ನನ್ನ ಕೊಲೆಗೆ ಶಿವಕುಮಾರ್, ಸುರೇಶ್, ಕುಸುಮ ಸಂಚು ಎಂದ ಮುನಿರತ್ನ: ಕನಕಪುರ ಬಂಡೆ ಹೀಗೆ ಹೇಳಿದ್ಯಾಕೆ?

ದೆಹಲಿ, ಮಾರ್ಚ್‌ 20: ನನ್ನ ಕೊಲೆಗೆ ಶಿವಕುಮಾರ್, ಸುರೇಶ್, ಹನುಮಂತರಾಯಪ್ಪ, ಕುಸುಮ ಸಂಚು ಹೂಡಿದ್ದಾರೆ ಎನ್ನುವ ಶಾಸಕ ಮುನಿರತ್ನ ಆರೋಪ ಕೇಳಿ ಬಂದಿದ್ದು, ಈ ಕುರಿತು ನನಗೆ ರಕ್ಷಣೆ ಕೊಡಿ ಎಂದು ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ಅವರು ವಿಧಾನಸಭೆಯಲ್ಲಿ ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಮಂತ್ರಿಗಳಿಗೆ ಪತ್ರ ಬರೆದಿದ್ದಾನೆ ಎಂದು ಮುನಿರತ್ನ ಅವರು ತಿಳಿಸಿದ್ದಾರೆ. ಇದೀಗ ಈ ಕುರಿತು ಡಿ ಕೆ ಶಿವಕುಮಾರ್‌ ಅವರು ಪ್ರತಿಕ್ರಿಯಿಸಿದ್ದು, ದಿನಾ ಪೋಟೋ ಹಾಕಿಕೊಂಡು ನೋಡಿಕೊಳ್ಳಲು ಹೇಳಿ ಎಂದು ಕುಟುಕಿದರು.

ದೆಹಲಿಯಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಶಿವಕುಮಾರ್ ಉತ್ತರಿಸಿದ್ದು, ರಾಹುಲ್ ಗಾಂಧಿ ಅವರನ್ನು ಹಾಗೂ ಪಕ್ಷದ ಪ್ರಧಾ‌ನ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ನೂತನ ಕಾಂಗ್ರೆಸ್ ಭವನದ ಭೂಮಿ ಪೂಜೆಗೆ ಸಮಯ ನೀಡಿ ಎಂದು ಹೇಳಿದ್ದೇನೆ. 100 ಕಾಂಗ್ರೆಸ್ ಕಚೇರಿಗಳನ್ನು ಕಟ್ಟಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅವರು ಸಮಯ ನೀಡಿದಾಗ ಭೂಮಿಪೂಜೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

DK Shivakumar Reaction On The Murder Plot Against Munirathna

ರಾಜ್ಯದಲ್ಲಿ ಪಕ್ಷದ ಬೆಳವಣಿಗೆ ವಿಚಾರವಾಗಿ ಹೈಕಮಾಂಡ್ ಬಳಿ ಚರ್ಚೆ ನಡೆಸಿದ್ದೀರಾ ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆಸಬೇಕು ಎಂದು ಸೂಚನೆ ನೀಡಲಾಗಿದ್ದು, ವಿಧಾನಸಭೆ ಅಧಿವೇಶನ ಮುಗಿದ ನಂತರ ಎಲ್ಲಾ ಕ್ಷೇತ್ರಗಳಲ್ಲಿ ಸಭೆ ನಡೆಸಲಾಗುವುದು ಎಂದು ತಿಳಿಸಿದರು. ರಾಜ್ಯದ ಎಲ್ಲಾ ಬೆಳವಣಿಗೆಗಳು ಹೈಕಮಾಂಡಿನ ಗಮನದಲ್ಲಿವೆ. ಕಾರ್ಯಕರ್ತರ ಸಭೆ ವಿಚಾರವನ್ನು ತಿಳಿಸಲಾಗಿದೆ. ಸಭೆಯ ವರದಿಯನ್ನು ನೀಡಬೇಕು ಎಂದು ಸೂಚನೆ ನೀಡಿದ್ದಾರೆ ಎಂದರು.

