Get Updates
Get notified of breaking news, exclusive insights, and must-see stories!

Tirupati Tirumala: ತಿರುಪತಿ ಲಡ್ಡು ವಿವಾದದ ನಂತರ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಏನೆಲ್ಲ ಬದಲಾಗಿದೆ ಗೊತ್ತಾ ?

ತಿರುಪತಿ ತಿರುಮಲ ದೇವಸ್ಥಾನದಲ್ಲಿ ಕಳೆದ ಎರಡು ತಿಂಗಳ ಅವಧಿಯಲ್ಲಿ ಹಲವು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ತಿರುಪತಿ ತಿರುಮಲ ದೇವಸ್ಥಾನದ ಪ್ರಸಾದವಾದ ಲಡ್ಡುವಿನಲ್ಲಿ ತುಪ್ಪದೊಂದಿಗೆ ಹಸುವಿನ ಕೊಬ್ಬು, ಹಂದಿಯ ಕೊಬ್ಬಿನ ಅಂಶ ಹಾಗೂ ಮೀನಿನ ಎಣ್ಣೆಯನ್ನು ಬಳಸಲಾಗಿತ್ತು ಎನ್ನುವ ಗಂಭೀರ ಆರೋಪ ಕೇಳಿ ಬಂದಿತ್ತು. ಈ ಬೆಳವಣಿಗೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್‌ ರೆಡ್ಡಿ ಅವರ ಆಡಳಿತ ಅವಧಿಯಲ್ಲಿ ನಡೆದಿತ್ತು ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ದೂರಿದ್ದರು. ಈ ವಿಷಯಕ್ಕೆ ಭಾರತದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹಲವು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ.

ವಿಶ್ವದ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾಗಿರುವ ಹಾಗೂ ಕೋಟ್ಯಾಂತರ ಭಕ್ತ ಸಮೂಹವನ್ನು ಹೊಂದಿರುವ ದೇವಸ್ಥಾನಗಳಲ್ಲಿ ಶ್ರೀ ತಿರುಪತಿ ತಿರುಮಲ ದೇವಸ್ಥಾನವು ಅಗ್ರಪಂಕ್ತಿಯಲ್ಲಿ ಇದೆ. ತಿರುಪತಿ ತಿರುಮಲ ದೇವಸ್ಥಾನವು ಲಡ್ಡುವಿನಿಂದಲೂ ಸಾಕಷ್ಟು ಪ್ರಖ್ಯಾತಿ ಗಳಿಸಿದೆ. ಆದರೆ, ಯಾವಾಗ ಈ ರೀತಿ ಆರೋಪಗಳು ಕೇಳಿ ಬಂತೋ ದೇವಸ್ಥಾನದಲ್ಲಿ ಇನ್ಮುಂದೆ ಈ ರೀತಿಯ ಬೆಳವಣಿಗೆ ನಡೆಯದಂತೆ ಎಚ್ಚರಿಕೆ ವಹಿಸಬೇಕು ಹಾಗೂ ಅಗತ್ಯ ಮುಂಜಾಗ್ರತಾ ಕ್ರಮ ಅನುಸರಿಸಬೇಕು ಎನ್ನುವ ಆಗ್ರಹ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ತಿರುಮಲ ತಿರುಪತಿ ದೇವಸ್ಥಾನಂ ಟ್ರಸ್ಟ್‌ ಹಾಗೂ ಆಂಧ್ರ ಪ್ರದೇಶ ಸರ್ಕಾರವು ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ.

Do you know what has changed in Tirupati Tirumala Temple after the Tirupati Laddu controversy

ಅನ್ಯ ಧರ್ಮೀಯರಿಗೆ ಅವಕಾಶವಿಲ್ಲ: ಇನ್ನು ಈಚೆಗೆ ತಿರುಪತಿ ತಿರುಮಲ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಅದರಂತೆ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಅನ್ಯ ಧರ್ಮೀಯ (ಹಿಂದುವೇತರ) ಉದ್ಯೋಗಿಗಳಿಗೆ ಅವಕಾಶ ನೀಡದೆ ಇರಲು ನಿರ್ಧರಿಸಲಾಗಿದೆ. ಟಿಟಿಡಿ ಅಧ್ಯಕ್ಷ ಬಿ.ಆರ್‌ ನಾಯ್ಡು ಅವರು ಈ ವಿಷಯವನ್ನು ಖಚಿತಪಡಿಸಿದ್ದಾರೆ. ಇದರಿಂದ ಮಂಡಳಿಯಲ್ಲಿ ಕೆಲಸ ಮಾಡುತ್ತಿರುವ ಅಂದಾಜು 300 ಜನ ಹಿಂದೂಯೇತರರು (ವಿಆರ್ಎಸ್) ಸ್ವಯಂ ನಿವೃತ್ತಿ ತೆಗೆದುಕೊಳ್ಳಬೇಕು ಇಲ್ಲವೇ ಬೇರೆ ಇಲಾಖೆಗಳಿಗೆ ವರ್ಗಾವಣೆಯಾಗಬೇಕು ಎಂದು ಸೂಚನೆ ನೀಡಲಾಗಿದೆ.

