ಬಳಸಿಕೊಳ್ಳುತ್ತಿದೆ ಎಂದರು.

DK Shivakumar Reaction on Siddaramaiah Entry Into National Politics

ದೆಹಲಿಯಲ್ಲಿ ರಾಜಕೀಯಕ್ಕೆ ಸಂಬಂಧಿಸಿದಂತೆ ಏನಾದರೂ ಸಭೆ ಮಾಡುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಇದೇ 10ರಂದು ನಾನು, ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸಭೆ ಮಾಡಲಿದ್ದು, ಪಕ್ಷದ ವಿಚಾರವಾಗಿ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು. ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರು, ಅವರ ನಾಯಕತ್ವವನ್ನು ಪಕ್ಷ ಬಳಸಿಕೊಳ್ಳುತ್ತಿದೆ. ಇದೇ 15ರಂದು ರಾಷ್ಟ್ರಮಟ್ಟದ ಹಿಂದುಳಿದ ವರ್ಗಗಳ ಸಮಿತಿ ಸಭೆಯು ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ನಡೆಯಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಮುಖ್ಯಮಂತ್ರಿ ಸ್ಥಾನಕ್ಕೆ ಶಾಸಕರು ನಿಮ್ಮನ್ನು ಬೆಂಬಲಿಸಿ ಮಾತನಾಡಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಸಧ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಹೀಗಾಗಿ ಈ ವಿಚಾರವಾಗಿ ಈಗ ಚರ್ಚೆ ಮಾಡಲು ಇದು ಸಮಯವಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್‌ ಅವರು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+