ಅಧಿಕಾರ ಹಸ್ತಾಂತರ ವಿಚಾರವಾಗಿ ಚರ್ಚೆ ನಡೆಸಲಾಯಿತೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ರೀತಿಯ ಯಾವ ಸುದ್ದಿಯೂ ಇಲ್ಲ,‌ ಏನೂ ಇಲ್ಲ. ನಾವು ಇದರ ಬಗ್ಗೆ ಯಾವ ವಿಚಾರವನ್ನೂ ಮಾತನಾಡಲು ಹೋಗುವುದಿಲ್ಲ. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಿ ಎಂದಷ್ಟೇ ಹೈಕಮಾಂಡ್ ಹೇಳಿದೆ. ದೆಹಲಿಗೆ ಬಂದಾಗಲೆಲ್ಲಾ ಪಕ್ಷದ ದೇವಾಲಯ ಎಐಸಿಸಿ ಕಚೇರಿಗೆ ಭೇಟಿ ನೀಡುತ್ತೇನೆ ಎಂದು

ನಮಗೂ ಕಾನೂನು ಗೊತ್ತಿದೆ

ರಾಮನಗರ ಜಿಲ್ಲೆ ಹೆಸರು ಬದಲಾವಣೆಯನ್ನು ಕೆಂದ್ರ ತಿರಸ್ಕರಿಸಿರುವ ಬಗ್ಗೆ ಕೇಳಿದಾಗ, "ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ರಾಜ್ಯದ ವಿಚಾರ. ನಮಗೂ ಕಾನೂನು ಗೊತ್ತಿದೆ. ಇದನ್ನು ಹೇಗೆ ಜಾರಿಗೆ ತರಬೇಕು ಎಂಬುದು ನಮಗೆ ಗೊತ್ತಿದೆ ಎಂದು ಹೇಳಿದರು. ಇಲ್ಲಿ ಒಂದಷ್ಟು ಸಚಿವರು ಇದ್ದಾರಲ್ಲ ಅವರುಗಳು ಕೇಂದ್ರ ಗೃಹ ಸಚಿವರಿಗೆ ಹೇಳಿ ಹೆಸರು ಬದಲಾವಣೆ ಬೇಡ ಎಂದು ಬರೆಸಿದ್ದಾರೆ ಎಂದರು. ಈ ವೇಳೆ ಕುಮಾರಸ್ವಾಮಿ ಅವರೇ ಎಂದು ಮರು ಪ್ರಶ್ನಿಸಿದಾಗ 'ಇನ್ನ್ಯಾರು' ಎಂದು ಹೆಸರು ಹೇಳದೆ ಛೇಡಿಸಿದರು. ಈ ವಿಚಾರವಾಗಿ ಎಲ್ಲಾ ಇಲಾಖೆಗಳು ಧನಾತ್ಮಕವಾಗಿ ಸ್ಪಂದಿಸಿದ್ದವು. ಹಾಗೆ ನೋಡಿದರೆ ಇದರ ಅವಶ್ಯಕತೆಯೂ ಇಲ್ಲ ಎಂದರು.

DK Shivakumar Reaction On The Murder Plot Against Munirathna

ದ್ವೇಷದ ರಾಜಕಾರಣಕ್ಕೆ ಸಾಕ್ಷಿ

ನೀವು ಹೆಸರು ಬದಲಾವಣೆ ಮಾಡಿಕೊಳ್ಳುವಾಗ ಒಂದು ಅಫಿಡವಿಟ್ ಮಾಡಿಕೊಂಡು ಬದಲಾವಣೆ ಮಾಡಿಕೊಳ್ಳಬಹುದಂತೆ. ಇದು ರಾಜ್ಯದ ವಿಷಯ. ದ್ವೇಷದ ರಾಜಕಾರಣ ಹೇಗೆ ನಡೆಯುತ್ತಿದೆ ಹಾಗೂ ರಾಮನಗರ ಜನತೆಯ ಮೇಲೆ ನಡೆಸುತ್ತಿರುವ ಗದಾ‌ಪ್ರಹಾರಕ್ಕೆ ಇದೆಲ್ಲಾ ಸಾಕ್ಷಿ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ವ್ಯಂಗ್ಯವಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+