Manmohan Singh: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡದೆ ಇರುವುದು ತಪ್ಪು: ಡಿ ಕೆ ಶಿವಕುಮಾರ್
ನವದೆಹಲಿ, ಡಿಸೆಂಬರ್ 28: ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡುವಂತೆ ಮನವಿ ಮಾಡಿದ್ದಾರೆ. ಸ್ಮಾರಕ ನಿರ್ಮಾಣಕ್ಕೆ ಅವಕಾಶ ನೀಡದೆ ಇರುವುದು ಕೇಂದ್ರ ಸರ್ಕಾರದ ತಪ್ಪು ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.
ಈ ಕುರಿತು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ದೆಹಲಿಯಲ್ಲಿ ಶನಿವಾರ ಪುಷ್ಪಗುಚ್ಛ ಇರಿಸಿ, ಅಂತಿಮ ನಮನ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿ, ಸ್ಮಾರಕ ನಿರ್ಮಾಣಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ಕೇಳಿದ್ದರಲ್ಲಿ ತಪ್ಪಿಲ್ಲ. ಕೇಂದ್ರ ಸರ್ಕಾರ ಹೃದಯ ಶ್ರೀಮಂತಿಕೆಯನ್ನು ತೋರಿಸಬೇಕಾಗಿತ್ತು. ಒಳ್ಳೆಯ ಮನಸುಗಳು ಈ ಕೆಲಸಕ್ಕೆ ಹೃದಯ ಶ್ರೀಮಂತಿಕೆಯನ್ನು ತೋರಿಸಲಿ ಎಂದು ನಂಬಿದ್ದೇವೆ. ಈಗಲೂ ಕಾಂಗ್ರೆಸ್ ಪಕ್ಷದ ಬೇಡಿಕೆಗೆ ಮನ್ನಣೆ ದೊರೆಯುತ್ತದೆ ಎನ್ನುವ ವಿಶ್ವಾಸವಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.

ಇತಿಹಾಸ ನನ್ನನ್ನು ನೆನಪಿನಲ್ಲಿ ಇಟ್ಟುಕೊಳ್ಳುತ್ತದೆ ಎನ್ನುವ ಮನಮೋಹನ್ ಸಿಂಗ್ ಅವರ ಮಾತಿನ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನೀವು (ಮಾಧ್ಯಮದವರು), ವಿರೋಧ ಪಕ್ಷದವರು ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ ಎಂದು ಹೇಳುತ್ತಾ ಇದ್ದರು. ಅದು ಇಂದು ಆಗುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
ಜನಪರ ಕಾಯ್ದೆಗಳ ಮೂಲಕ ಭಾರತದ ಭವಿಷ್ಯವನ್ನು ಬದಲಾಯಿಸಿದವರು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್. ಅರಣ್ಯ ಭೂಮಿ ಹಕ್ಕು ಕಾಯ್ದೆ, ಆಹಾರ ಭದ್ರತಾ ಕಾಯ್ದೆ, ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ, ಶಿಕ್ಷಣದ ಹಕ್ಕು ಕಾಯ್ದೆಗಳು ಗ್ರಾಮೀಣ ಭಾಗದ ಜನರ ಏಳಿಗೆಗೆ ಕಾರಣವಾಯಿತು. ಮಾಹಿತಿ ಹಕ್ಕು ಸೇರಿದಂತೆ ಹಲವಾರು ಯೋಜನೆಗಳು ಆಡಳಿತದಲ್ಲಿ ಪಾರದರ್ಶಕತೆ ತಂದವು. ಆರೋಗ್ಯ ಕ್ಷೇತ್ರದಲ್ಲಿ ಆಶಾ ಕಾರ್ಯಕರ್ತರ ಯೋಜನೆ ಜಾರಿಗೆ ತಂದರು. ತಾವು ಜಾರಿಗೊಳಿಸಿದ ಅನೇಕ ಕಾಯ್ದೆಗಳ ಮೂಲಕ ಮನಮೋಹನ್ ಸಿಂಗ್ ಅವರು ಜನ ಸಾಮಾನ್ಯರ ನಡುವೆ ಇಂದಿಗೂ ಜೀವಂತವಾಗಿದ್ದಾರೆ. ಸಿಂಗ್ ಅವರು ಜನಸಾಮಾನ್ಯರ ಬದುಕಿನಲ್ಲಿ ಬದಲಾವಣೆ ತಂದವರು ಎಂದು ಹೇಳಿದರು.
ಭೂಸ್ವಾಧೀನವಾದ ನಂತರ ಅನೇಕ ರೈತರಿಗೆ ತಕ್ಕನಾದ ಪರಿಹಾರ ಸಿಗುತ್ತಿರಲಿಲ್ಲ. ರೈತರ ಭೂಮಿಗೆ ನ್ಯಾಯಯುತವಾದ ಪರಿಹಾರ ನೀಡಿದರು. ಸಮಾಜದ ಎಲ್ಲಾ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ಆಡಳಿತ ನಡೆಸಿದರು. ಮಾಧ್ಯಮಗಳು ಹಾಗೂ ವಿರೋಧ ಪಕ್ಷಗಳು ಮನಮೋಹನ್ ಸಿಂಗ್ ಅವರ ಕೆಲಸಗಳನ್ನು ಈಗ ನೆನಪಿಸಿಕೊಳ್ಳುತ್ತಿವೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.
ಸಂವಿಧಾನ ಹಾಗೂ ನಮ್ಮ ನೆಲದ ಕಾನೂನುಗಳನ್ನು ರಕ್ಷಣೆ ಮಾಡಿದವರು ಮನಮೋಹನ್ ಸಿಂಗ್. ಆರ್ಥಿಕ ಸಚಿವರಾಗಿದ್ದ ಕಾಲದಿಂದ ಇಲ್ಲಿಯತನಕ ಈ ದೇಶದ ಆರ್ಥಿಕತೆಯನ್ನು ಸುಭದ್ರವಾಗಿ ಇಡಲು ಶ್ರಮಿಸಿದರು. ಇದನ್ನು ವಿರೋಧ ಪಕ್ಷದವರು ಕೂಡ ಒಪ್ಪಿದ್ದಾರೆ. ಸೋನಿಯಾ ಗಾಂಧಿ ಅವರು ತಮಗೆ ದೊರೆತ ಪ್ರಧಾನಿಯಾಗುವ ಅವಕಾಶವನ್ನು ನಿರಾಕರಿಸಿ, ಈ ದೇಶಕ್ಕೆ ಉತ್ತಮ ಆರ್ಥಿಕ ತಜ್ಞನ ಅವಶ್ಯಕತೆಯಿದೆ ಎಂದು ಅಧಿಕಾರ ತ್ಯಾಗ ಮಾಡಿದರು. ನೆಹರು- ಗಾಂಧಿ ಕುಟುಂಬದ ತ್ಯಾಗವನ್ನು ಈ ದೇಶದ ಇತಿಹಾಸ ಮರೆಯುವುದಿಲ್ಲ ಎಂದು ತಿಳಿಸಿದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications