Droupadi Murmu: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣದಲ್ಲಿ ಪ್ರಸ್ತಾಪಿಸಿದ ಪ್ರಮುಖಾಂಶಗಳೇನು ಗೊತ್ತಾ?
Droupadi Murmu: ಭಾರತದ 78ನೇ ಸ್ವಾತಂತ್ರ್ಯ ದಿನಾಚರಣೆಗೆ ಕ್ಷಣಗಣೆ ಬಾಕಿಯಿದ್ದು, ಇದಕ್ಕೂ ಒಂದು ದಿನ ಮುಂಚೆ ಅಂದರೆ (ಆಗಸ್ಟ್ 14) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಹಾಗಾದರೆ ಅವರು ಏನೆಲ್ಲಾ ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
2024ರ ಅಂದರೆ 78ನೇ ಸ್ವಾತಂತ್ರ್ಯ ದಿನಾಚರಣೆಗಾಗಿ ಇಡೀ ದೇಶವೇ ಕಾತದರಿಂದ ಕಾಯುತ್ತಿದೆ. ಇದಕ್ಕೂ ಮುಂಚೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೆಲವು ಹಿತನುಡಿಗಳನ್ನು ಹೇಳಿದ್ದಾರೆ. "ನಾವು ನಮ್ಮ ರಾಜಕೀಯ ಪ್ರಜಾಪ್ರಭುತ್ವವನ್ನು ಸಾಮಾಜಿಕ ಪ್ರಜಾಪ್ರಭುತ್ವವನ್ನಾಗಿ ಮಾಡಬೇಕು. ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯಲ್ಲಿ ಇಲ್ಲದ ಹೊರತು ರಾಜಕೀಯ ಪ್ರಜಾಪ್ರಭುತ್ವ ಹೆಚ್ಚು ಕಾಲ ಉಳಿಯುವುದಿಲ್ಲ," ಎಂದು ಹೇಳಿದರು.

ಈ ಬಾರಿ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ನಮ್ಮ ದೇಶದ ಸಾಧನೆ ಮತ್ತು ಟಿ-20 ವಿಶ್ವಕಪ್‌ನಲ್ಲಿ ಭಾರತೀಯ ಕ್ರಿಕೆಟ್ ತಂಡದ ಐತಿಹಾಸಿಕ ಗೆಲುವನ್ನು ರಾಷ್ಟ್ರಪತಿ ಮುರ್ಮು ಅವರು ಶ್ಲಾಘನೆ ಮಾಡಿದ್ದಾರೆ. ಇನ್ನು ಮುಂದಿನ ವರ್ಷ ಗಗನ್‌ಯಾನ್ ಮಿಷನ್‌ನ ಉಡಾವಣೆಗಾಗಿ ನಾನು ಕುತೂಹಲದಿಂದ ಕಾಯುತ್ತಿದ್ದೇನೆ ಎಂದು ಹೇಳಿದರು.
"ನಾವು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನವನ್ನು "ಜನಜಾತೀಯ ಗೌರವ ದಿವಸ್" ಎಂದು ಆಚರಿಸಲಾರಂಭಿಸಿದ್ದೇವೆ. ಮುಂದಿನ ವರ್ಷ ಅವರ 150ನೇ ಜಯಂತಿ ಆಚರಣೆ ನಡೆಯಲಿದ್ದು, ರಾಷ್ಟ್ರೀಯ ಪುನರುಜ್ಜೀವನಕ್ಕೆ ಅವರ ಕೊಡುಗೆಯನ್ನು ಇನ್ನಷ್ಟು ಗೌರವಿಸುವ ಅವಕಾಶ ಇದು ಎಂದರು.
"ಇಂದು (ಆಗಸ್ಟ್ 14), ದೇಶವು ವಿಭಜನೆಯ ಭೀಕರತೆಯನ್ನು ನೆನಪಿಸುವ ದಿನವಾದ "ವಿಭಜನ್ ವಿಭಿಷಿಕಾ ಸ್ಮೃತಿ ದಿವಸ್" ಅನ್ನು ಆಚರಣೆ ಮಾಡಲಾಗುತ್ತಿದೆ. ನಮ್ಮ ದೇಶ ವಿಭಜನೆಯಾಗಿ, ಲಕ್ಷಾಂತರ ಜನರು ಬಲವಂತದ ವಲಸೆಯನ್ನು ಅನುಭವಿಸಬೇಕಾಯಿತು. ಲಕ್ಷಾಂತರ ಜನರು ಪ್ರಾಣ ಕಳೆದುಕೊಂಡರು. ನಾವು ಸ್ವಾತಂತ್ರ್ಯ ದಿನವನ್ನು ಆಚರಿಸುವ ಒಂದು ದಿನದ ಮೊದಲು, ನಾವು ಆ ಮಾನವ ದುರಂತವನ್ನು ನೆನಪಿಸಿಕೊಳ್ಳುತ್ತೇವೆ. ಸಂತ್ರಸ್ತ ಕುಟುಂಬದವರೊಂದಿಗೆ ಇರುತ್ತೇವೆ," ಎಂದರು.
"ನಾವು ಸಂವಿಧಾನವನ್ನು ಅಂಗೀಕರಿಸಿದ 75ನೇ ವರ್ಷವನ್ನು ಆಚರಿಸುತ್ತಿದ್ದೇವೆ. ಹೊಸದಾಗಿ ಸ್ವತಂತ್ರ ರಾಷ್ಟ್ರದ ಪ್ರಯಾಣಕ್ಕೆ ಅಡೆತಡೆಗಳು ಇಲ್ಲ. ನ್ಯಾಯ, ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಸಾಂವಿಧಾನಿಕ ಆದರ್ಶಗಳಲ್ಲಿ ದೃಢವಾಗಿ ಉಳಿದಿರುವ ನಾವು, ಜಾಗತಿಕ ವೇದಿಕೆಯಲ್ಲಿ ಸ್ಥಾನ ಭಾರತವು ತನ್ನ ಹಕ್ಕುಗಳನ್ನು ಮತ್ತೆ ಪಡೆಯಲು ಅನುವು ಮಾಡಿಕೊಡುವ ಉದ್ದೇಶವನ್ನು ಹೊಂದಿದ್ದೇವೆ," ಎಂದರು.
"ನಮ್ಮ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಾತುಗಳನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು. ನಾವು ನಮ್ಮ ರಾಜಕೀಯ ಪ್ರಜಾಪ್ರಭುತ್ವವನ್ನು ಸಾಮಾಜಿಕ ಪ್ರಜಾಪ್ರಭುತ್ವವನ್ನಾಗಿ ಮಾಡಬೇಕು. ರಾಜಕೀಯ ಪ್ರಜಾಪ್ರಭುತ್ವವು ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯಲ್ಲಿ ಇರದ ಹೊರತು ಅದು ಉಳಿಯುವುದಿಲ್ಲ ಎಂಬುದನ್ನು ಅವರು ಸರಿಯಾಗಿಯೇ ಹೇಳಿದ್ದಾರೆ. ರಾಜಕೀಯ ಪ್ರಜಾಪ್ರಭುತ್ವದ ಸ್ಥಿರ ಪ್ರಗತಿಯು ಸಾಮಾಜಿಕ ಪ್ರಜಾಪ್ರಭುತ್ವದ ಬಲವರ್ಧನೆಯ ಕಡೆ ಮಾಡಿದ ಪ್ರಗತಿಗೆ ಸಾಕ್ಷಿಯಾಗಿದೆ," ಎಂದರು.
"ಈ ಬಾರಿ ನಮ್ಮ ದೇಶದಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆದಾಗ ಅರ್ಹ ಮತದಾರರ ಸಂಖ್ಯೆ ಸುಮಾರು 97 ಕೋಟಿಯಷ್ಟಿತ್ತು. ಇದೊಂದು ಐತಿಹಾಸಿಕ ದಾಖಲೆಯಾಗಿದೆ. ಮನುಕುಲ ಇದುವರೆಗೆ ಕಂಡಿರುವ ಅತಿದೊಡ್ಡ ಚುನಾವಣಾ ಪ್ರಕ್ರಿಯೆ ಇದಾಗಿದೆ. ಇಂತಹ ದೊಡ್ಡ ಪ್ರಮಾಣದ ಪ್ರಕ್ರಿಯೆಯನ್ನು ಸುಗಮವಾಗಿ ಮತ್ತು ದೋಷರಹಿತವಾಗಿ ನಡೆಸಿದ್ದಕ್ಕಾಗಿ ಭಾರತದ ಚುನಾವಣಾ ಆಯೋಗವನ್ನು," ಅಭಿನಂದಿಸಬೇಕು ಎಂದರು.
ಇನ್ನು "2021ರಿಂದ 2024ರ ವರೆಗೆ, ಭಾರತವು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಗಳಲ್ಲಿ ಒಂದಾಗಿದೆ. ವಾರ್ಷಿಕ ಸರಾಸರಿ ಬೆಳವಣಿಗೆ ದರ 8 ಪ್ರತಿಶತ ಇದ್ದು, ಇದರಿಂದ ಜನರ ಕೈಗೆ ಹೆಚ್ಚು ಹಣ ಸೇರುವುದಲ್ಲದೆ, ಬಡತನ ರೇಖೆಗಿಂತ ಕೆಳಗಿರುವವರ ಸಂಖ್ಯೆಯೂ ತೀವ್ರವಾಗಿ ಕಡಿಮೆಯಾಗಿದೆ ಎಂದು ಹೇಳಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications