Stand With Wayanad: ವಯನಾಡ್ ನಿರಾಶ್ರಿತರಿಗೆ ಸಹಾಯ ಮಾಡಲು ಬಯಸುವಿರಾ? ಹೀಗೆ ಮಾಡಿ...
ವಯನಾಡ್ ಆಗಸ್ಟ್ 1:- ಕೇರಳದ ವಯನಾಡ್‌ನಲ್ಲಿ ಭೀಕರ ಭೂಕುಸಿತ ಸಂಭವಿಸಿದ ಬೆನ್ನಲ್ಲೆ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ದುರಂತದಲ್ಲಿ ಮನೆಗಳು ಹಾಗೂ ಕುಟುಂಬಸ್ಥರನ್ನು ಕಳೆದುಕೊಂಡು ಅದೆಷ್ಟೋ ಜನ ಬೀದಿಪಾಲಾಗಿದ್ದಾರೆ. ಈ ನೊಂದ ಜೀವಗಳಿಗೆ ಸಹಾಯ ಮಾಡುವ ಇಚ್ಚೆ ನಿಮಗಿದ್ದರೆ ನಿಮ್ಮ ಕೈಲಾದಷ್ಟು ದೇಣಿಗೆ ನೀಡಬಹುದು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮನವಿ ಮಾಡಿದ್ದಾರೆ.
ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ಇದುವರೆಗೆ ಸುಮಾರು 280 ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳ ಸಂತ್ರಸ್ತರಿಗೆ ಸಹಾಯ ಮಾಡಲು ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ವಯನಾಡ್ ಸಂತ್ರಸ್ತರಿಗೆ ಸಹಾಯ ಮಾಡಲು ಇಚ್ಚಿಸುವವರು ದೇಣಿಗೆ ನೀಡುವಂತೆ ಸಿಎಂ ಮನವಿ ಮಾಡಿದ್ದಾರೆ.

ಇದಲ್ಲದೆ ತಮ್ಮ ಸಚಿವ ಸಂಪುಟವು ತಮ್ಮ ಒಂದು ತಿಂಗಳ ವೇತನವನ್ನು ಪರಿಹಾರ ನಿಧಿಗೆ ನೀಡುವುದಾಗಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ವಯನಾಡ್‌ನಲ್ಲಿ ಸಂಭವಿಸಿದ ಭಯಾನಕ ಭೂಕುಸಿತಕ್ಕೆ ನೂರಾರು ಮನೆಗಳು ಮಣ್ಣಲ್ಲಿ ಮಣ್ಣಾಗಿ ಹೋಗಿವೆ. ಅದೆಷ್ಟೋ ಜನ ಕೆಸರಿನಲ್ಲಿ ಮುಚ್ಚಿ ಹೋಗಿದ್ದಾರೆ. ನೂರಾರು ಜನರ ಪ್ರಾಣದೊಂದಿಗೆ ಸಾಕಷ್ಟು ಆಸ್ತಿಪಾಸ್ತಿ ಹಾನಿಗೊಳಗಾಗಿದೆ.
ಬದುಕುಳಿದವರನ್ನು ಸ್ಥಳಾಂತರಿಸಿ ಆಶ್ರಯ ನೀಡಲಾಗಿದೆ. ಅವರಿಗೆ ಸದ್ಯ ತುರ್ತು ಸಹಾಯದ ಅಗತ್ಯವಿದೆ. ಹೀಗಾಗಿ ಜನ ಮಾನವೀಯತೆ ದೃಷ್ಟಿಯಿಂದ ಸಹಾಯಕ್ಕೆ ಬರಬೇಕೆಂದು ಸಿಎಂ ಮನವಿ ಮಾಡಿದ್ದಾರೆ.
ನಿಧಿಗೆ ಪ್ರಮುಖ ಕೊಡುಗೆ ನೀಡಿದವರಲ್ಲಿ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ, ಲುಲು ಗ್ರೂಪ್ ಅಧ್ಯಕ್ಷ ಎಂಕೆ ಯೂಸುಫ್ ಅಲಿ, ದುಬೈ ಮೂಲದ ಉದ್ಯಮಿ ರವಿ ಪಿಳ್ಳೈ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ತಮಿಳು ನಟ ವಿಕ್ರಮ್ ಮತ್ತು ದಲೈ ಲಾಮಾ ಟ್ರಸ್ಟ್ ಸೇರಿದ್ದಾರೆ.