ನಂದಿನಿ ತುಪ್ಪ ಬಳಕೆ: ತಿರುಪತಿ ತಿರುಮಲ ದೇವಸ್ಥಾನದಲ್ಲಿ ವಿವಿಧ ಸಂಸ್ಥೆಗಳಿಂದ ತುಪ್ಪ ತರಿಸಿಕೊಂಡಿದ್ದರಿಂದ ಗೊಂದಲ ಸೃಷ್ಟಿಯಾಗಿತ್ತು. ಈ ಹಿನ್ನೆಲೆಯಲ್ಲಿ ನಂದಿನಿ ತುಪ್ಪವನ್ನು ಪ್ರದಾನವಾಗಿ ಬಳಸಲು ನಿರ್ಧರಿಸಲಾಗಿದೆ. ತಿರುಪತಿಯಲ್ಲಿ ಹಲವು ವರ್ಷಗಳಿಂದ ನಂದಿನಿ ತುಪ್ಪವನ್ನು ತಿರುಪತಿಯಲ್ಲಿ ಪ್ರಸಾದವಾಗಿ ನೀಡುವ ಲಡ್ಡುವಿನಲ್ಲಿ ಬಳಸಲಾಗುತ್ತಿದೆ. ಅದೇ ಕಾರಣಕ್ಕೆ ಲಡ್ಡುವಿನಲ್ಲಿ ಪರಿಮಳ ಘಮಘಮಿಸುತ್ತಿತ್ತು. ಇದೀಗ ಆ ಪರಿಮಳದ ಘಮಲು ತಿರುಪತಿ ತಿರುಮಲದಲ್ಲಿ ಮತ್ತೆ ಶುರುವಾಗಿದೆ.

Do you know what has changed in Tirupati Tirumala Temple after the Tirupati Laddu controversy

ದೇವಸ್ಥಾನದ ಶುದ್ಧೀಕರಣ: ತಿರುಪತಿ ತಿರುಮಲ ದೇವಸ್ಥಾನದ ಪ್ರಸಾದವಾದ ಲಡ್ಡುವಿನಲ್ಲಿ ಕಲಬೆರಕೆ ತುಪ್ಪವನ್ನು ಬಳಸಲಾಗಿದೆ ಎನ್ನುವ ಆರೋಪ ಕೇಳಿ ಬಂದ ಮೇಲೆ ತಿರುಪತಿ ತಿಮ್ಮಪ್ಪನ ಭಕ್ತಾದಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಹೀಗಾಗಿ, ಆಂಧ್ರ ಪ್ರದೇಶದ ಸರ್ಕಾರವು ತಿರುಪತಿ ತಿರುಮಲ ದೇವಸ್ಥಾನವನ್ನು ಶುದ್ಧೀಕರಣ ಮಾಡಿದೆ. ದೇವಸ್ಥಾನದ ಆವರಣ ಹಾಗೂ ಪ್ರಸಾದ ತಯಾರಾಗುವ ಜಾಗಗಳನ್ನು ಸಂಪೂರ್ಣ ಶುದ್ಧೀಕರಣ ಮಾಡಲಾಗಿದೆ. ಅಲ್ಲದೇ ಹಿಂದೂ ಸಾಂಪ್ರದಾಯದ ಪ್ರಕಾರ ಹಲವು ಕ್ರಮಗಳನ್ನು ಅನುಸರಿಲಾಗಿದೆ.

ಅಲ್ಲದೇ ದೇವಸ್ಥಾನದ ಆವರಣದಲ್ಲಿ ಯಾವುದೇ ತಪ್ಪುಗಳನ್ನು ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+