Maharashtra assembly election 2024 ಮಹಾರಾಷ್ಟ್ರದಲ್ಲಿ ಇನ್ಮುಂದೆ ಹಸು ರಾಜ್ಯಮಾತೆ, ಯಾಕೆ ಗೊತ್ತಾ

ಮಹಾರಾಷ್ಟ್ರ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್‌ ಪಕ್ಷಗಳು ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿವೆ. ದೇಶದ ಆರ್ಥಿಕತೆಗೆ ಮಹತ್ವದ ಕೊಡುಗೆಯನ್ನು ಮಹಾರಾಷ್ಟ್ರ ನೀಡುತ್ತದೆ. ಅಲ್ಲದೇ ಪ್ರಮುಖ ರಾಜ್ಯಗಳಲ್ಲಿ ಮಹಾರಾಷ್ಟ್ರವೂ ಒಂದಾಗಿದ್ದು, ಹಲವು ಕಾರಣಗಳಿಂದ ಈ ರಾಜ್ಯ ರಾಜಕೀಯದಲ್ಲಿ ಪ್ರಮುಖವಾಗಿದೆ. ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರವು ಗೋವು ರಾಜ್ಯಮಾತೆ ಎಂದು ಘೋಷಿಸಿದೆ. ಕಳೆದ ಬಾರಿ ಹೀನಾಯ ಸೋಲು ಕಂಡಿದ್ದ ಬಿಜೆಪಿ ಚುನಾವಣೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನೂ ಮಾಡಿಕೊಳ್ಳುತ್ತಿದೆ.

ಕಳೆದ ಬಾರಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಬಹುದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದರ ಹೊರತಾಗಿಯೂ ಏಕಾಂಗಿಯಾಗಿ ಅಧಿಕಾರದ ಗದ್ದುಗೆಯನ್ನು ತಲುಪಲು ಸಾಧ್ಯವಾಗಿರಲಿಲ್ಲ. ಇದೀಗ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಹೇಗಾದರೂ ಮಾಡಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎನ್ನುವ ನಿಟ್ಟಿನಲ್ಲಿ ಭರ್ಜರಿ ಸಿದ್ಧತೆ ನಡೆಸಿದೆ. ಚುನಾವಣಾ ದಿನಾಂಕ ಘೋಷಣೆಯಾಗುವುದಕ್ಕೆ ಕೆಲವೇ ದಿನಗಳು ಬಾಕಿ ಇರುವ ನಡುವೆ ಮಹಾರಾಷ್ಟ್ರ ಸರ್ಕಾರ ಗೋವನ್ನು ರಾಜ್ಯಮಾತೆ ಎಂದು ಸೋಮವಾರ ಘೋಷಿಸಿದೆ. ಅಲ್ಲದೇ ರಾಜ್ಯದಲ್ಲಿ ಸ್ಥಳೀಯ ಹಸುಗಳ ಸಂಖ್ಯೆ ಕಡಿಮೆಯಾಗಿರುವುದಕ್ಕೆ ಕಳವಳವನ್ನೂ ವ್ಯಕ್ತಪಡಿಸಿದೆ.

Do you know why the cow is the Rajyamata in Maharashtra

ಮಹಾರಾಷ್ಟ್ರದ ಏಕನಾಥ ಶಿಂಧೆ ಅವರ ನೇತೃತ್ವದ ಸಮ್ಮಿಶ್ರ ಸರ್ಕಾರವು ಸೋಮವಾರ ಈ ಬಗ್ಗೆ ಆದೇಶ ಹೊರಡಿಸಿದ್ದು, ಭಾರತೀಯ ಸಂಸ್ಕೃತಿಯಲ್ಲಿ ಗೋವಿಗೆ ವಿಶೇಷವಾದ ಸ್ಥಾನವಿದೆ. ಪುರಾತನ ಕಾಲದಿಂದಲೂ ನಮ್ಮ ಪೂರ್ವಜನರು ಗೋವಿಗೆ ವಿಶೇಷ ಸ್ಥಾನವನ್ನು ನೀಡಿದ್ದಾರೆ. ಅಲ್ಲದೇ ಆಧ್ಯಾತ್ಮಿಕ ಹಾಗೂ ವೈಜ್ಞಾನಿಕವಾಗಿಯೂ ಗೋವಿಗೆ ವಿಶೇಷ ಸ್ಥಾನವಿದೆ. ಹೀಗಾಗಿ, ಗೋವಿಗೆ ರಾಜ್ಯದಲ್ಲಿ ಗೋಮಾತೆ ಎಂದು ಘೋಷಿಸಿರುವುದಾಗಿ ಮಹಾರಾಷ್ಟ್ರ ಸರ್ಕಾರ ತನ್ನ ಆದೇಶದಲ್ಲಿ ಹೇಳಿಕೊಂಡಿದೆ.

ದೇಸಿ ಹಸು ಸಂಖ್ಯೆ ಇಳಿಕೆ; ಕಳವಳ: ಭಾರತದಲ್ಲಿ ವಿವಿಧ ಮಾದರಿಯ ಹಸುಗಳು ಇವೆ. ಆದರೆ, ಮಹಾರಾಷ್ಟ್ರದಲ್ಲಿ ದೇಸಿ ಹಸುಗಳ ಸಂಖ್ಯೆ ಇತ್ತೀಚಿನ ವರ್ಷಗಳಲ್ಲಿ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ ಎಂದು ಮಹಾರಾಷ್ಟ್ರ ಸರ್ಕಾರವು ಕಳವಳ ವ್ಯಕ್ತಪಡಿಸಿದೆ. ಕೃಷಿಯಲ್ಲಿ ಹಸು ಹಾಗೂ ಹಸುವಿನ ಗೊಬ್ಬರವನ್ನು ಬಳಸಿಕೊಳ್ಳಬೇಕು. ಹಸುವಿನ ಉತ್ಪನ್ನಗಳು (ಹಾಲು, ಮೊಸರು, ಮಜ್ಜಿಗೆ, ತುಪ್ಪ ಹಾಗೂ ಸಗಣಿ, ಗೊಬ್ಬರ ) ಸಾಮಾಜಿಕ ಮತ್ತು ಆರ್ಥಿಕವಾಗಿ ಮಾತ್ರವಲ್ಲದೆ. ಧಾರ್ಮಿಕ ಹಾಗೂ ಸಾಂಸ್ಕೃತಿಕವಾಗಿಯೂ ಪ್ರಮುಖ್ಯತೆ ಪಡೆದಿವೆ. ಹಸುಗಳನ್ನು ಸಾಕುವುದಕ್ಕೆ ನಮ್ಮ ಸರ್ಕಾರವು (ಮಹಾರಾಷ್ಟ್ರ ಸಮ್ಮಿಶ್ರ ಸರ್ಕಾರ) ಪ್ರೋತ್ಸಾಹ ನೀಡುತ್ತಿದೆ ಎಂದು ಮಹಾರಾಷ್ಟ್ರ ಸರ್ಕಾರವು ಹೇಳಿದೆ.

ಚುನಾವಣೆ ಬೆನ್ನಲ್ಲೇ ಘೋಷಣೆ: ಮಹಾರಾಷ್ಟ್ರ ಚುನಾವಣೆ ದಿನಾಂಕ (ಘೋಷಣೆ) ಸಮೀಪಿಸುತ್ತಿದೆ. ಕಳೆದ ಬಾರಿ ನಡೆದ ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿಯು 105 ಸ್ಥಾನಗಳನ್ನು ಗೆದ್ದಿತ್ತು. ಆದರೆ, ಅದಾದ ನಂತರ ಮಹಾರಾಷ್ಟ್ರದಲ್ಲಿ ಬಿಜೆಪಿ ನಿರೀಕ್ಷಿತ ಸಾಧನೆ ಮಾಡಿಲ್ಲ.ಈ ಬಾರಿಯ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ನಿರೀಕ್ಷಿತ ಸಾಧನೆ ಮಾಡಿರಲಿಲ್ಲ. ಹೀಗಾಗಿ, ಈ ಬಾರಿ ಅತ್ಯಂತ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಬಿಜೆಪಿಯೊಂದಿಗೆ ಆಡಳಿತರೂಢ ಹಾಗೂ ಸಮ್ಮಿಶ್ರ ಸರ್ಕಾರದ ಭಾಗವಾಗಿರುವ ಶಿವಸೇನೆ (ಏಕನಾಥ ಶಿಂಧೆ ಬಣ) ಹಾಗೂ ಎನ್‌ಸಿಪಿ (ಶರದ್‌ ಚಂದ್ರಪವಾರ್‌ ಬಣ)ಯೂ ತಮ್ಮದೇ ಚುನಾವಣಾ ತಂತ್ರವನ್ನು ಅನುಸರಿಸುತ್ತಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+