ತಮ್ಮ ಮನವಿಯಲ್ಲಿ ಸಿಎಂ ಹೇಳಿದ್ದು ಹೀಗೆ.....
"ಜುಲೈ 30 ರಂದು ಮುಂಡಕ್ಕೈ, ವಯನಾಡ್ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ 100ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ. ಅನೇಕರಿಗೆ ಗಾಯಗಳಾಗಿವೆ. ಹಲವಾರು ಜನ ನಾಪತ್ತೆಯಾಗಿದ್ದಾರೆ. ಜನರ ವಾಸಸ್ಥಾನಗಳು ನಾಶವಾಗಿವೆ. ಭೂಕುಸಿತ ಮತ್ತು ಹಠಾತ್ ಪ್ರವಾಹಗಳಿಂದಾಗಿ ಜನ ಮನೆ ಹಾಗೂ ಕುಟುಂಬಸ್ಥರನ್ನು ಕಳೆದುಕೊಂಡು ಬೀದಿಪಾಲಾಗಿದ್ದಾರೆ. ಈಗ ಕೇರಳ ಸರ್ಕಾರ ನಿರಾಶ್ರಿತರ ಸಹಾಯಕ್ಕೆ ನಿಲ್ಲಬೇಕಾಗಿದೆ. ಅವರ ಜೀವಹಾನಿ ಮತ್ತು ಜೀವನೋಪಾಯವನ್ನು ಸರಿದೂಗಿಸಲು, ಸ್ಥಳಾಂತರಗೊಂಡವರಿಗೆ ಪುನರ್ವಸತಿ ಕಲ್ಪಿಸಲು ಮತ್ತು ಅವರ ಮನೆಗಳನ್ನು ಪುನರ್ನಿರ್ಮಿಸುವ ಪ್ರಯತ್ನಗಳು ಅತ್ಯಗತ್ಯ. ಇದರಿಂದಾಗಿ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಗೆ (CMDRF) ಉದಾರವಾಗಿ ಕೊಡುಗೆ ನೀಡುವ ಮೂಲಕ ನೈಸರ್ಗಿಕ ವಿಕೋಪಗಳಿಂದ ಹಾನಿಗೊಳಗಾದವರ ಚೇತರಿಕೆಗೆ ನೀವು ಬೆಂಬಲ ನೀಡಬಹುದು'' ಎಂದು ಸಿಎಂ ಮನವಿ ಮಾಡಿದ್ದಾರೆ.
ಸಾರ್ವಜನಿಕರು ಹೇಗೆ ಸಹಾಯ ಮಾಡಬಹುದು?
ಈ ಹಂತಗಳನ್ನು ಅನುಸರಿಸುವ ಮೂಲಕ ನೆಟಿಜನ್‌ಗಳು ಆನ್‌ಲೈನ್‌ನಲ್ಲಿ ವಯನಾಡ್ ಸಂತ್ರಸ್ತರಿಗೆ ಸಹಾಯ ಮಾಡಬಹುದು:
*https://donation.cmdrf.kerala.gov.in/ ಗೆ ಭೇಟಿ ನೀಡಿ.
*ಎರಡು ಆಯ್ಕೆಗಳಲ್ಲಿ ಒಂದನ್ನು ಆರಿಸಿ: "ವೈಯಕ್ತಿಕವಾಗಿ ದಾನ ಮಾಡಿ" ಅಥವಾ "ಗುಂಪಾಗಿ ದಾನ ಮಾಡಿ."
*ನಿಮ್ಮ ಆದ್ಯತೆಯ ಪಾವತಿ ವಿಧಾನವನ್ನು ಆಯ್ಕೆಮಾಡಿ (internet banking, debit card, UPI, etc.)
*ದೇಣಿಗೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಫಾರ್ಮ್ ಅನ್ನು ಭರ್ತಿ ಮಾಡಿ.
*ಮೊಬೈಲ್ ಫೋನ್‌ಗಳಿಂದ ಹಣದ ಸಹಾಯವನ್ನು ಫೇನ್‌ಪೇ ಮಾಡುವ ಮೂಲಕವೂ ಮಾಡಬಹುದು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications