T20 World Cup 2024: ರೋಹಿತ್ ಶರ್ಮಾ ನಾಯಕತ್ವದ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು ಗೊತ್ತಾ?
T20 World Cup 2024: ನಿನ್ನೆ ನಡೆದ ಟಿ-20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡ ಗೆದ್ದು ಬೀಗಿದೆ. ಇನ್ನು ಈ ಐತಿಹಾಸಿಕ ಟಿ20 ವಿಶ್ವಕಪ್ ಗೆಲುವು ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಇಂದು ಭಾರತೀಯ ಕ್ರಿಕೆಟ್ ತಂಡಕ್ಕೆ ಕರೆ ಮಾಡಿ ಆಟಗಾರರನ್ನು ಅಭಿನಂದಿಸಿದ್ದಾರೆ. ಅಲ್ಲದೇ, ಇದೇ ವೇಳೆ ರೋಹಿತ್ ಶರ್ಮಾ ನಾಯಕತ್ವದ ಬಗ್ಗೆ ಏನು ಹೇಳಿದ್ದಾರೆ ಗೊತ್ತಾ? ಇಲ್ಲಿದೆ ನೋಡಿ ಮಾಹಿತಿ.
ರೋಹಿತ್ ಶರ್ಮಾ ಅವರ ಅದ್ಭುತ ನಾಯಕತ್ವದ ಬಗ್ಗೆ ಮತ್ತು ಅಂತಿಮ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ಬ್ಯಾಟಿಂಗ್ ಪ್ರದರ್ಶನವನ್ನು ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದರು.

ಇನ್ನು ಟಿ-20 ವಿಶ್ವಕಪ್ ಗೆದ್ದ ಬಳಿಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಟಿ-20 ಪಂದ್ಯಗಳಿಗೆ ನಿವೃತ್ತಿ ಘೋಷಿಸಿದರು. ವಿಜಯೋತ್ಸವದ ಕೆಲವೇ ನಿಮಿಷಗಳಲ್ಲಿ ಕೊಹ್ಲಿ ನಿವೃತ್ತಿ ಘೋಷಿಸಿದರೆ, ಇನ್ನು ನಾಯಕ ರೋಹಿತ್ ಶರ್ಮಾ ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಅಧಿಕೃತವಾಗಿ ನಿವೃತ್ತಿ ಘೋಷಿಸಿದರು.
ಹಾರ್ದಿಕ್ ಪಾಂಡ್ಯ ಅವರ ಅಂತಿಮ ಓವರ್‌ನಲ್ಲಿ ಸೂರ್ಯಕುಮಾರ್ ಯಾದವ್ ಅವರು ಡೇವಿಡ್ ಮಿಲ್ಲರ್ ಅವರನ್ನು ಔಟ್ ಮಾಡಲು ಬೌಂಡರಿ ಲೈನ್‌ನಲ್ಲಿ ಅದ್ಭುತ ಕ್ಯಾಚ್ ಹಿಡಿದಿದ್ದು, ಇದನ್ನು ಕೂಡ ಪ್ರಧಾನಿ ಮೋದಿ ಶ್ಲಾಘಿಸಿದರು. ಮತ್ತೊಂದೆಡೆ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಎರಡೂವರೆ ವರ್ಷಗಳ ಅವಧಿ ಮುಕ್ತಾಯವಾದ ಹಿನ್ನೆಲೆ ರಾಹುಲ್ ದ್ರಾವಿಡ್ ಅವರು ಭಾರತೀಯ ಕ್ರಿಕೆಟ್‌ಗೆ ಉತ್ತಮ ಕೊಡುಗೆ ನೀಡಿದ್ದಾರೆ ಎಂದು ಹೇಳಿ ಧನ್ಯವಾದ ಅರ್ಪಿಸಿದರು.
ವಿಡಿಯೋ ಸಂದೇಶವೊಂದರಲ್ಲಿ ಪ್ರಧಾನಿ ಮೋದಿ ಅವರು, ಭಾರತ ಕ್ರಿಕೆಟ್ ತಂಡವು ವಿಶ್ವಕಪ್ ಗೆದ್ದುಕೊಂಡಿದ್ದು, ಈ ಮೂಲಕ ಕೋಟ್ಯಂತರ ಭಾರತೀಯರ ಹೃದಯಗಳನ್ನು ಗೆದ್ದಿದೆ ಎಂದು ಹೇಳಿದ್ದರು. ಅಲ್ಲದೆ, ಒಂದೇ ಒಂದು ಪಂದ್ಯವನ್ನು ಸೋಲದಿರುವುದು ಸಣ್ಣ ಸಾಧನೆಯಲ್ಲ ಎಂದರು.
ನಮ್ಮ ಭಾರತ ತಂಡ 11 ವರ್ಷಗಳ ನಂತರ ಐಸಿಸಿ ಟ್ರೋಫಿಯನ್ನು ಮನೆಗೆ ತಂದಿತು ಮತ್ತು 2011ರ ನಂತರ ಭಾರತದ ಮೊದಲ ವಿಶ್ವಕಪ್ ಗೆಲುವಾಗಿದೆ. ಟಿ20 ಕಪ್ ಅನ್ನು ತಮ್ಮದೇ ಶೈಲಿಯಲ್ಲಿ ಮನೆಗೆ ತಂದಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ತಂಡವನ್ನು ಜೂನ್ 29ರ ಮಧ್ಯರಾತ್ರಿಯೇ ಅಭಿನಂದಿಸಿದರು.












Click it and Unblock the Notifications