DMK - Congress: ಕಾಂಗ್ರೆಸ್ ಸಂಸದರ ಜೊತೆ ಕುಳಿತುಕೊಳ್ಳಲ್ಲ ಎಂದ ಡಿಎಂಕೆ, ಬಿಜೆಪಿಗೆ ದೂದ್ ಪೇಡಾ

DMK - Congress: ಭಾರತದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದೆ. ತಮಿಳುನಾಡು ವಿಧಾನಸಭೆ ಚುನಾವಣೆ ಹಾಗೂ ಪಶ್ವಿಮ ಬಂಗಾಳದ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಹಲವು ಮಹತ್ವದ ಬೆಳವಣಿಗೆಗಳು ನಡೆಯುತ್ತಿದೆ. ಇದರಲ್ಲಿ ಮುಖ್ಯವಾಗಿ ಇಂಡಿಯಾ ಮೈತ್ರಿಕೂಟದಲ್ಲಿ ಹಲವು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಇದೀಗ ಈ ರಾಜಕೀಯ ಬೆಳವಣಿಗೆಗಳ ನಡುವೆ ಇಂಡಿಯಾ ಮೈತ್ರಿಕೂಟದಲ್ಲಿ ಮಹಾ ಬಿರುಕು ಮೂಡಿದೆ.

ಇಂಡಿಯಾ ಮೈತ್ರಿಕೂಟದಲ್ಲಿ ಪ್ರಬಲ ಪಕ್ಷವಾಗಿ ತಮಿಳುನಾಡಿನ ಡಿಎಂಕೆ ಪಕ್ಷವು ಗುರುತಿಸಿಕೊಂಡಿದೆ. ತಮಿಳುನಾಡಿನ ಡಿಎಂಕೆ ಪಕ್ಷವು ಲೋಕಸಭೆಯಲ್ಲಿ 22 ಸ್ಥಾನಗಳನ್ನು ಹೊಂದಿದೆ. ರಾಜ್ಯಸಭೆಯಲ್ಲಿ 10 ಸ್ಥಾನಗಳನ್ನು ಹೊಂದಿದೆ. ಆದರೆ, ತಮಿಳುನಾಡಿನಲ್ಲಿ ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷವು ತಮಿಳುನಾಡಿನ ಟಿವಿಕೆ ಪಕ್ಷಕ್ಕೆ ಬೆಂಬಲ ನೀಡಿದೆ.

DMK Congress

ಈ ಬೆಳವಣಿಗೆಯನ್ನು ಬೆನ್ನಿಗೆ ಚೂರಿ ಹಾಕುವ ನಡೆ ಎಂದು ಡಿಎಂಕೆ ಹೇಳಿದೆ. ಇದರ ಬೆನ್ನಲ್ಲೇ ಡಿಎಂಕೆ ಸಂಸದೆ ಕನಿಮೋಳಿ ಕರುಣಾನಿಧಿ ಅವರು ಲೋಕಸಭೆ ಸ್ಪೀಕರ್ ಅವರಿಗೆ ಪತ್ರ ಬರೆದು ವಿಶೇಷ ಮನವಿ ಮಾಡಿದ್ದಾರೆ. ಈ ಬೆಳವಣಿಗೆಯು ತಮಿಳುನಾಡಿನಲ್ಲಿ ಸಂಚಲನ ಮೂಡಿಸಿದ್ದರೆ, ದೇಶದಲ್ಲಿ ಬಿಜೆಪಿ ಪಕ್ಷಕ್ಕೆ ಲಾಭ ತಂದು ಕೊಡುವ ಸನ್ನಿವೇಶವನ್ನು ನಿರ್ಮಾಣ ಮಾಡಿದೆ. ತಮಿಳುನಾಡಿನ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ಪಕ್ಷವು ಏಕಾಏಕಿ ಚುನಾವಣೆ ಫಲಿತಾಂಶದ ನಂತರ ಟಿವಿಕೆಗೆ ಬೆಂಬಲ ನೀಡಿದೆ.

Vijay: ಎಂಜಿಆರ್‌ ದಾಖಲೆ ಸರಿಗಟ್ಟಿದ ದಳಪತಿ ವಿಜಯ್: ಜೆನ್‌ಜೀ ಅಬ್ಬರಕ್ಕೆ ಹಳೆ ಪಕ್ಷಗಳು ಉಡೀಸ್..!
Vijay: ಎಂಜಿಆರ್‌ ದಾಖಲೆ ಸರಿಗಟ್ಟಿದ ದಳಪತಿ ವಿಜಯ್: ಜೆನ್‌ಜೀ ಅಬ್ಬರಕ್ಕೆ ಹಳೆ ಪಕ್ಷಗಳು ಉಡೀಸ್..!

ಇದೀಗ ಲೋಕಸಭೆ ಸ್ಪೀಕರ್ ಅವರಿಗೆ ಪತ್ರ ಬರೆದಿರುವ ಡಿಎಂಕೆ ಪಕ್ಷದ ಸಂಸದೆ ಕನಿಮೋಳಿ ಕರುಣಾನಿಧಿ ಅವರು, ಲೋಕಸಭೆಯಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷಕ್ಕೆ ಸೇರಿದ ಸಂಸತ್ ಸದಸ್ಯರ ಆಸನ ವ್ಯವಸ್ಥೆಯಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡುವುದಕ್ಕೆ ಸಂಬಂಧಿಸಿದಂತೆ ನಾನು ಈ ಪತ್ರ ಬರೆಯುತ್ತಿದ್ದೇನೆ.

ಬದಲಾದ ರಾಜಕೀಯ ಪರಿಸ್ಥಿತಿ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನೊಂದಿಗಿನ ನಮ್ಮ ಮೈತ್ರಿ ಕೊನೆಗೊಂಡಿರುವುದರಿಂದ, ನಮ್ಮ ಸದಸ್ಯರು ಸದನದಲ್ಲಿ ಅವರ ಪಕ್ಕದಲ್ಲಿ ಪ್ರಸ್ತುತ ಆಸನ ವ್ಯವಸ್ಥೆಯನ್ನು ಮುಂದುವರಿಸುವುದು ಸೂಕ್ತವಲ್ಲದಿರಬಹುದು.

ಆದ್ದರಿಂದ, ಡಿಎಂಕೆ ಸಂಸದೀಯ ಪಕ್ಷದ ಗೌರವಾನ್ವಿತ ಸದಸ್ಯರಿಗೆ ಆಗಸ್ಟ್‌ ತಿಂಗಳಿನಲ್ಲಿ ನಡೆಯುವ ಲೋಕಸಭೆ ಅಧಿವೇಶನದ ಸಂದರ್ಭದಲ್ಲಿ ತಮ್ಮ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಅನುವು ಮಾಡಿಕೊಡಲು ಪ್ರತ್ಯೇಕ ಆಸನಗಳನ್ನು ಹಂಚಿಕೆ ಮಾಡಲು ಅಗತ್ಯವಾದ ವ್ಯವಸ್ಥೆ ಮಾಡಬೇಕೆಂದು ನಾನು ನಿಮ್ಮಲ್ಲಿ ವಿನಂತಿಸುತ್ತೇನೆ. ಈ ನಿಟ್ಟಿನಲ್ಲಿ ತಾವು ಈ ಮನವಿಯನ್ನು ಪರಿಗಣಿಸಿಬೇಕು ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

Trisha: ವಿಜಯ್ ರಾಜೀನಾಮೆ ನೀಡುವ ಕ್ಷೇತ್ರದಿಂದ ನಟಿ ತ್ರಿಷಾ ಸ್ಪರ್ಧೆಗೆ ಒಲವು, ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ
Trisha: ವಿಜಯ್ ರಾಜೀನಾಮೆ ನೀಡುವ ಕ್ಷೇತ್ರದಿಂದ ನಟಿ ತ್ರಿಷಾ ಸ್ಪರ್ಧೆಗೆ ಒಲವು, ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ

ಇಂಡಿಯಾ ಮೈತ್ರಿಕೂಟ ಮುಗಿದ ಅಧ್ಯಾಯನ

ದೇಶದಲ್ಲಿ ರಾಜಕೀಯವಾಗಿ ಬಿಜೆಪಿಯ ನಾಗಾಲೋಟ ಮುಂದುವರಿದಿದೆ. ಈ ಹಿಂದೆ ಒಮ್ಮೆಯೂ ಅಧಿಕಾರಕ್ಕೆ ಬರದ ರಾಜ್ಯಗಳಲ್ಲೂ ಬಿಜೆಪಿ ಪಕ್ಷವು ಆಡಳಿತಕ್ಕೆ ಬರುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಒಡಿಶಾ ಹಾಗೂ ಈಚೆಗೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ.

ದೇಶದಲ್ಲಿ ಬಿಜೆಪಿಗೆ ಪ್ರಬಲ ಪೈಪೋಟಿ ನೀಡುವುದಕ್ಕೆ ಇಂಡಿಯಾ ಮೈತ್ರಿಕೂಟ ರಚನೆಯಾಗಿತ್ತು. ಆದರೆ ಇದೀಗ ಇಂಡಿಯಾ ಮೈತ್ರಿಕೂಟದ ಹಲವು ಪಕ್ಷಗಳು ಸೋತಿವೆ. ಇದರ ನಡುವೆ ಇಂಡಿಯಾ ಮೈತ್ರಿಕೂಟ ಎನ್ನುವುದು ಮುಗಿದ ಅಧ್ಯಾಯನ ಎಂದು ಡಿಎಂಕೆ ಹೇಳಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಬಿಜೆಪಿ ಹಾದಿಯು ಇನ್ನಷ್ಟು ಸುಗವಾಗಲಿದೆ ಎಂದೇ ಹೇಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+